ಏಕದಿನ ವಿಶ್ವಕಪ್ಗಾಗಿ ಭಾರತ ತಂಡವನ್ನು (India Squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ಗಳಾಗಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ಏಷ್ಯಾಕಪ್ ತಂಡದಲ್ಲಿ ಕಾಣಿಸಿಕೊಂಡಿದ್ದ ತಿಲಕ್ ವರ್ಮಾ ಹಾಗೂ ಪ್ರಸಿದ್ಧ್ ಕೃಷ್ಣ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಹಾಗೆಯೇ ಸಂಜು ಸ್ಯಾಮ್ಸನ್ ಹಾಗೂ ಯುಜ್ವೇಂದ್ರ ಚಹಲ್ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ವಿಶ್ವಕಪ್ಗೆ ಆಯ್ಕೆ ಮಾಡಲಾಗಿರುವ 15 ಸದಸ್ಯರಲ್ಲಿ ಪೂರ್ಣ ಪ್ರಮಾಣದ ಬ್ಯಾಟರ್ಗಳಾಗಿ ನಾಲ್ವರು ಆಯ್ಕೆಯಾಗಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್ಮನ್ಗಳಾಗಿ ಇಬ್ಬರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಆಲ್ರೌಂಡರ್ಗಳ ಕೋಟಾದಲ್ಲಿ ನಾಲ್ವರು ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ವೇಗಿಗಳಾಗಿ ಮೂವರು ಆಯ್ಕೆಯಾದರೆ, ಸ್ಪಿನ್ನರ್ ಸ್ಥಾನದಲ್ಲಿ ಆಯ್ಕೆಯಾಗಿರುವುದು ಏಕೈಕ ಆಟಗಾರ ಎಂಬುದು ವಿಶೇಷ.
ಏಕದಿನ ವಿಶ್ವಕಪ್ಗೆ ಪರಿಪೂರ್ಣ ಬ್ಯಾಟರ್ಗಳಾಗಿ ಆಯ್ಕೆಯಾಗಿರುವುದು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್ಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್.
ಟೀಮ್ ಇಂಡಿಯಾದಲ್ಲಿ ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಹಾಗೂ ಶಾರ್ದೂಲ್ ಠಾಕೂರ್ ಕಾಣಿಸಿಕೊಂಡಿದ್ದಾರೆ.
ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ವಿಕೆಟ್ ಕೀಪರ್ಗಳಾಗಿ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ವೇಗಿಗಳಾಗಿ ತಂಡದಲ್ಲಿದ್ದಾರೆ.
ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್ನಲ್ಲಿ ಕಣಕ್ಕಿಳಿಯುವ 10 ತಂಡಗಳು ಫೈನಲ್
ಏಕದಿನ ವಿಶ್ವಕಪ್ ತಂಡದಲ್ಲಿ ಪೂರ್ಣ ಪ್ರಮಾಣದ ಸ್ಪಿನ್ನರ್ ಆಗಿ ಸ್ಥಾನ ಪಡೆದಿರುವುದು ಕುಲ್ದೀಪ್ ಯಾದವ್ ಮಾತ್ರ. ಅದರಂತೆ ಟೀಮ್ ಇಂಡಿಯಾದ 15 ಸದಸ್ಯರ ಬಳಗ ಈ ಕೆಳಗಿನಂತಿದೆ.
ಏಕದಿನ ವಿಶ್ವಕಪ್ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
Published On - 4:19 pm, Tue, 5 September 23