India T20 Squad: ಟೀಮ್ ಇಂಡಿಯಾದಲ್ಲಿ 11 ಬೌಲರ್ಗಳು, 4 ವಿಕೆಟ್ ಕೀಪರ್ಗಳು..!
India squad for west indies: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್
ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಗಾಗಿ (India T20 squad for west indies) ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ಈ ಸರಣಿಯಿಂದ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ಜಸ್ಪ್ರೀತ್ ಬುಮ್ರಾ (Jasprit Bumrah) ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನು ಉಮ್ರಾನ್ ಮಲಿಕ್ (Umran Malik) ಹಾಗೂ ಸಂಜು ಸ್ಯಾಮ್ಸನ್ (Sanju Samson) ಅವರನ್ನು ಕೈ ಬಿಡಲಾಗಿದೆ. ಇದಾಗ್ಯೂ 18 ಸದಸ್ಯರ ಟೀಮ್ ಇಂಡಿಯಾದಲ್ಲಿ ಒಟ್ಟು 11 ಬೌಲರ್ಗಳು ಇರುವುದು ವಿಶೇಷ. ಅಂದರೆ ತಂಡದಲ್ಲಿ ಒಟ್ಟು 6 ಆಲ್ರೌಂಡರ್ಗಳು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಅದರಂತೆ ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ಆಲ್ರೌಂಡರ್ಗಳಾಗಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟ್ಸ್ಮನ್ಗಳಾಗಿ ನಾಲ್ವರು ಆಟಗಾರರು ಸ್ಥಾನ ಪಡೆದಿದ್ದಾರೆ. ಕೆಎಲ್ ರಾಹುಲ್, ರಿಷಭ್ ಪಂತ್, ದಿನೇಶ್ ಕಾರ್ತಿಕ್ ಹಾಗೂ ಇಶಾನ್ ಕಿಶನ್ ಕೀಪರ್ಗಳಾಗಿ ತಂಡದಲ್ಲಿದ್ದಾರೆ.
ಹಾಗೆಯೇ ಬೌಲರ್ಗಳಾಗಿ ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅವೇಶ್ ಖಾನ್ ಹಾಗೂ ಅರ್ಷದೀಪ್ ಸಿಂಗ್ ಕಾಣಿಸಿಕೊಂಡಿದ್ದಾರೆ. 18 ಸದಸ್ಯರ ತಂಡದಲ್ಲಿ 5 ಬೌಲರ್ಗಳಿದ್ದರೆ, 6 ಆಲ್ರೌಂಡರ್ಗಳಿದ್ದಾರೆ. ಅಂದರೆ ಒಟ್ಟು 11 ಬೌಲರ್ಗಳನ್ನು ಆಯ್ಕೆ ಮಾಡುವ ಮೂಲಕ ಈ ಬಾರಿ ಟೀಮ್ ಇಂಡಿಯಾ ಬೌಲಿಂಗ್ ಕಡೆಗೆ ಹೆಚ್ಚಿನ ಒತ್ತು ನೀಡಿರುವುದು ಸ್ಪಷ್ಟ.
ಹೀಗಾಗಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಲ್ಲೂ ಆಲ್ರೌಂಡರ್ಗಳ ಪಟ್ಟಿಯಲ್ಲಿ ಸ್ಪಿನ್ ಮತ್ತು ವೇಗಿಗಳಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಬೌಲಿಂಗ್ ವಿಭಾಗದಲ್ಲಿ ಆಲ್ರೌಂಡರ್ಗಳಿಗೆ ಮಣೆಹಾಕುವುದರಿಂದ ಕೆಳ ಕ್ರಮಾಂಕದವರೆಗೆ ಬ್ಯಾಟ್ಸ್ಮನ್ಗಳನ್ನು ಹೊಂದಬಹುದು. ಇದರಿಂದ ಚೇಸಿಂಗ್ಗೆ ಕೂಡ ಅನುಕೂಲವಾಗಲಿದೆ.
ಇದೀಗ ಟೀಮ್ ಇಂಡಿಯಾ ಆಯ್ಕೆ ಸಮಿತಿಯು ಆಲ್ರೌಂಡರ್ಗಳಿಗೆ ಹೆಚ್ಚಿನ ಮಣೆ ನೀಡುತ್ತಿದ್ದು, ಹೀಗಾಗಿ ಇದೇ ಆಟಗಾರರು ಟಿ20 ವಿಶ್ವಕಪ್ ತಂಡದಲ್ಲೂ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.