AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ ನಾಲ್ವರು ಆಲ್​ರೌಂಡರ್​ಗಳು: ಮೂವರು ವೇಗಿಗಳು

India Squad for World Cup 2023: ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಟೀಮ್ ಇಂಡಿಯಾದಲ್ಲಿ ನಾಲ್ವರು ಆಲ್​ರೌಂಡರ್​ಗಳು: ಮೂವರು ವೇಗಿಗಳು
Team India
TV9 Web
| Edited By: |

Updated on:Sep 05, 2023 | 4:20 PM

Share

ಏಕದಿನ ವಿಶ್ವಕಪ್​ಗಾಗಿ ಭಾರತ ತಂಡವನ್ನು (India Squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಹಾಗೆಯೇ ವಿಕೆಟ್​ ಕೀಪರ್​ಗಳಾಗಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ಏಷ್ಯಾಕಪ್ ತಂಡದಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ ಹಾಗೂ ಪ್ರಸಿದ್ಧ್ ಕೃಷ್ಣ ಅವರನ್ನು ತಂಡದಿಂದ ಕೈ ಬಿಡಲಾಗಿದೆ.  ಹಾಗೆಯೇ ಸಂಜು ಸ್ಯಾಮ್ಸನ್ ಹಾಗೂ ಯುಜ್ವೇಂದ್ರ ಚಹಲ್​ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ವಿಶ್ವಕಪ್​ಗೆ ಆಯ್ಕೆ ಮಾಡಲಾಗಿರುವ 15 ಸದಸ್ಯರಲ್ಲಿ ಪೂರ್ಣ ಪ್ರಮಾಣದ ಬ್ಯಾಟರ್​ಗಳಾಗಿ ನಾಲ್ವರು ಆಯ್ಕೆಯಾಗಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ಗಳಾಗಿ ಇಬ್ಬರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಆಲ್​ರೌಂಡರ್​ಗಳ ಕೋಟಾದಲ್ಲಿ ನಾಲ್ವರು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ವೇಗಿಗಳಾಗಿ ಮೂವರು ಆಯ್ಕೆಯಾದರೆ, ಸ್ಪಿನ್ನರ್ ಸ್ಥಾನದಲ್ಲಿ ಆಯ್ಕೆಯಾಗಿರುವುದು ಏಕೈಕ ಆಟಗಾರ ಎಂಬುದು ವಿಶೇಷ.

ಬ್ಯಾಟರ್​ಗಳು:

ಏಕದಿನ ವಿಶ್ವಕಪ್​ಗೆ ಪರಿಪೂರ್ಣ ಬ್ಯಾಟರ್​ಗಳಾಗಿ ಆಯ್ಕೆಯಾಗಿರುವುದು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್​ಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್.

ಆಲ್​ರೌಂಡರ್​ಗಳು:

ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಹಾಗೂ ಶಾರ್ದೂಲ್ ಠಾಕೂರ್​ ಕಾಣಿಸಿಕೊಂಡಿದ್ದಾರೆ.

ವಿಕೆಟ್ ಕೀಪರ್​ಗಳು:

ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ವಿಕೆಟ್ ಕೀಪರ್​ಗಳಾಗಿ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ವೇಗದ ಬೌಲರ್​ಗಳು:

ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ವೇಗಿಗಳಾಗಿ ತಂಡದಲ್ಲಿದ್ದಾರೆ.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ​ 10 ತಂಡಗಳು ಫೈನಲ್

ಸ್ಪಿನ್ನರ್:

ಏಕದಿನ ವಿಶ್ವಕಪ್​ ತಂಡದಲ್ಲಿ ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಸ್ಥಾನ ಪಡೆದಿರುವುದು ಕುಲ್ದೀಪ್ ಯಾದವ್ ಮಾತ್ರ. ಅದರಂತೆ ಟೀಮ್ ಇಂಡಿಯಾದ 15 ಸದಸ್ಯರ ಬಳಗ ಈ ಕೆಳಗಿನಂತಿದೆ.

ಏಕದಿನ ವಿಶ್ವಕಪ್​ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

Published On - 4:19 pm, Tue, 5 September 23

Follow Us
TV9 Web
TV9 Web

TV9 Kannada

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ