AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ 4 ಆಲ್​ರೌಂಡರ್​ಗಳು, 6 ಬೌಲರ್​ಗಳು

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯು ಅಕ್ಟೋಬರ್ 22 ರಿಂದ ಶುರುವಾಗಲಿದೆ. ಕಿವೀಸ್ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ ಒಟ್ಟು ಟಿ20 5 ಪಂದ್ಯಗಳನ್ನಾಡಲಿದೆ. ಈ ಸರಣಿಗಾಗಿ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಆರು ಬೌಲರ್​ಗಳು ಸ್ಥಾನ ಪಡೆದಿದ್ದಾರೆ.

ಟೀಮ್ ಇಂಡಿಯಾದಲ್ಲಿ 4 ಆಲ್​ರೌಂಡರ್​ಗಳು, 6 ಬೌಲರ್​ಗಳು
Team India Image Credit source: GettyImages
ಝಾಹಿರ್ ಯೂಸುಫ್
|

Updated on: Oct 07, 2026 | 7:35 AM

Share

ನ್ಯೂಝಿಲೆಂಡ್​ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ ಆರು ಬೌಲರ್​ಗಳಿರುವುದು ವಿಶೇಷ. ಇನ್ನು ಆಲ್​ರೌಂಡರ್​ಗಳಾಗಿ ನಾಲ್ವರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಪರಿಪೂರ್ಣ ಬ್ಯಾಟ್ಸ್​ಮನ್​ಗಳಾಗಿ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ.

ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ನಾಯಕ ಶ್ರೇಯಸ್ ಅಯ್ಯರ್, ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ ಹಾಗೂ ತಿಲಕ್ ವರ್ಮಾ ಕಾಣಿಸಿಕೊಂಡಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್​ಗೆ ಸ್ಥಾನ ಲಭಿಸಿದೆ.

ಇನ್ನು ಆಲ್​ರೌಂಡರ್​ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ನಮನ್ ಧೀರ್, ಅಕ್ಷರ್ ಪಟೇಲ್​ ಅವರನ್ನು ಆಯ್ಕೆ ಮಾಡಲಾಗಿದೆ.

ಅದೇ ರೀತಿ ಬೌಲರ್​ಗಳಾಗಿ ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್ ಹಾಗೂ ಭುವನೇಶ್ವರ್ ಕುಮಾರ್ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.

ಅಂದರೆ ಈ ಬಾರಿ ಆಯ್ಕೆ ಸಮಿತಿಯು ಹೆಚ್ಚಿನ ಬೌಲರ್​ಗಳಿಗೆ ಮಣೆಹಾಕಿರುವುದು ಸ್ಪಷ್ಟ. ಅದರಲ್ಲೂ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ನಾಲ್ಕು ವರ್ಷಗಳ ಬಳಿಕ ಮತ್ತೆ ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ…

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಷದೀಪ್ ಸಿಂಗ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.

ಇದನ್ನೂ ಓದಿ: 26 ದಿನಗಳಲ್ಲಿ 10 ಟಿ20 ಪಂದ್ಯಗಳನ್ನಾಡಲಿದೆ ಟೀಮ್ ಇಂಡಿಯಾ

ಒಟ್ಟಾರೆಯಾಗಿ, ಈ ಟಿ20 ಸರಣಿಯು ಭಾರತೀಯ ಕ್ರಿಕೆಟ್‌ನ ಮುಂದಿನ ಪೀಳಿಗೆಯನ್ನು ಸಿದ್ಧಪಡಿಸುವಲ್ಲಿ ಮತ್ತು ಅನುಭವಿಗಳ ಫಾರ್ಮ್ ಅನ್ನು ಪರೀಕ್ಷಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಶ್ರೇಯಸ್ ಅಯ್ಯರ್ ಅವರ ಹೊಸ ನಾಯಕತ್ವ, ಭುವನೇಶ್ವರ್ ಕುಮಾರ್ ಅವರ ಪುನರಾಗಮನ ಹಾಗೂ ಯುವ ಆಟಗಾರರ ಜಿದ್ದಾಜಿದ್ದಿನ ಆಟವು ಇಡೀ ಸರಣಿಯ ರೋಚಕತೆಯನ್ನು ಹೆಚ್ಚಿಸಲಿದೆ. ಆದರೆ ಬಲಿಷ್ಠ ಕಿವೀಸ್ ಪಡೆಯನ್ನು ಅವರದ್ದೇ ತವರಿನಲ್ಲಿ ಧೂಳೀಪಟ ಮಾಡುವುದು ಟೀಮ್ ಇಂಡಿಯಾಗೆ ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ಈ ಸರಣಿಯಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More