
ನ್ಯೂಝಿಲೆಂಡ್ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ಬಳಗದಲ್ಲಿ ಆರು ಬೌಲರ್ಗಳಿರುವುದು ವಿಶೇಷ. ಇನ್ನು ಆಲ್ರೌಂಡರ್ಗಳಾಗಿ ನಾಲ್ವರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಪರಿಪೂರ್ಣ ಬ್ಯಾಟ್ಸ್ಮನ್ಗಳಾಗಿ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ.
ಇಲ್ಲಿ ಪರಿಪೂರ್ಣ ಬ್ಯಾಟರ್ಗಳಾಗಿ ನಾಯಕ ಶ್ರೇಯಸ್ ಅಯ್ಯರ್, ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ ಹಾಗೂ ತಿಲಕ್ ವರ್ಮಾ ಕಾಣಿಸಿಕೊಂಡಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ಗೆ ಸ್ಥಾನ ಲಭಿಸಿದೆ.
ಇನ್ನು ಆಲ್ರೌಂಡರ್ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ನಮನ್ ಧೀರ್, ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಅದೇ ರೀತಿ ಬೌಲರ್ಗಳಾಗಿ ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್ ಹಾಗೂ ಭುವನೇಶ್ವರ್ ಕುಮಾರ್ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.
ಅಂದರೆ ಈ ಬಾರಿ ಆಯ್ಕೆ ಸಮಿತಿಯು ಹೆಚ್ಚಿನ ಬೌಲರ್ಗಳಿಗೆ ಮಣೆಹಾಕಿರುವುದು ಸ್ಪಷ್ಟ. ಅದರಲ್ಲೂ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ನಾಲ್ಕು ವರ್ಷಗಳ ಬಳಿಕ ಮತ್ತೆ ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ. ಅದರಂತೆ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ…
ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಷದೀಪ್ ಸಿಂಗ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.
ಇದನ್ನೂ ಓದಿ: 26 ದಿನಗಳಲ್ಲಿ 10 ಟಿ20 ಪಂದ್ಯಗಳನ್ನಾಡಲಿದೆ ಟೀಮ್ ಇಂಡಿಯಾ
ಒಟ್ಟಾರೆಯಾಗಿ, ಈ ಟಿ20 ಸರಣಿಯು ಭಾರತೀಯ ಕ್ರಿಕೆಟ್‌ನ ಮುಂದಿನ ಪೀಳಿಗೆಯನ್ನು ಸಿದ್ಧಪಡಿಸುವಲ್ಲಿ ಮತ್ತು ಅನುಭವಿಗಳ ಫಾರ್ಮ್ ಅನ್ನು ಪರೀಕ್ಷಿಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಶ್ರೇಯಸ್ ಅಯ್ಯರ್ ಅವರ ಹೊಸ ನಾಯಕತ್ವ, ಭುವನೇಶ್ವರ್ ಕುಮಾರ್ ಅವರ ಪುನರಾಗಮನ ಹಾಗೂ ಯುವ ಆಟಗಾರರ ಜಿದ್ದಾಜಿದ್ದಿನ ಆಟವು ಇಡೀ ಸರಣಿಯ ರೋಚಕತೆಯನ್ನು ಹೆಚ್ಚಿಸಲಿದೆ. ಆದರೆ ಬಲಿಷ್ಠ ಕಿವೀಸ್ ಪಡೆಯನ್ನು ಅವರದ್ದೇ ತವರಿನಲ್ಲಿ ಧೂಳೀಪಟ ಮಾಡುವುದು ಟೀಮ್ ಇಂಡಿಯಾಗೆ ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿ ಈ ಸರಣಿಯಲ್ಲಿ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.