ರೋಹಿತ್-ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ? ಭಾರತದ ಮುಂದಿನ ಏಕದಿನ ಸರಣಿ ವೇಳಾಪಟ್ಟಿ
ನ್ಯೂಜಿಲೆಂಡ್ ಸರಣಿಯಲ್ಲಿ ರೋಹಿತ್-ಕೊಹ್ಲಿ ಪ್ರದರ್ಶನ ನಿರಾಶಾದಾಯಕವಾಗಿತ್ತು, ಅವರ ಮರಳುವಿಕೆಗಾಗಿ ಅಭಿಮಾನಿಗಳು ಕಾತರಿಸಿದ್ದಾರೆ. ಡಿಸೆಂಬರ್‌ನಲ್ಲಿ ನಡೆಯುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಇಬ್ಬರೂ ಆಡುವ ನಿರೀಕ್ಷೆಯಿದೆ. ಇದು ಮುಂಬರುವ ಏಕದಿನ ವಿಶ್ವಕಪ್‌ಗೆ ತಂಡದ ಸಿದ್ಧತೆಗೆ ನಿರ್ಣಾಯಕ. ಭಾರತ-ಶ್ರೀಲಂಕಾ ಸರಣಿ ತಂಡದ ಪ್ರಕಟಣೆ ಇನ್ನೂ ಬಾಕಿ ಇದ್ದು, ಅವರ ಸೇರ್ಪಡೆ ಮುಖ್ಯವಾಗಿದೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯಗೊಂಡಿದ್ದು, ಭಾರತ 3-1 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ. ಇದೀಗ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಆದಾಗ್ಯೂ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಇಬ್ಬರು ಅನುಭವಿ ಬ್ಯಾಟರ್ಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಪ್ರದರ್ಶನ ಅಷ್ಟೇನೂ ಉತ್ತಮವಾಗಿರಲಿಲ್ಲ. ಹೀಗಾಗಿ ಇವರಿಬ್ಬರ ಅಭಿಮಾನಿಗಳಿಗೆ ನಿರಾಶೆ ಎದುರಾಗಿತ್ತು. ಆದ್ದರಿಂದ ಮುಂದಿನ ಸರಣಿಯಲ್ಲಿ ಇವರಿಬ್ಬರ ಆಟ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಹಾಗಿದ್ದರೆ, ಇವರಿಬ್ಬರು ಮತ್ತೆ ಕಣಕ್ಕಿಳಿಯುವುದು ಯಾವಾಗ ಎಂಬುದನ್ನು ನೋಡುವುದಾದರೆ..
ಡಿಸೆಂಬರ್‌ನಲ್ಲಿ ಭಾರತ-ಶ್ರೀಲಂಕಾ ಏಕದಿನ ಸರಣಿ
ಮುಂದಿನ ತಿಂಗಳು ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲಿದೆ. ಈ ಸರಣಿಯಲ್ಲಿ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿಯುವ ನಿರೀಕ್ಷೆಯೂ ಇದೆ. ಶ್ರೀಲಂಕಾ ತಂಡ ಮುಂದಿನ ತಿಂಗಳು ಅಂದರೆ ಡಿಸೆಂಬರ್‌ನಲ್ಲಿ ಭಾರತ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದ ವೇಳೆ ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲ ಪಂದ್ಯ ಡಿಸೆಂಬರ್ 13ರಂದು ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಎರಡನೇ ಪಂದ್ಯ ಡಿಸೆಂಬರ್ 16ರಂದು ಬೆಂಗಳೂರಿನಲ್ಲಿ ಆಯೋಜನೆಯಾಗಿದೆ. ಮೂರನೇ ಹಾಗೂ ಅಂತಿಮ ಪಂದ್ಯ ಅಹಮದಾಬಾದ್‌ನಲ್ಲಿ ನಡೆಯಲಿದೆ. ಈ ಸರಣಿಯೊಂದಿಗೆ 2026ರಲ್ಲಿ ಭಾರತ ತಂಡದ ಏಕದಿನ ಪಂದ್ಯಗಳ ಅಭಿಯಾನ ಅಂತ್ಯಗೊಳ್ಳಲಿದೆ. ಇದಾದ ಬಳಿಕ ಜನವರಿಯಲ್ಲಿ ಜಿಂಬಾಬ್ವೆ ವಿರುದ್ಧ ಭಾರತ ತಂಡ ಏಕದಿನ ಸರಣಿ ಆಡಲಿದೆ.
ಈ ಸರಣಿಗೆ ತಂಡ ಪ್ರಕಟವಾಗಿಲ್ಲ
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿಯುತ್ತಿಲ್ಲ. ಶುಭಮನ್ ಗಿಲ್ ನಾಯಕತ್ವದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. ಆದರೆ ಡಿಸೆಂಬರ್‌ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ ಮತ್ತು ರೋಹಿತ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನೂ ಈ ಸರಣಿಗೆ ಭಾರತ ತಂಡವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ. ಹೀಗಾಗಿ ತಂಡದಲ್ಲಿ ಯಾವೆಲ್ಲ ಆಟಗಾರರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ. ವಿಶೇಷವಾಗಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ತಂಡಕ್ಕೆ ಮರಳುತ್ತಾರಾ ಎಂಬುದರ ಮೇಲೆ ಅಭಿಮಾನಿಗಳ ಗಮನ ನೆಟ್ಟಿದೆ.
ಏಕದಿನ ವಿಶ್ವಕಪ್ ಮೇಲೆ ಟೀಂ ಇಂಡಿಯಾ ಕಣ್ಣು
ಮುಂದಿನ ವರ್ಷ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಈ ಮಹತ್ವದ ಟೂರ್ನಿಗೆ ಈಗಿನಿಂದಲೇ ಭಾರತ ತಂಡ ಸಿದ್ಧತೆ ಆರಂಭಿಸಿದೆ. ವಿಶ್ವಕಪ್‌ಗೆ ಹೆಚ್ಚು ಸಮಯ ಉಳಿದಿಲ್ಲದ ಕಾರಣ ತಂಡದ ಸಂಯೋಜನೆ, ಆಟಗಾರರ ಫಾರ್ಮ್ ಹಾಗೂ ಸರಿಯಾದ ಆಡುವ ಬಳಗವನ್ನು ಕಂಡುಕೊಳ್ಳಲು ಟೀಮ್ ಮ್ಯಾನೇಜ್‌ಮೆಂಟ್ ಹೆಚ್ಚಿನ ಒತ್ತು ನೀಡುತ್ತಿದೆ.
ಬೇ ಓವಲ್‌ನಲ್ಲಿ ಟೀಂ ಇಂಡಿಯಾದ ವಿಜಯೋತ್ಸವ: ಏಕದಿನ ಸರಣಿ ಗೆದ್ದು ಬೀಗಿದ ಭಾರತ
ಇದೇ ಕಾರಣಕ್ಕೆ ಭಾರತ ತಂಡ ಸತತವಾಗಿ ಏಕದಿನ ಪಂದ್ಯಗಳನ್ನು ಆಡುತ್ತಿದೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೂ ವಿಶ್ವಕಪ್‌ನಲ್ಲಿ ಅವಕಾಶ ಸಿಗಲಿದೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಸ್ಪಷ್ಟತೆ ಇಲ್ಲ. ಮುಂಬರುವ ಸರಣಿಗಳಲ್ಲಿ ಆಟಗಾರರು ನೀಡುವ ಪ್ರದರ್ಶನವೇ ವಿಶ್ವಕಪ್ ತಂಡದಲ್ಲಿ ಅವರ ಸ್ಥಾನವನ್ನು ನಿರ್ಧರಿಸುವ ಸಾಧ್ಯತೆಯಿದೆ.
