ಏಕದಿನ ವಿಶ್ವಕಪ್ ಭಾರತ ತಂಡದಲ್ಲಿ ಬದಲಾವಣೆ ಸಾಧ್ಯತೆ

| Updated By: ಝಾಹಿರ್ ಯೂಸುಫ್

Updated on: Sep 11, 2023 | 5:45 PM

ODI World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಏಕದಿನ ವಿಶ್ವಕಪ್ ಭಾರತ ತಂಡದಲ್ಲಿ ಬದಲಾವಣೆ ಸಾಧ್ಯತೆ
Team India
Follow us on

ಏಕದಿನ ವಿಶ್ವಕಪ್​ಗಾಗಿ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಬಳಗದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ಶ್ರೇಯಸ್ ಅಯ್ಯರ್ ಇದೀಗ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಇದಾಗ್ಯೂ ಅವರು ಏಷ್ಯಾಕಪ್ ತಂಡದಿಂದ ಹೊರಬಿದ್ದಿಲ್ಲ. ಆದರೆ ಏಕದಿನ ವಿಶ್ವಕಪ್​ಗೂ ಮುನ್ನ ಅವರು ಸಂಪೂರ್ಣ ಚೇತರಿಸಿಕೊಳ್ಳದಿದ್ದರೆ ಟೀಮ್​​ನಿಂದ ಹೊರಬೀಳುವುದು ಖಚಿತ.

ಏಕೆಂದರೆ ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆಡಲಿದೆ. ಈ ಸರಣಿಗೂ ಮುನ್ನ ಶ್ರೇಯಸ್ ಅಯ್ಯರ್ ತಮ್ಮ ಫಿಟ್​ನೆಸ್ ಸಾಬೀತುಪಡಿಸಬೇಕಾಗಿ ಬರಬಹುದು.

ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಸೆಪ್ಟೆಂಬರ್ 22 ರಿಂದ ಶುರುವಾಗಲಿದೆ. 3 ಪಂದ್ಯಗಳ ಈ ಸರಣಿಯು ಸೆಪ್ಟೆಂಬರ್ 27 ರಂದು ಕೊನೆಗೊಳ್ಳಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ ಅಭ್ಯಾಸ ಪಂದ್ಯಗಳನ್ನಾಡಲಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಶ್ರೇಯಸ್ ಅಯ್ಯರ್ ಅವರ ಏಕದಿನ ವಿಶ್ವಕಪ್ ಭವಿಷ್ಯ ಕೂಡ ನಿರ್ಧಾರವಾಗಬಹುದು.

ವಿಶ್ವಕಪ್ ತಂಡದಲ್ಲಿ ಬದಲಾವಣೆಗೆ ಅವಕಾಶ:

ಏಕದಿನ ವಿಶ್ವಕಪ್ ಆರಂಭಕ್ಕೂ ಒಂದು ವಾರ ಮುಂಚಿತವಾಗಿ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಬಹುದು. ಇದಾದ ಬಳಿಕ ಗಾಯದ ಸಮಸ್ಯೆ ಅಥವಾ ಇನ್ನಿತರ ಕಾರಣಗಳಿಗಾಗಿ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾಗುತ್ತದೆ. ಅಲ್ಲದೆ ಈ ರೀತಿಯ ಬದಲಾವಣೆಗೂ ಮುನ್ನ ಐಸಿಸಿಯ ಟೆಕ್ನಿಕಲ್ ಕಮಿಟಿಯ ಅನುಮತಿ ಪಡೆಯಬೇಕು. ಹೀಗಾಗಿ ಅಂತಿಮ ಕ್ಷಣದಲ್ಲಿ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ: Rohit Sharma: ಏಷ್ಯಾಕಪ್​ನಲ್ಲಿ ರೋಹಿತ್ ಶರ್ಮಾ ಸಿಕ್ಸರ್ ಕಿಂಗ್

ಏಕದಿನ ವಿಶ್ವಕಪ್ ಯಾವಾಗ ಶುರು?

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ವಿಶ್ವಕಪ್​ನ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

ಏಕದಿನ ವಿಶ್ವಕಪ್​ಗೆ ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.