AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India squad: ಟಿ20 ವಿಶ್ವಕಪ್​ಗೆ ಭಾರತ ಮಹಿಳಾ ತಂಡ ಪ್ರಕಟ

Women's T20 World Cup 2024: ಯುಎಇನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗಾಗಿ ಪ್ರಕಟಿಸಲಾದ ಭಾರತ ತಂಡದಲ್ಲಿ ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಥಾನ ಪಡೆದಿದ್ದಾರೆ. ಆದರೆ ಈ ಟೂರ್ನಿಗೂ ಮುನ್ನ ಫಿಟ್​ನೆಸ್ ಸಾಬೀತುಪಡಿಸುವಂತೆ ಶ್ರೇಯಾಂಕಾಗೆ ಬಿಸಿಸಿಐ ಸೂಚಿಸಿದೆ. ಏಷ್ಯಾಕಪ್ ವೇಳೆ ಗಾಯಗೊಂಡಿದ್ದ ಕನ್ನಡತಿ ಬಳಿಕ ಟೀಮ್ ಇಂಡಿಯಾ ಪರ ಕಣಕ್ಕಿಳಿದಿರಲಿಲ್ಲ. ಹೀಗಾಗಿ ಟಿ20 ವಿಶ್ವಕಪ್​ಗೂ ಮುನ್ನ ಫಿಟ್​ನೆಸ್ ಸಾಬೀತುಪಡಿಸಲು ಸೂಚಿಸಲಾಗಿದೆ.

India squad: ಟಿ20 ವಿಶ್ವಕಪ್​ಗೆ ಭಾರತ ಮಹಿಳಾ ತಂಡ ಪ್ರಕಟ
Team India
ಝಾಹಿರ್ ಯೂಸುಫ್
|

Updated on:Aug 27, 2024 | 1:19 PM

Share

ಅಕ್ಟೋಬರ್ 3 ರಿಂದ ಶುರುವಾಗಲಿರುವ ಮಹಿಳಾ ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್​ ಕೀಪರ್​ಗಳಾಗಿ ರಿಚಾ ಘೋಷ್ ಹಾಗೂ ಯಾಸ್ತಿಕಾ ಭಾಟಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇನ್ನು ಈ ತಂಡದಲ್ಲಿ ಕರ್ನಾಟಕದ ಯುವ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಸ್ಥಾನ ಪಡೆದಿದ್ದು, ಅದಕ್ಕೂ ಮುನ್ನ ಅವರು ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಇದೆ. ಕಳೆದ ಏಷ್ಯಾಕಪ್ ಟೂರ್ನಿಯ ವೇಳೆ ಶ್ರೇಯಾಂಕಾ ಗಾಯಗೊಂಡಿದ್ದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ಪರ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಫಿಟ್​ನೆಸ್ ಸಾಬೀತುಪಡಿಸಲು ಸೂಚಿಸಲಾಗಿದೆ.

ಹಾಗೆಯೇ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿರುವ ಯಾಸ್ತಿಕಾ ಭಾಟಿಯಾ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಅವರ ಸಹ ಫಿಟ್​ನೆಸ್ ಟೆಸ್ಟ್​ಗೆ ಒಳಗಾಗಬೇಕಿದೆ. ಇನ್ನು ಈ ತಂಡದಲ್ಲಿ ವೇಗಿಗಳಾಗಿ ಪೂಜಾ ವಸ್ತ್ರಾಕರ್ ಹಾಗೂ ರೇಣುಕಾ ಸಿಂಗ್ ಠಾಕೂರ್ ಸ್ಥಾನ ಪಡೆದಿದ್ದು, ಸ್ಪಿನ್ನರ್​ಗಳಾಗಿ ರಾಧಾ ಯಾದವ್ ಮತ್ತು ಆಶಾ ಸೋಭಾನ ಕಾಣಿಸಿಕೊಂಡಿದ್ದಾರೆ.

ತಂಡದಲ್ಲಿ ಆಲ್​ರೌಂಡರ್ ಹಿರಿಯ ಆಲ್​ರೌಂಡರ್ ದೀಪ್ತಿ ಶರ್ಮಾ ಸ್ಥಾನ ಪಡೆದರೆ, ಪ್ರಮುಖ ಬ್ಯಾಟರ್​ಗಳಾಗಿ ಶಫಾಲಿ ವರ್ಮಾ ಹಾಗೂ ಜೆಮಿಮಾ ರೊಡ್ರಿಗಸ್ ಆಯ್ಕೆಯಾಗಿದ್ದಾರೆ. ಅದರಂತೆ ಟಿ20 ವಿಶ್ವಕಪ್​ಗೆ ಭಾರತ ಮಹಿಳಾ ತಂಡ ಈ ಕೆಳಗಿನಂತಿದೆ…

ಭಾರತ ಟಿ20 ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್)*, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ , ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಸೋಭಾನ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್*, ಸಜನಾ ಸಜೀವನ್.

ಮೀಸಲು ಆಟಗಾರ್ತಿಯರು: ಉಮಾ ಚೆಟ್ರಿ, ತನುಜಾ ಕನ್ವರ್ ಮತ್ತು ಸೈಮಾ ಠಾಕೂರ್.

ಟಿ20 ವಿಶ್ವಕಪ್ ಯಾವಾಗ ಶುರು?

ಯುನೈಟೆಡ್ ಅರಬ್ ಎಮಿರೇಟ್ಸ್​ (ಯುಎಇ) ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಅಕ್ಟೋಬರ್ 3 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ್ ಹಾಗೂ ಸ್ಕಾಟ್​ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಭಾರತ ತಂಡವು ಅಕ್ಟೋಬರ್ 4 ರಂದು ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಭಾರತದ ಟಿ20 ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿ:

  1. ಅಕ್ಟೋಬರ್ 4, ಶುಕ್ರವಾರ: ಭಾರತ vs ನ್ಯೂಝಿಲೆಂಡ್, ದುಬೈ
  2. ಅಕ್ಟೋಬರ್ 6, ಭಾನುವಾರ: ಭಾರತ vs ಪಾಕಿಸ್ತಾನ, ದುಬೈ
  3. ಅಕ್ಟೋಬರ್ 9, ಬುಧವಾರ: ಭಾರತ vs ಶ್ರೀಲಂಕಾ, ದುಬೈ
  4. ಅಕ್ಟೋಬರ್ 13, ಭಾನುವಾರ: ಭಾರತ vs ಆಸ್ಟ್ರೇಲಿಯಾ, ಶಾರ್ಜಾ

ಅಕ್ಟೋಬರ್ 17 ರಂದು ಮೊದಲ ಸೆಮಿಫೈನಲ್ ನಡೆಯಲಿದ್ದು, 18 ರಂದು ಎರಡನೇ ಸೆಮಿಫೈನಲ್ ಜರುಗಲಿದೆ. ಹಾಗೆಯೇ ಅಕ್ಟೋಬರ್ 20 ರಂದು ಫೈನಲ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಮಹಿಳಾ ಟಿ20 ವಿಶ್ವಕಪ್ ತಂಡಗಳು:

  • ಗ್ರೂಪ್-A:
  • ಆಸ್ಟ್ರೇಲಿಯಾ
  • ಭಾರತ
  • ನ್ಯೂಝಿಲೆಂಡ್
  • ಪಾಕಿಸ್ತಾನ್
  • ಶ್ರೀಲಂಕಾ.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

  • ಗ್ರೂಪ್-B:
  • ಸೌತ್ ಆಫ್ರಿಕಾ
  • ಇಂಗ್ಲೆಂಡ್
  • ವೆಸ್ಟ್ ಇಂಡೀಸ್
  • ಬಾಂಗ್ಲಾದೇಶ
  • ಸ್ಕಾಟ್ಲೆಂಡ್.

Published On - 12:40 pm, Tue, 27 August 24

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ