AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಸೂರ್ಯವಂಶಿ ಎಂಟ್ರಿ: ಟೀಮ್ ಇಂಡಿಯಾದ 3 ತಂಡಗಳು ಪ್ರಕಟ

India T20 Squad: ಭಾರತೀಯ ಟಿ20 ಕ್ರಿಕೆಟ್‌ನಲ್ಲಿ ಹೊಸ ಶಕೆಗೆ ಮುನ್ನುಡಿ ಬರೆಯಲಾಗಿದೆ. ಮುಂಬರುವ ಐರ್ಲೆಂಡ್, ಇಂಗ್ಲೆಂಡ್ ಪ್ರವಾಸ ಹಾಗೂ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಪಂದ್ಯಾವಳಿಗಳಿಗೆ ಬಿಸಿಸಿಐ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಈ ಮೂರು ತಂಡಗಳ ನಾಯಕನಾಗಿ ಶ್ರೇಯಸ್ ಅಯ್ಯರ್ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೆಯೇ ಈ ಮೂರು ತಂಡಗಳಲ್ಲೂ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ.

ವೈಭವ್ ಸೂರ್ಯವಂಶಿ ಎಂಟ್ರಿ: ಟೀಮ್ ಇಂಡಿಯಾದ 3 ತಂಡಗಳು ಪ್ರಕಟ
Team India - VabhavImage Credit source: BCCI
ಝಾಹಿರ್ ಯೂಸುಫ್
|

Updated on:Jun 07, 2026 | 7:11 AM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ ಐರ್ಲೆಂಡ್, ಇಂಗ್ಲೆಂಡ್ ಪ್ರವಾಸದ ಟಿ20 ಸರಣಿ ಹಾಗೂ 2026ರ ಏಷ್ಯನ್ ಗೇಮ್ಸ್ ಪಂದ್ಯಾವಳಿಗಳಿಗಾಗಿ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಈ ಆಯ್ಕೆಯಲ್ಲಿ ಬಿಸಿಸಿಐ ಹಲವು ಪ್ರಮುಖ ಮತ್ತು ಅಚ್ಚರಿಯ ಬದಲಾವಣೆಗಳನ್ನು ಮಾಡಿದ್ದು, ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಯುಗಕ್ಕೆ ಮುನ್ನುಡಿ ಬರೆದಿದೆ.

ಈ ಬದಲಾವಣೆಯೊಂದಿಗೆ ಸೂರ್ಯಕುಮಾರ್ ಯಾದವ್ ಅವರ ಬದಲಿಗೆ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಭಾರತ ಟಿ20 ತಂಡದ ನೂತನ ನಾಯಕನನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಇನ್ನು ಯುವ ಆಟಗಾರ ತಿಲಕ್ ವರ್ಮಾ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.

ಹಾಗೆಯೇ ಐಪಿಎಲ್ 2026 ರಲ್ಲಿ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಅವರನ್ನು ಭಾರತ ಹಿರಿಯರ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಮುಂಬರುವ ಟಿ20 ಸರಣಿ ಹಾಗೂ ಟೂರ್ನಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ…

ಐರ್ಲೆಂಡ್ ಟಿ20 ಸರಣಿಗೆ ಭಾರತ ತಂಡ:  ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್. ಸಿರಾಜ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ.

ಇಂಗ್ಲೆಂಡ್ ಟಿ20 ಸರಣಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್. ಸಿರಾಜ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ.

ಇದನ್ನೂ ಓದಿ: ಕ್ಲಿಯರ್ ಔಟ್ ಆಗಿದ್ದರೂ… ನಾಟಕವಾಡಿ ಬಚಾವಾದ ಕೆಎಲ್ ರಾಹುಲ್!

ಏಷ್ಯನ್ ಗೇಮ್ಸ್​ಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ  ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.

Published On - 1:50 pm, Sat, 6 June 26

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ