AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಿಂದ ವಿಶಾಖಪಟ್ಟಣಕ್ಕೆ ಪಂದ್ಯ ಶಿಫ್ಟ್; ಕೊಹ್ಲಿ ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್

ಭಾರತ-ಶ್ರೀಲಂಕಾ ಸೀಮಿತ ಓವರ್‌ಗಳ ಸರಣಿಯ ಮೊದಲ ಏಕದಿನ ಪಂದ್ಯ ದೆಹಲಿಯಿಂದ ವಿಶಾಖಪಟ್ಟಣಕ್ಕೆ ಸ್ಥಳಾಂತರಗೊಂಡಿದೆ. ನವೀಕರಣ ಕಾಮಗಾರಿ ಹಾಗೂ ಹವಾಮಾನ ಕಾರಣದಿಂದ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ. ವಿಶಾಖಪಟ್ಟಣ ವಿರಾಟ್ ಕೊಹ್ಲಿಗೆ ಅದೃಷ್ಟದ ಮೈದಾನವಾಗಿದ್ದು, ಅಲ್ಲಿ ಅವರು ಭರ್ಜರಿ ದಾಖಲೆ ಹೊಂದಿದ್ದಾರೆ. ಇದರಿಂದ ಅಭಿಮಾನಿಗಳು ಮತ್ತೊಂದು ದೊಡ್ಡ ಇನ್ನಿಂಗ್ಸ್‌ ನಿರೀಕ್ಷೆಯಲ್ಲಿದ್ದಾರೆ. ಸರಣಿಯ ಸಂಪೂರ್ಣ ವೇಳಾಪಟ್ಟಿ ಸಹ ಪ್ರಕಟವಾಗಿದೆ.

ದೆಹಲಿಯಿಂದ ವಿಶಾಖಪಟ್ಟಣಕ್ಕೆ ಪಂದ್ಯ ಶಿಫ್ಟ್; ಕೊಹ್ಲಿ ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Nov 06, 2026 | 6:01 PM

Share

ಮುಂದಿನ ತಿಂಗಳು ಅಂದರೆ ಡಿಸೆಂಬರ್‌ನಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವೆ ಸೀಮಿತ ಓವರ್​ಗಳ ಸರಣಿ ನಡೆಯಲಿದೆ. ಈ ಸರಣಿಯ ವೇಳಾಪಟ್ಟಿ ಕೂಡ ಈಗಾಗಲೇ ಪ್ರಕಟವಾಗಿದೆ. ಆದರೆ ಏಕದಿನ ಸರಣಿಯ ಮೊದಲ ಪಂದ್ಯವನ್ನು ಇದೀಗ ಸ್ಥಳಾಂತರಿಸಿರುವುದಾಗಿ ಬಿಸಿಸಿಐ ಅಧಿಕೃತ ಮಾಹಿತಿ ನೀಡಿದೆ. ಈ ಮೊದಲ ನಿಗದಿಯಾದಂತೆ ಮೊದಲ ಏಕದಿನ ಪಂದ್ಯ ಡಿಸೆಂಬರ್ 13 ರಂದು ದೆಹಲಿಯಲ್ಲಿ ನಡೆಯಬೇಕಿತ್ತು. ಆದರೀಗ ಈ ಪಂದ್ಯವನ್ನು ವಿಶಾಖಪಟ್ಟಣಕ್ಕೆ ಸ್ಥಳಾಂತರಿಸಿರುವುದಾಗಿ ಬಿಸಿಸಿಐ ಮಾಹಿತಿ ನೀಡಿದೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಪಂದ್ಯವನ್ನು ಬೇರೆಡೆ ನಡೆಸುವಂತೆ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಬಿಸಿಸಿಐಗೆ ಮನವಿ ಮಾಡಿತ್ತು. ಇದರ ಜೊತೆಗೆ ದೆಹಲಿಯ ಹವಾಮಾನ ಪರಿಸ್ಥಿತಿಯೂ ಸ್ಥಳ ಬದಲಾವಣೆಗೆ ಪ್ರಮುಖ ಕಾರಣವಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಹೀಗಾಗಿ ಡಿಸೆಂಬರ್ 13ರಂದು ನಡೆಯಲಿರುವ ಮೊದಲ ಏಕದಿನ ಪಂದ್ಯವು ಇದೀಗ ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ವಿಶಾಖಪಟ್ಟಣಕ್ಕೆ ಪಂದ್ಯ ಸ್ಥಳಾಂತರ

ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯ ವಿಶಾಖಪಟ್ಟಣಕ್ಕೆ ಸ್ಥಳಾಂತರವಾಗಿರುವುದು ವಿರಾಟ್ ಕೊಹ್ಲಿ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಇದಕ್ಕೆ ಪ್ರಮುಖ ಕಾರಣ ಈ ಮೈದಾನದಲ್ಲಿ ಕೊಹ್ಲಿ ಹೊಂದಿರುವ ಅದ್ಭುತ ದಾಖಲೆ. ವಿಶಾಖಪಟ್ಟಣದ ಎಸಿಎ-ವಿಡಿಸಿಎ ಕ್ರೀಡಾಂಗಣದಲ್ಲಿ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ ಈವರೆಗೆ ಎಂಟು ಪಂದ್ಯಗಳನ್ನು ಆಡಿದ್ದಾರೆ. ಈ ಪಂದ್ಯಗಳಲ್ಲಿ 108.66ರ ಅತ್ಯುತ್ತಮ ಸರಾಸರಿಯಲ್ಲಿ ಒಟ್ಟು 652 ರನ್ ಗಳಿಸಿದ್ದಾರೆ.

ಇಲ್ಲಿ ಕೊಹ್ಲಿ ಮೂರು ಶತಕ ಹಾಗೂ ಮೂರು ಅರ್ಧಶತಕಗಳನ್ನು ಸಿಡಿಸಿದ್ದಾರೆ. ಹೀಗಾಗಿ ಈ ಮೈದಾನ ಕೊಹ್ಲಿಗೆ ಅದೃಷ್ಟದ ತಾಣ ಎಂದೇ ಹೇಳಬಹುದು. ಅವರ ಬ್ಯಾಟಿಂಗ್ ದಾಖಲೆ ಗಮನಿಸಿದರೆ ವಿಶಾಖಪಟ್ಟಣದಲ್ಲಿ ಮತ್ತೊಂದು ದೊಡ್ಡ ಇನ್ನಿಂಗ್ಸ್ ಮೂಡಿಬರಬಹುದೆಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ. ಇತ್ತೀಚಿನ ದಿನಗಳಲ್ಲಿ ಕೊಹ್ಲಿ ಉತ್ತಮ ಲಯದಲ್ಲಿರುವುದರಿಂದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲೂ ಅವರಿಂದ ಭರ್ಜರಿ ಪ್ರದರ್ಶನವನ್ನು ಅಭಿಮಾನಿಗಳು ಎದುರು ನೋಡುತ್ತಿದ್ದಾರೆ.

ಏಕದಿನ ಹಾಗೂ ಟಿ20 ಸರಣಿಯ ವೇಳಾಪಟ್ಟಿ

  • ಮೊದಲ ಏಕದಿನ ಪಂದ್ಯ: ಡಿಸೆಂಬರ್ 13, ವಿಶಾಖಪಟ್ಟಣ, ಮಧ್ಯಾಹ್ನ 2 ಗಂಟೆ.
  • ಎರಡನೇ ಏಕದಿನ ಪಂದ್ಯ: ಡಿಸೆಂಬರ್ 16, ಬೆಂಗಳೂರು, ಮಧ್ಯಾಹ್ನ 2 ಗಂಟೆ.
  • ಮೂರನೇ ಏಕದಿನ ಪಂದ್ಯ: ಡಿಸೆಂಬರ್ 19, ಅಹಮದಾಬಾದ್, ಮಧ್ಯಾಹ್ನ 2 ಗಂಟೆ.

ಟಿ20 ಸರಣಿ

  • ಮೊದಲ ಟಿ20 ಪಂದ್ಯ: ಡಿಸೆಂಬರ್ 22, ರಾಜ್‌ಕೋಟ್, ಸಂಜೆ 7 ಗಂಟೆ.
  • ಎರಡನೇ ಟಿ20 ಪಂದ್ಯ: ಡಿಸೆಂಬರ್ 24, ಕಟಕ್, ಸಂಜೆ 7 ಗಂಟೆ.
  • ಮೂರನೇ ಟಿ20 ಪಂದ್ಯ: ಡಿಸೆಂಬರ್ 27, ಪುಣೆ,ಸಂಜೆ 7 ಗಂಟೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Fri, 6 November 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More