AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 3rd Test: ಉಳಿದ ಮೂರು ಟೆಸ್ಟ್​ಗಳಿಗೆ ಇಂದು ಭಾರತ ತಂಡ ಪ್ರಕಟ: ಹೊರಬಿತ್ತು ಕೆಲ ಅಚ್ಚರಿ ವಿಚಾರ

India Squad for 3rd Test vs England: ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಶುಕ್ರವಾರ (ಫೆಬ್ರವರಿ 9) ಸಭೆ ಸೇರಿ ಭಾರತ - ಇಂಗ್ಲೆಂಡ್ ಮೂರನೇ ಟೆಸ್ಟ್‌ ಪಂದ್ಯಕ್ಕೆ ಒಂದು ವಾರ ಇರುವಾಗ ತಂಡವನ್ನು ಪ್ರಕಟಿಸಲಿದೆ. ವೈಯಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದ ನಂತರ ಅಂತಿಮ ಮೂರು ಟೆಸ್ಟ್ ಪಂದ್ಯಗಳನ್ನು ಸಹ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬ ವದಂತಿ ಇದೆ.

IND vs ENG 3rd Test: ಉಳಿದ ಮೂರು ಟೆಸ್ಟ್​ಗಳಿಗೆ ಇಂದು ಭಾರತ ತಂಡ ಪ್ರಕಟ: ಹೊರಬಿತ್ತು ಕೆಲ ಅಚ್ಚರಿ ವಿಚಾರ
IND Squad for ENG 3rs Test
Vinay Bhat
|

Updated on:Feb 09, 2024 | 7:34 AM

Share

ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟೆಸ್ಟ್‌ ಪಂದ್ಯದ ದೊಡ್ಡ ಗೆಲುವಿನೊಂದಿಗೆ ಭಾರತ (India vs England) ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1 ರಿಂದ ಸಮಬಲ ಸಾಧಿಸಿದೆ. ಇದೀಗ ಉಭಯ ತಂಡಗಳು ಮೂರನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ. ಫೆಬ್ರವರಿ 15 ಗುರುವಾರದಿಂದ ಇಂಡೋ-ಇಂಗ್ಲೆಂಡ್ ತೃತೀಯ ಟೆಸ್ಟ್ ಕದನ ಶುರುವಾಗಲಿದೆ. ಈ ಪಂದ್ಯಕ್ಕೆ ಕೆಲಸದ ಹೊರೆ ನಿರ್ವಹಣೆಯಿಂದಾಗಿ ಜಸ್ಪ್ರೀತ್ ಬುಮ್ರಾ ವಿಶ್ರಾಂತಿ ಪಡೆಯಬಹುದು ಎಂದು ವರದಿಗಳಿವೆ. ಆದರೆ, ಇತ್ತೀಚಿನ ವರದಿಯ ಪ್ರಕಾರ ಇದು ಸುಳ್ಳು ಸುದ್ದಿ ಎನ್ನಲಾಗಿದೆ.

ಕ್ರಿಕ್‌ಬಜ್‌ನ ವರದಿಯ ಪ್ರಕಾರ, ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಸ್ಪ್ರೀತ್ ಬುಮ್ರಾ ಅವರ ಅತ್ಯುತ್ತಮ ಪ್ರದರ್ಶನದಿಂದಾಗಿ ನಾಯಕ ರೋಹಿತ್ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರರ್ಕರ್ ವೇಗದ ಬೌಲರ್‌ಗೆ ವಿಶ್ರಾಂತಿ ನೀಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ.

ಏಕದಿನ ಸರಣಿಗೆ ಲಂಕಾ ತಂಡ ಪ್ರಕಟ; ಮಾಜಿ ನಾಯಕನನ್ನೇ ಕೈಬಿಟ್ಟ ಮಂಡಳಿ..!

ಇದನ್ನೂ ಓದಿ
Image
ಭಾರತ- ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯ ಯಾವಾಗ?
Image
ಭಾರತದ ವಿಶ್ವಕಪ್ ಫೈನಲ್ ಎದುರಾಳಿ ಆಸ್ಟ್ರೇಲಿಯಾ..!
Image
ಟಿ20 ವಿಶ್ವಕಪ್ ಬಳಿಕ ಐದು ತಂಡಗಳನ್ನು ಎದುರಿಸಲಿದೆ ಟೀಂ ಇಂಡಿಯಾ
Image
ರವೀಂದ್ರ ಜಡೇಜಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟು ಭರ್ತಿ 15 ವರ್ಷ

ಹಿಂದಿನ ವರದಿಗಳ ಪ್ರಕಾರ, ಟೀಮ್ ಮ್ಯಾನೇಜ್‌ಮೆಂಟ್ ಬುಮ್ರಾಗೆ ವಿಶ್ರಾಂತಿ ನೀಡಲು ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ಮೂರನೇ ಟೆಸ್ಟ್‌ನಲ್ಲಿ ಸೇರಿಸಲು ನಿರ್ಧರಿಸಿದೆ, ಬುಮ್ರಾ ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ 58 ಓವರ್‌ಗಳನ್ನು ಬೌಲಿಂಗ್ ಮಾಡಿದ್ದಾರೆ. ತನ್ನ ಪ್ರದರ್ಶನದಿಂದ ಎಲ್ಲರನ್ನೂ ಮೆಚ್ಚಿಸಿದ್ದಾರೆ, ಅವರು ಸರಣಿಯಲ್ಲಿ 15 ವಿಕೆಟ್ ಕಬಳಿಸಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದಾರೆ.

ಜಸ್ಪ್ರೀತ್ ಬುಮ್ರಾ

ಜಸ್ಪ್ರೀತ್ ಬುಮ್ರಾ

ಆದರೆ, ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಇನ್ನೂ ಹೆಸರಿಸಿಲ್ಲ. ಕ್ರಿಕ್‌ಬಜ್‌ನ ವರದಿಯ ಪ್ರಕಾರ, ತಂಡದ ಮ್ಯಾನೇಜ್‌ಮೆಂಟ್ ಶುಕ್ರವಾರ (ಫೆಬ್ರವರಿ 9) ಸಭೆ ಸೇರಿ ಮೂರನೇ ಟೆಸ್ಟ್‌ಗೆ ಒಂದು ವಾರ ಇರುವಾಗ ತಂಡವನ್ನು ಪ್ರಕಟಿಸಲಿದೆ.

ರಾಟ್ ಕೊಹ್ಲಿ ಆಡುವ ಬಗ್ಗೆ ಹೊರಬಿತ್ತು ಬಿಗ್ ಅಪ್​ಡೇಟ್

ವೈಯಕ್ತಿಕ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಮೊದಲ ಎರಡು ಪಂದ್ಯಗಳಿಂದ ಹೊರಗುಳಿದ ನಂತರ ಅಂತಿಮ ಮೂರು ಟೆಸ್ಟ್ ಪಂದ್ಯಗಳನ್ನು ಸಹ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂಬ ವದಂತಿ ಇದೆ. ಒಂದು ವೇಳೆ ಕೊಹ್ಲಿ ಇನ್ನುಳಿದ 3 ಪಂದ್ಯಗಳನ್ನು ಕಳೆದುಕೊಂಡರೆ, ಮಂಡಳಿಯು ತಂಡದಲ್ಲಿ ಸೂಕ್ತ ಬದಲಿ ಆಟಗಾರನನ್ನು ಹುಡುಕಬೇಕಾಗಿದೆ. ಶ್ರೇಯಸ್ ಅಯ್ಯರ್ ಪ್ರಸ್ತುತ ಕಳಪೆ ಫಾರ್ಮ್‌ನಲ್ಲಿರುವ ಕಾರಣ, ನಿಂತು ಆಡುವ ಆಟಗಾರ ಬೇಕು.

ಮತ್ತೊಂದೆಡೆ, ಕೆಎಲ್ ರಾಹುಲ್ ಮತ್ತು ರವೀಂದ್ರ ಜಡೇಜಾ ಕೂಡ ಮಂಡಿರಜ್ಜು ಗಾಯದಿಂದಾಗಿ ಎರಡನೇ ಟೆಸ್ಟ್‌ನಿಂದ ಹೊರಗುಳಿದ ನಂತರ ಮರಳುವ ಸಾಧ್ಯತೆಯಿದೆ. ಜಡೇಜಾ ಚೇತರಿಕೆಗೆ ಕೊಂಚ ಸಮಯ ಬೇಕಾಗಬಹುದು ಎನ್ನಲಾಗಿತ್ತು. ಆದರೆ, 2ನೇ ಮತ್ತು 3ನೇ ಟೆಸ್ಟ್‌ನ ನಡುವೆ ಸುದೀರ್ಘ ಅಂತರವಿರುವುದರಿಂದ, ಆಲ್‌ರೌಂಡರ್ ಸಮಯಕ್ಕೆ ಸರಿಯಾಗಿ ಚೇತರಿಸಿಕೊಳ್ಳಲಿದ್ದಾರಂತೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:32 am, Fri, 9 February 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್