ಟೀಮ್ ಇಂಡಿಯಾದಲ್ಲಿ ಆರು ಆಲ್​ರೌಂಡರ್​ಗಳು, ಐವರು ಬೌಲರ್​ಗಳು

India vs Bangladesh: ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯ 2ನೇ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಇದಾದ ಬಳಿಕ  ಅಕ್ಟೋಬರ್ 7 ರಿಂದ ಟಿ20 ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯವು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯಲಿದೆ. ಈ ಸರಣಿಗಾಗಿ ಇದೀಗ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ.

ಟೀಮ್ ಇಂಡಿಯಾದಲ್ಲಿ ಆರು ಆಲ್​ರೌಂಡರ್​ಗಳು, ಐವರು ಬೌಲರ್​ಗಳು
Team India
Follow us
|

Updated on:Sep 29, 2024 | 7:32 AM

ಬಾಂಗ್ಲಾದೇಶ್ ವಿರುದ್ದದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಆರು ಆಲ್​​ರೌಂಡರ್​ಗಳಿರುವುದು ವಿಶೇಷ. ಇನ್ನು ವಿಕೆಟ್ ಕೀಪರ್​ಗಳಾಗಿ ಇಬ್ಬರು ಸ್ಥಾನ ಪಡೆದಿದ್ದಾರೆ. ಹಾಗೆಯೇ ಪರಿಪೂರ್ಣ ಬ್ಯಾಟ್ಸ್​ಮನ್​ಗಳಾಗಿ ಆಯ್ಕೆಯಾಗಿರುವುದು ಕೇವಲ ಇಬ್ಬರು ಮಾತ್ರ.

ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ರಿಂಕು ಸಿಂಗ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾಗೆ ಸ್ಥಾನ ಲಭಿಸಿದೆ. ಅತ್ತ ಇಶಾನ್ ಕಿಶನ್ ಮತ್ತೊಮ್ಮೆ ಅವಕಾಶ ವಂಚಿತರಾಗಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ ಹಾಗೂ ವಾಷಿಂಗ್ಟನ್ ಸುಂದರ್​ಗೆ ಚಾನ್ಸ್ ನೀಡಲಾಗಿದೆ.

ಅದೇ ರೀತಿ ಬೌಲರ್​ಗಳಾಗಿ ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣ ಹಾಗೂ ಮಯಾಂಕ್ ಯಾದವ್ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.

ಅಂದರೆ ಈ ಬಾರಿ ಆಯ್ಕೆ ಸಮಿತಿಯು ಹೆಚ್ಚಿನ ಆಲ್​ರೌಂಡರ್​ಗಳಿಗೆ ಮಣೆಹಾಕಿರುವುದು ಸ್ಪಷ್ಟ. ಅದರಲ್ಲೂ ಯುವ ಆಲ್​ರೌಂಡರ್​ಗಳಾದ ಅಭಿಷೇಕ್ ಶರ್ಮಾ, ರಿಯಾನ್ ಪರಾಗ್ ಹಾಗೂ ನಿತೀಶ್ ಕುಮಾರ್ ರೆಡ್ಡಿಗೆ ಸ್ಥಾನ ಕಲ್ಪಿಸಲಾಗಿದೆ. ಈ ಮೂಲಕ 2026ರ ಟಿ20 ವಿಶ್ವಕಪ್​ಗೆ ಈಗಲೇ ಬಲಿಷ್ಢ ಪಡೆಯನ್ನು ರೂಪಿಸುವ ಕಾಯಕಕ್ಕೆ ಬಿಸಿಸಿಐ ಕೈ ಹಾಕಿದೆ.

ಇದನ್ನೂ ಓದಿ: IPL 2025 ರಲ್ಲಿ ಎಷ್ಟು ಪಂದ್ಯಗಳನ್ನಾಡಲಾಗುತ್ತದೆ? ಇಲ್ಲಿದೆ ಮಾಹಿತಿ

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್(ನಾಯಕ) ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.

ಭಾರತ ಮತ್ತು ಬಾಂಗ್ಲಾ ಟಿ20 ಸರಣಿ ಯಾವಾಗ ಶುರು?

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಟೆಸ್ಟ್ ಸರಣಿಯ 2ನೇ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಇದಾದ ಬಳಿಕ  ಅಕ್ಟೋಬರ್ 7 ರಿಂದ ಟಿ20 ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯವು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯಲಿದೆ. ಇನ್ನು ಅಕ್ಟೋಬರ್ 10 ರಂದು ಜರುಗಲಿರುವ 2ನೇ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಈ ಸರಣಿಯ ಮೂರನೇ ಪಂದ್ಯವು ಅಕ್ಟೋಬರ್ 13 ರಂದು ಹೈದರಾಬಾದ್​ನಲ್ಲಿ ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ್ ಟಿ20 ಸರಣಿ ವೇಳಾಪಟ್ಟಿ:

1ನೇ ಟಿ20, ಭಾರತ vs ಬಾಂಗ್ಲಾದೇಶ ಸೋಮವಾರ, 7 ಅಕ್ಟೋಬರ್ 2024 7 PM ಗ್ವಾಲಿಯರ್
2ನೇ ಟಿ20, ಭಾರತ vs ಬಾಂಗ್ಲಾದೇಶ ಗುರುವಾರ, 10 ಅಕ್ಟೋಬರ್ 2024 7 PM ದೆಹಲಿ
3ನೇ ಟಿ20, ಭಾರತ vs ಬಾಂಗ್ಲಾದೇಶ ಭಾನುವಾರ, 13 ಅಕ್ಟೋಬರ್ 2024 7 PM ಹೈದರಾಬಾದ್

Published On - 7:32 am, Sun, 29 September 24

ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಪುತ್ತಿಗೆ ಮಠದ ಹಳೆಯ ಅನುಯಾಯಿಯೇನೋ ಎಂಬಂತಿತ್ತು ರತನ್ ಟಾಟಾರ ವರ್ತನೆ!
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಅಭಿಮಾನಿಗಳಿಗೆ ಕೈ ಸನ್ನೆ ಮಾಡಿದ ದರ್ಶನ್; ಜೈಲಿಂದ ದಾಸ ಕೊಟ್ಟ ಸಿಗ್ನಲ್ ಏನು?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಮಗನನ್ನು ಪುನಃ ಲಾಂಚ್ ಮಾಡಲು ಹಟತೊಟ್ಟ ಹೆಚ್ಡಿಕೆ ಕ್ಷೇತ್ರ ಬಿಟ್ಟುಕೊಡುವರೇ?
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪಕ್ಷದ ಹಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಮಯ ಬೇಕು: ವಿಜಯೇಂದ್ರ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಗ್ಗೆ ಸೋಮಣ್ಣ ಹೇಳಿದ್ದೇನು? ಇಲ್ಲಿದೆ ನೋಡಿ
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಕೋರ್ಟ್ ಆದೇಶದ ಮೇರೆಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಪ್ರದೋಶ್ ವಾಪಸ್
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು