T20 World Cup 2024: ಟೀಮ್ ಇಂಡಿಯಾದ ಮುಂದಿನ ಎದುರಾಳಿ ಯಾರು? ಇಲ್ಲಿದೆ ಪೂರ್ಣ ಮಾಹಿತಿ

India Super 8 schedule: ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆದ್ದಿದ್ದ ಟೀಮ್ ಇಂಡಿಯಾ, ಎರಡನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಗೆದ್ದು ಬೀಗಿತ್ತು. ಹಾಗೆಯೇ ಕೆನಡಾ ವಿರುದ್ಧದ ನಾಲ್ಕನೇ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ.

T20 World Cup 2024: ಟೀಮ್ ಇಂಡಿಯಾದ ಮುಂದಿನ ಎದುರಾಳಿ ಯಾರು? ಇಲ್ಲಿದೆ ಪೂರ್ಣ ಮಾಹಿತಿ
Team India
Follow us
|

Updated on: Jun 16, 2024 | 7:27 AM

T20 World Cup 2024: ಫ್ಲೋರಿಡಾದಲ್ಲಿ ನಡೆಯಬೇಕಿದ್ದ ಭಾರತ ಮತ್ತು ಕೆನಡಾ ತಂಡಗಳ ನಡುವಣ ಪಂದ್ಯವು ಮಳೆಗೆ ಅಹುತಿಯಾಗಿದೆ. ಇದರೊಂದಿಗೆ ಟೀಮ್ ಇಂಡಿಯಾದ (Team India) ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯಗೊಂಡಿದೆ. ಮೊದಲ ಸುತ್ತಿನಲ್ಲಿ ಭಾರತ ತಂಡವು ಒಟ್ಟು 3 ಪಂದ್ಯಗಳನ್ನಾಡಿದ್ದು, ಈ ಎಲ್ಲಾ ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ.

ಮೊದಲ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆದ್ದಿದ್ದ ಟೀಮ್ ಇಂಡಿಯಾ, ಎರಡನೇ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಬಗ್ಗು ಬಡಿದಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಗೆದ್ದು ಬೀಗಿತ್ತು. ಹಾಗೆಯೇ ಕೆನಡಾ ವಿರುದ್ಧದ ನಾಲ್ಕನೇ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ.

ಇದರೊಂದಿಗೆ ಒಟ್ಟು 6 ಅಂಕಗಳೊಂದಿಗೆ ಭಾರತ ತಂಡವು ಗ್ರೂಪ್-ಎ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಈ ಅಗ್ರಸ್ಥಾನದೊಂದಿಗೆ ಸೂಪರ್-8 ಹಂತಕ್ಕೆ ಎಂಟ್ರಿ ಕೊಟ್ಟಿರುವ ಟೀಮ್ ಇಂಡಿಯಾ ದ್ವಿತೀಯ ಸುತ್ತಿನಲ್ಲಿ ಗ್ರೂಪ್- 1 ರಲ್ಲಿ ಕಣಕ್ಕಿಳಿಯಲಿದೆ.

ಅದರಂತೆ ಟೀಮ್ ಇಂಡಿಯಾದ ಅಫ್ಘಾನಿಸ್ತಾನ್, ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ್ ಅಥವಾ ನೆದರ್​ಲೆಂಡ್ಸ್ ವಿರುದ್ಧ ಕಣಕ್ಕಿಳಿಯಲಿದೆ. ಇಲ್ಲಿ ಬಾಂಗ್ಲಾದೇಶ್ ಮತ್ತು ನೆದರ್​ಲೆಂಡ್ಸ್ ನಡುವೆ ಗ್ರೂಪ್-1 ರ ನಾಲ್ಕನೇ ಸ್ಥಾನಕ್ಕಾಗಿ ಪೈಪೋಟಿ ಇದ್ದು, ಹೀಗಾಗಿ ಇನ್ನೂ ಕೂಡ ಭಾರತದ ಎದುರಾಳಿ ಯಾರೆಂಬುದು ನಿರ್ಧಾರವಾಗಿಲ್ಲ.

ಸೂಪರ್-8 ಸುತ್ತಿನ ಎದುರಾಳಿಗಳು:

  • ಭಾರತ ತಂಡವು ದ್ವಿತೀಯ ಸುತ್ತಿನ ತನ್ನ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ. ಜೂನ್ 20 ರಂದು ನಡೆಯಲಿರುವ ಈ ಪಂದ್ಯಕ್ಕೆ ಬಾರ್ಬಡೋಸ್​ನ ಕೆನ್ಸಿಂಗ್ಟನ್ ಸ್ಟೇಡಿಯಂ ಆತಿಥ್ಯವಹಿಸಲಿದೆ.
  • ಇನ್ನು ಟೀಮ್ ಇಂಡಿಯಾ ತನ್ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ್ ಅಥವಾ ನೆದರ್​ಲೆಂಡ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಜೂನ್ 22 ರಂದು ಅಂಟಿಗುವಾದಲ್ಲಿ ನಡೆಯಲಿದೆ.
  • ಹಾಗೆಯೇ ಸೂಪರ್-8 ಸುತ್ತಿನ ತನ್ನ ಕೊನೆಯ ಪಂದ್ಯದಲ್ಲಿ ಭಾರತ ತಂಡದ ಎದುರಾಳಿ ಆಸ್ಟ್ರೇಲಿಯಾ. ಜೂನ್ 24 ರಂದು ನಡೆಯಲಿರುವ ಈ ಪಂದ್ಯಕ್ಕೆ ಸೆಂಟ್ ಲೂಸಿಯಾದ ಡಾರೆನ್ ಸ್ಯಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇದನ್ನೂ ಓದಿ: T20 World Cup 2024: ವಿಶ್ವ ದಾಖಲೆಯ ವಿಜಯ ಸಾಧಿಸಿದ ಇಂಗ್ಲೆಂಡ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ತಾಜಾ ಸುದ್ದಿ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ