AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಟಿಕೆಟ್ ಖರೀದಿಸಬೇಕಿಲ್ಲ; ಅಭಿಮಾನಿಗಳಿಗೆ ಉಚಿತ ಪ್ರವೇಶ

India Sri Lanka Test Series 2026:ಭಾರತ ಮತ್ತು ಶ್ರೀಲಂಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಗಾಲೆಯಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಕೊಲಂಬೊದಲ್ಲಿ ಎರಡನೇ ಪಂದ್ಯ ನಡೆಯಲಿದೆ. ಕ್ರೀಡಾಂಗಣಕ್ಕೆ ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ (SLC) ಅಭಿಮಾನಿಗಳಿಗೆ ಉಚಿತ ಪ್ರವೇಶವನ್ನು ನೀಡಿದೆ. ಟಿಕೆಟ್ ಖರೀದಿಯಿಲ್ಲದೆ ವಿಶ್ವ ದರ್ಜೆಯ ಕ್ರಿಕೆಟ್ ವೀಕ್ಷಿಸಲು ಇದು ಉತ್ತಮ ಅವಕಾಶ.

IND vs SL: ಟಿಕೆಟ್ ಖರೀದಿಸಬೇಕಿಲ್ಲ; ಅಭಿಮಾನಿಗಳಿಗೆ ಉಚಿತ ಪ್ರವೇಶ
Ind Vs Sl
ಪೃಥ್ವಿಶಂಕರ
|

Updated on:Aug 14, 2026 | 5:01 PM

Share

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ ಆಗಸ್ಟ್ 15 ರಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಗಾಲೆಯಲ್ಲಿ ನಡೆದರೆ, ಎರಡನೇ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಪ್ರೇಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸುವ ಸಲುವಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿ ಪಂದ್ಯವನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳಿಗೆ ಉಚಿತ ಪ್ರವೇಶ ನೀಡಿದೆ. ಅಂದರೆ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಬರುವ ಪ್ರೇಕ್ಷಕರು ಯಾವುದೇ ಟಿಕೆಟ್ ಖರೀದಿಸುವ ಅಗತ್ಯವಿರುವುದಿಲ್ಲ.

ಮೇಲೆ ಹೇಳಿದಂತೆ ಭಾರತ ಮತ್ತು ಶ್ರೀಲಂಕಾ ಟೆಸ್ಟ್ ಸರಣಿಯ ಮೊದಲ ಪಂದ್ಯ ಗಾಲೆ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಆಗಸ್ಟ್ 15 ರಿಂದ ಆಗಸ್ಟ್ 19 ರವರೆಗೆ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 23 ರಿಂದ ಆಗಸ್ಟ್ 27 ರವರೆಗೆ ಕೊಲಂಬೊದ ಆರ್ ಎಸ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಸುಮಾರು ನಾಲ್ಕೂವರೆ ವರ್ಷಗಳ ನಂತರ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಸರಣಿ ಇದಾಗಿದ್ದು, 2017 ರ ನಂತರ ಶ್ರೀಲಂಕಾ ನೆಲದಲ್ಲಿ ಮೊದಲ ಟೆಸ್ಟ್ ಪಂದ್ಯವಾಗಿದೆ.

ಪ್ರೇಕ್ಷಕರಿಗೆ ಉಚಿತ ಪ್ರವೇಶ

ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಹೇಳಿಕೆ ಬಿಡುಗಡೆ ಮಾಡಿದ್ದು, ‘ಶ್ರೀಲಂಕಾ ಮತ್ತು ಭಾರತ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಪ್ರೇಕ್ಷಕರಿಗೆ ಉಚಿತ ಪ್ರವೇಶ ನೀಡಲಾಗುತ್ತಿದೆ. ಇದು ಕ್ರಿಕೆಟ್ ಅಭಿಮಾನಿಗಳಿಗೆ ವಿಶ್ವ ದರ್ಜೆಯ ಟೆಸ್ಟ್ ಕ್ರಿಕೆಟ್ ಅನ್ನು ವೀಕ್ಷಿಸಲು ಉತ್ತಮ ಅವಕಾಶವನ್ನು ನೀಡುತ್ತದೆ. ಹೀಗಾಗಿ ಈ ಉಪಕ್ರಮದ ಲಾಭವನ್ನು ಪಡೆಯಲು ಮತ್ತು ಶ್ರೀಲಂಕಾ ಮತ್ತು ಭಾರತ ನಡುವಿನ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನ ರೋಮಾಂಚನವನ್ನು ಅನುಭವಿಸಲು ದೇಶಾದ್ಯಂತದ ಕ್ರಿಕೆಟ್ ಅಭಿಮಾನಿಗಳು, ಯುವ ಉದಯೋನ್ಮುಖ ಕ್ರಿಕೆಟಿಗರು, ಕುಟುಂಬಗಳು ಮತ್ತು ಕ್ರೀಡಾ ಉತ್ಸಾಹಿಗಳನ್ನು ಶ್ರೀಲಂಕಾ ಕ್ರಿಕೆಟ್ ಆಹ್ವಾನಿಸುತ್ತದೆ’ ಎಂದಿದೆ.

IND vs SL: ಭಾರತ- ಲಂಕಾ ಮೊದಲ ಟೆಸ್ಟ್ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಯಾವಾಗ ಆರಂಭ?

ಖಾಲಿ ಕ್ರೀಡಾಂಗಣಗಳಲ್ಲಿ ಪಂದ್ಯ

ಕಳೆದ ಕೆಲವು ವರ್ಷಗಳಿಂದ ಶ್ರೀಲಂಕಾದಲ್ಲಿ ಟೆಸ್ಟ್ ಕ್ರಿಕೆಟ್ ಪ್ರೇಕ್ಷಕರನ್ನು ಆಕರ್ಷಿಸಲು ಕಷ್ಟಪಡುತ್ತಿದೆ. ಟೀಂ ಇಂಡಿಯಾ ಈ ಹಿಂದೆಯೂ ಸಹ ಖಾಲಿ ಕ್ರೀಡಾಂಗಣಗಳಲ್ಲಿ ಪಂದ್ಯಗಳನ್ನು ಆಡಿತ್ತು. ಹೀಗಾಗಿ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಮೈದಾನಕ್ಕೆ ಬರುವ ಅಭಿಮಾನಿಗಳ ಸಂಖ್ಯೆ ಕಡಿಮೆಯಾಗಿರುವುದನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೆ, ಭಾರತ ಮತ್ತು ಶ್ರೀಲಂಕಾ ನಡುವೆ ಕೇವಲ ಎರಡು ಟೆಸ್ಟ್ ಪಂದ್ಯಗಳು ನಡೆಯುವುದರಿಂದ ಟೀಂ ಇಂಡಿಯಾ ಮತ್ತೆ ಆಡುವುದನ್ನು ನೋಡಲು ಅಭಿಮಾನಿಗಳು ಸಾಕಷ್ಟು ಸಮಯ ಕಾಯಬೇಕಾಗುತ್ತದೆ. ಆದ್ದರಿಂದ ಉಭಯ ದೇಶಗಳ ಅಭಿಮಾನಿಗಳು ಕ್ರೀಡಾಂಗಣದಲ್ಲಿ ತಮ್ಮ ತಂಡಗಳ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Fri, 14 August 26

Follow Us