AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕೊಲಂಬೊದಲ್ಲಿ ಟೀಂ ಇಂಡಿಯಾ ದಾಖಲೆ ಹೇಗಿದೆ?

India vs Sri Lanka 2nd Test: ಶ್ರೀಲಂಕಾ ವಿರುದ್ಧ 2ನೇ ಟೆಸ್ಟ್‌ನಲ್ಲಿ ಭಾರತ 2-0 ಸರಣಿ ಗೆಲುವಿನ ನಿರೀಕ್ಷೆಯಲ್ಲಿದೆ. ಆದರೆ, ಕೊಲಂಬೊದ ಎಸ್‌ಎಸ್‌ಸಿ ಮೈದಾನದಲ್ಲಿ ಗೆಲುವು ಸುಲಭವಲ್ಲ. ಹೆಚ್ಚಿನ ಆಟಗಾರರಿಗೆ ಅನುಭವದ ಕೊರತೆಯಿದೆ. ಈ ಲೇಖನವು ಎಸ್‌ಎಸ್‌ಸಿ ಮೈದಾನದಲ್ಲಿ ಭಾರತದ ಹಿಂದಿನ ಟೆಸ್ಟ್ ದಾಖಲೆಗಳನ್ನು ವಿಶ್ಲೇಷಿಸುತ್ತದೆ. ಇತ್ತೀಚಿನ ಪಂದ್ಯಗಳಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದ್ದರೂ, ಸಿಂಹಳೀಯರ ಸವಾಲು ನಿರ್ಲಕ್ಷಿಸುವಂತಿಲ್ಲ.

IND vs SL: ಕೊಲಂಬೊದಲ್ಲಿ ಟೀಂ ಇಂಡಿಯಾ ದಾಖಲೆ ಹೇಗಿದೆ?
Ind Vs Sl
ಪೃಥ್ವಿಶಂಕರ
|

Updated on: Aug 22, 2026 | 9:10 PM

Share

ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ತಂಡ (India vs Sri Lanka) ಪ್ರಸ್ತುತ 1-0 ಮುನ್ನಡೆಯಲ್ಲಿದೆ. ಸರಣಿಯ ಎರಡನೇ ಮತ್ತು ಅಂತಿಮ ಪಂದ್ಯವು ಆಗಸ್ಟ್ 23 ರ ಭಾನುವಾರದಂದು ನಡೆಯಲಿದೆ. ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ (ಎಸ್‌ಎಸ್‌ಸಿ) ಮೈದಾನದಲ್ಲಿ ನಡೆಯುವ ಈ ಪಂದ್ಯವನ್ನು ಗೆದ್ದು 2-0 ಅಂತರದಿಂದ ಸರಣಿ ಗೆಲುವು ಸಾಧಿಸುವ ಇರಾದೆಯಲ್ಲಿ ಟೀಂ ಇಂಡಿಯಾವಿದೆ. ಆದಾಗ್ಯೂ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಟೀಂ ಇಂಡಿಯಾಗೆ ಗೆಲುವು ಅಷ್ಟು ಸುಲಭವಾಗಿ ಧಕ್ಕುವ ಸಾಧ್ಯತೆಗಳಿಲ್ಲ.

ಏಕೆಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾದ ಭಾಗಶಃ ಆಟಗಾರರಿಗೆ ಆಡಿದ ಅನುಭವವಿಲ್ಲ. ಇಬ್ಬರನ್ನು ಹೊರತುಪಡಿಸಿ ಉಳಿದವರ್ಯಾರು ಈ ಮೈದಾನದಲ್ಲಿ ಆಡಿಲ್ಲ. ಹೀಗಾಗಿ ಈ ಪಂದ್ಯವನ್ನು ಗೆಲ್ಲಬೇಕಾದರೆ ಟೀಂ ಇಂಡಿಯಾ ಸಾಕಷ್ಟು ಬೆವರು ಹರಿಸಬೇಕಿದೆ. ಆದರೆ ಅದಕ್ಕೂ ಮುನ್ನ ಈ ಮೈದಾನದಲ್ಲಿ ಭಾರತದ ದಾಖಲೆ ಹೇಗಿದೆ ಎಂಬುದನ್ನು ನೋಡೋಣ.

ಕೊಲಂಬೊದಲ್ಲಿ ಭಾರತದ ದಾಖಲೆ

ಭಾರತೀಯ ತಂಡವು ಇದುವರೆಗೆ ಈ ಮೈದಾನದಲ್ಲಿ ಒಂಬತ್ತು ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ ಮೂರು ಪಂದ್ಯಗಳಲ್ಲಿ ಗೆದ್ದಿದ್ದರೆ, ಎರಡರಲ್ಲಿ ಪಂದ್ಯಗಳಲ್ಲಿ ಸೋತಿದೆ. ಉಳಿದ ನಾಲ್ಕು ಪಂದ್ಯಗಳು ಡ್ರಾ ಆಗಿವೆ. ಇನ್ನು ಕೊನೆಯ ಎರಡು ಪಂದ್ಯಗಳ ಬಗ್ಗೆ ಹೇಳುವುದಾದರೆ.. ಭಾರತ ತಂಡವು ಆತಿಥೇಯ ಶ್ರೀಲಂಕಾವನ್ನು ಭಾರಿ ಅಂತರದಿಂದ ಸೋಲಿಸಿದೆ. ಕೊನೆಯ ಬಾರಿಗೆ ಟೀಂ ಇಂಡಿಯಾ ಇಲ್ಲಿ ಟೆಸ್ಟ್ ಪಂದ್ಯವನ್ನು ಆಡಿದ್ದು 2017 ರಲ್ಲಿ, ಆ ಪಂದ್ಯವನ್ನು ಭಾರತ ಇನ್ನಿಂಗ್ಸ್ ಮತ್ತು 53 ರನ್‌ಗಳಿಂದ ಗೆದ್ದಿತ್ತು. ಅದಕ್ಕೂ ಮೊದಲು, 2015 ರಲ್ಲಿ ಭಾರತ, ಶ್ರೀಲಂಕಾವನ್ನು 117 ರನ್‌ಗಳಿಂದ ಸೋಲಿಸಿತ್ತು. ಇನ್ನು ಶ್ರೀಲಂಕಾ ಕೊನೆಯ ಬಾರಿಗೆ 2008 ರಲ್ಲಿ ಈ ಮೈದಾನದಲ್ಲಿ ಭಾರತವನ್ನು ಸೋಲಿಸಿತ್ತು. ಆತಿಥೇಯ ತಂಡ ಆ ಪಂದ್ಯವನ್ನು ಇನ್ನಿಂಗ್ಸ್ ಮತ್ತು 239 ರನ್‌ಗಳಿಂದ ಗೆದ್ದುಕೊಂಡಿತ್ತು. ಇದಲ್ಲದೆ, ಶ್ರೀಲಂಕಾ ತಂಡವು 2001 ರಲ್ಲಿ ಟೀಂ ಇಂಡಿಯಾವನ್ನು ಇದೇ ಮೈದಾನದಲ್ಲಿ ಮಣಿಸಿತ್ತು.

IND vs SL: 5 ದಿನವೂ ಮಳೆ; ಎರಡನೇ ಟೆಸ್ಟ್ ನಡೆಯುವುದು ಅನುಮಾನ..!

ಟೆಸ್ಟ್ ಸರಣಿಗೆ ಭಾರತ ತಂಡ: ಶುಭ್​ಮನ್ ಗಿಲ್ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ ಪಡಿಕ್ಕಲ್, ಸರನ್ಶ್ ಜೈನ್, ಔಕಿಬ್ ನಬಿ, ಸರ್ಫರಾಜ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ