AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಭಾರತ- ಶ್ರೀಲಂಕಾ ಟೆಸ್ಟ್ ಸರಣಿ; ಅಭಿಮಾನಿಗಳಿಗೆ ಬಂಪರ್ ಆಫರ್

India vs Sri Lanka Test Series: ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆಗಸ್ಟ್ 15 ರಂದು ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಇದು ಉಭಯ ತಂಡಗಳಿಗೂ ನಿರ್ಣಾಯಕ. 9 ವರ್ಷಗಳ ನಂತರ ಶ್ರೀಲಂಕಾಕ್ಕೆ ಟೀಂ ಇಂಡಿಯಾ ಭೇಟಿ ನೀಡಿದ್ದು, ಈ ಸರಣಿಯನ್ನು ವಿಶೇಷವಾಗಿಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಎರಡೂ ಟೆಸ್ಟ್ ಪಂದ್ಯಗಳಿಗೆ ಅಭಿಮಾನಿಗಳಿಗೆ ಉಚಿತ ಪ್ರವೇಶ ಘೋಷಿಸಿದೆ. ಇದು ಪ್ರೇಕ್ಷಕರನ್ನು ಕ್ರೀಡಾಂಗಣಕ್ಕೆ ಆಕರ್ಷಿಸಲು ಉತ್ತಮ ಅವಕಾಶ.

IND vs SL: ಭಾರತ- ಶ್ರೀಲಂಕಾ ಟೆಸ್ಟ್ ಸರಣಿ; ಅಭಿಮಾನಿಗಳಿಗೆ ಬಂಪರ್ ಆಫರ್
Ind Vs Sl
ಪೃಥ್ವಿಶಂಕರ
|

Updated on:Aug 07, 2026 | 7:46 PM

Share

ಭಾರತ ಮತ್ತು ಶ್ರೀಲಂಕಾ (India vs Sri Lanka) ನಡುವಿನ ಟೆಸ್ಟ್ ಸರಣಿ ಆಗಸ್ಟ್ 15 ರಂದು ಆರಂಭವಾಗಲಿದೆ. ಈ ಸರಣಿಯಲ್ಲಿ ಎರಡು ಟೆಸ್ಟ್ ಪಂದ್ಯಗಳು ನಡೆಯಲಿವೆ. ಒಂಬತ್ತು ವರ್ಷಗಳ ನಂತರ ಈ ಸರಣಿಗಾಗಿ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸ ಮಾಡಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final)​ ರೇಸ್​ನಲ್ಲಿ ಜೀವಂತವಾಗಿರಲು ಉಭಯ ತಂಡಗಳಿಗೂ ಈ ಸರಣಿ ಗೆಲುವು ಅತ್ಯವಶ್ಯಕವಾಗಿದೆ. ಹೀಗಾಗಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನೀಡುವುದು ನಿಶ್ಚಿತ. ಇದನ್ನು ಗಮನದಲ್ಲಿಟ್ಟುಕೊಂಡು, ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಭಿಮಾನಿಗಳಿಗೆ ಬಂಪರ್ ಉಡುಗೊರೆ ನೀಡಿದೆ. ಅದರಂತೆ ಉಭಯ ತಂಡಗಳ ನಡುವೆ ನಡೆಯುವ ಈ ಎರಡೂ ಟೆಸ್ಟ್ ಪಂದ್ಯಗಳಿಗೆ ಪ್ರೇಕ್ಷಕರಿಗೆ ಕ್ರೀಡಾಂಗಣ ಪ್ರವೇಶವನ್ನು ಉಚಿತಗೊಳಿಸಿದೆ.

ಎರಡೂ ಟೆಸ್ಟ್ ಪಂದ್ಯಗಳಿಗೆ ಉಚಿತ ಪ್ರವೇಶ

ಭಾರತ ಮತ್ತು ಶ್ರೀಲಂಕಾ ಟೆಸ್ಟ್ ಸರಣಿಯ ಮೊದಲ ಪಂದ್ಯ ಗಾಲೆ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಆಗಸ್ಟ್ 15 ರಿಂದ ಆಗಸ್ಟ್ 19 ರವರೆಗೆ ನಡೆಯಲಿದೆ. ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 23 ರಿಂದ ಆಗಸ್ಟ್ 27 ರವರೆಗೆ ಕೊಲಂಬೊದ ಆರ್ ಎಸ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಸುಮಾರು ನಾಲ್ಕೂವರೆ ವರ್ಷಗಳ ನಂತರ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಸರಣಿ ಇದಾಗಿದ್ದು, 2017 ರ ನಂತರ ಶ್ರೀಲಂಕಾ ನೆಲದಲ್ಲಿ ಮೊದಲ ಟೆಸ್ಟ್ ಪಂದ್ಯವಾಗಿದೆ.

ಈ ಸಂದರ್ಭವನ್ನು ವಿಶೇಷವಾಗಿಸಲು ಮತ್ತು ಹೆಚ್ಚಿನ ಪ್ರೇಕ್ಷಕರನ್ನು ಕ್ರೀಡಾಂಗಣಕ್ಕೆ ಆಕರ್ಷಿಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಎರಡೂ ಟೆಸ್ಟ್ ಪಂದ್ಯಗಳಿಗೆ ಉಚಿತ ಪ್ರವೇಶವನ್ನು ಘೋಷಿಸಿದೆ. ಟೆಸ್ಟ್ ಪಂದ್ಯವನ್ನು ವೀಕ್ಷಿಸಲು ಮೈದಾನಕ್ಕೆ ಬರುವ ಅಭಿಮಾನಿಗಳ ಸಂಖ್ಯೆ ಕಡಿಮೆಯಾಗಿರುವುದನ್ನು ಪರಿಗಣಿಸಿ ಈ ನಿರ್ಧಾರ ಮಹತ್ವದ್ದಾಗಿದೆ. ಇದಲ್ಲದೆ, ಭಾರತ ಮತ್ತು ಶ್ರೀಲಂಕಾ ನಡುವೆ ಕೇವಲ ಎರಡು ಟೆಸ್ಟ್ ಪಂದ್ಯಗಳು ನಡೆಯುವುದರಿಂದ ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಮತ್ತೆ ಆಡುವುದನ್ನು ನೋಡಲು ಅವಕಾಶವಿರುವುದಿಲ್ಲ. ಹೀಗಾಗಿ ಉಭಯ ದೇಶಗಳ ಅಭಿಮಾನಿಗಳು ಕ್ರೀಡಾಂಗಣದಲ್ಲಿ ತಮ್ಮ ತಂಡಗಳ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.

IND vs SL: ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ಟೀಂ ಇಂಡಿಯಾಕ್ಕಾಗುವ ಲಾಭವೇನು?

ಅತ್ಯಂದ ಮಹತ್ವದ ಸರಣಿ

ಮೇಲೆ ಹೇಳಿದಂತೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗಾಗಿ ಎರಡೂ ತಂಡಗಳಿಗೆ ಇದು ನಿರ್ಣಾಯಕವಾಗಿದೆ. ಭಾರತ ಮತ್ತು ಶ್ರೀಲಂಕಾ ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ಐದು ಮತ್ತು ಆರನೇ ಸ್ಥಾನದಲ್ಲಿವೆ. ಟೀಂ ಇಂಡಿಯಾ ಶೇ. 48.15 ರ ಗೆಲುವಿನ ಶೇಕಡಾವಾರು ಹೊಂದಿದ್ದರೆ, ಶ್ರೀಲಂಕಾ 41.67 ರ ಗೆಲುವಿನ ಶೇಕಡಾವಾರು ಹೊಂದಿದೆ. ಆದಾಗ್ಯೂ ಶ್ರೀಲಂಕಾ ಈ ಸರಣಿಯನ್ನು ತವರಿನ ಲಾಭವನ್ನು ಪಡೆದುಕೊಳ್ಳಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 pm, Fri, 7 August 26

Follow Us
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್