India T20 squad: ಟೀಮ್ ಇಂಡಿಯಾ ಟಿ20 ತಂಡ ಪ್ರಕಟ: ಬುಮ್ರಾಗೆ ನಾಯಕತ್ವ

| Updated By: ಝಾಹಿರ್ ಯೂಸುಫ್

Updated on: Jul 31, 2023 | 9:01 PM

India T20 squad: ಭಾರತ-ಐರ್ಲೆಂಡ್ ನಡುವಣ 3 ಪಂದ್ಯಗಳ ಟಿ20 ಸರಣಿಯು ಆಗಸ್ಟ್ 18 ರಿಂದ ಶುರುವಾಗಲಿದೆ. ಆಗಸ್ಟ್ 18 ರಂದು ಮೊದಲ ಟಿ20 ಪಂದ್ಯ ನಡೆದರೆ, 2ನೇ ಪಂದ್ಯವು ಆಗಸ್ಟ್ 20 ರಂದು ಜರುಗಲಿದೆ.

India T20 squad: ಟೀಮ್ ಇಂಡಿಯಾ ಟಿ20 ತಂಡ ಪ್ರಕಟ: ಬುಮ್ರಾಗೆ ನಾಯಕತ್ವ
Team India
Follow us on

India vs Ireland T20: ಐರ್ಲೆಂಡ್‌ ವಿರುದ್ಧದ ಟಿ20 ಸರಣಿಗಾಗಿ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಜಸ್​ಪ್ರೀತ್ ಬುಮ್ರಾ (Jasprit Bumrah) ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ರುತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ. ಹಾಗೆಯೇ ತಂಡದಲ್ಲಿ ವಿಕೆಟ್ ಕೀಪರ್ ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಕಾಣಿಸಿಕೊಂಡಿದ್ದಾರೆ. ಇನ್ನು ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅವೇಶ್ ಖಾನ್, ರವಿ ಬಿಷ್ಣೋಯ್ ಹಾಗೂ ಶಹಬಾಝ್ ಅಹ್ಮದ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹಾಗೆಯೇ ಏಕದಿನ ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರನ್ನು ಈ ಸರಣಿಯಿಂದ ಹೊರಗಿಡಲಾಗಿದೆ. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿರುವ ಬಹುತೇಕ ಆಟಗಾರರು ಐರ್ಲೆಂಡ್​ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ.

ಇಬ್ಬರು ವೇಗಿಗಳ ಕಂಬ್ಯಾಕ್:

ಈ ಸರಣಿಯ ಮೂಲಕ ಟೀಮ್ ಇಂಡಿಯಾದ ಇಬ್ಬರು ವೇಗಿಗಳು ಕಂಬ್ಯಾಕ್ ಮಾಡುತ್ತಿರುವುದು ವಿಶೇಷ. ಅಂದರೆ ಗಾಯದ ಕಾರಣ ಕಳೆದೊಂದು ವರ್ಷದಿಂದ ಹೊರಗುಳಿದಿರುವ ಬುಮ್ರಾ ಜೊತೆ ಕನ್ನಡಿಗ ಪ್ರಸಿಧ್ ಕೃಷ್ಣ ಕೂಡ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಭಾರತ-ಐರ್ಲೆಂಡ್ ಸರಣಿ ವೇಳಾಪಟ್ಟಿ:

ಭಾರತ-ಐರ್ಲೆಂಡ್ ನಡುವಣ 3 ಪಂದ್ಯಗಳ ಟಿ20 ಸರಣಿಯು ಆಗಸ್ಟ್ 18 ರಿಂದ ಶುರುವಾಗಲಿದೆ. ಆಗಸ್ಟ್ 18 ರಂದು ಮೊದಲ ಟಿ20 ಪಂದ್ಯ ನಡೆದರೆ, 2ನೇ ಪಂದ್ಯವು ಆಗಸ್ಟ್ 20 ರಂದು ಜರುಗಲಿದೆ. ಇನ್ನು 3ನೇ ಪಂದ್ಯ ಆಗಸ್ಟ್ 22 ರಂದು ನಡೆಯಲಿದೆ. ಈ ಎಲ್ಲಾ ಪಂದ್ಯಗಳಿಗೆ ಡಬ್ಲಿನ್​ನ ಮಲಾಹೈಡ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಐರ್ಲೆಂಡ್ ಸರಣಿಗೆ ಭಾರತ ಟಿ20 ತಂಡ:

ಜಸ್​ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ರವಿ ಬಿಷ್ಣೋಯ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಅವೇಶ್ ಖಾನ್.

ವೆಸ್ಟ್ ಇಂಡೀಸ್​ ವಿರುದ್ಧ ಟಿ20 ಸರಣಿಗೆ ಟೀಮ್ ಇಂಡಿಯಾ ಹೀಗಿದೆ:

ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

ಏಷ್ಯನ್ ಗೇಮ್ಸ್​ಗೆ ಆಯ್ಕೆಯಾಗಿರುವ ಟೀಮ್ ಇಂಡಿಯಾ ಹೀಗಿದೆ:

ರುತುರಾಜ್ ಗಾಯಕ್ವಾಡ್ (ನಾಯಕ), ಯಶಸ್ವಿ ಜೈಸ್ವಾಲ್, ರಾಹುಲ್ ತ್ರಿಪಾಠಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ರವಿ ಬಿಷ್ಣೋಯ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್, ಶಿವಂ ಮಾವಿ, ಶಿವಂ ದುಬೆ, ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್).

ಇದನ್ನೂ ಓದಿ: IPL 2024: RCB ತಂಡಕ್ಕೆ ಮೇಜರ್ ಸರ್ಜರಿ: ಕೋಚ್​ಗೆ ಗೇಟ್​ ಪಾಸ್..?

ಮೀಸಲು ಆಟಗಾರರು: ಯಶ್ ಠಾಕೂರ್, ಸಾಯಿ ಕಿಶೋರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಸಾಯಿ ಸುದರ್ಶನ್.

 

 

Published On - 8:49 pm, Mon, 31 July 23