
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಂಬರುವ ಐರ್ಲೆಂಡ್, ಇಂಗ್ಲೆಂಡ್ ಪ್ರವಾಸದ ಟಿ20 ಸರಣಿ ಹಾಗೂ 2026ರ ಏಷ್ಯನ್ ಗೇಮ್ಸ್ ಪಂದ್ಯಾವಳಿಗಳಿಗಾಗಿ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಿದೆ. ಈ ಆಯ್ಕೆಯಲ್ಲಿ ಬಿಸಿಸಿಐ ಹಲವು ಪ್ರಮುಖ ಮತ್ತು ಅಚ್ಚರಿಯ ಬದಲಾವಣೆಗಳನ್ನು ಮಾಡಿದ್ದು, ಭಾರತೀಯ ಕ್ರಿಕೆಟ್‌ನಲ್ಲಿ ಹೊಸ ಯುಗಕ್ಕೆ ಮುನ್ನುಡಿ ಬರೆದಿದೆ.
ಈ ಬದಲಾವಣೆಯೊಂದಿಗೆ ಸೂರ್ಯಕುಮಾರ್ ಯಾದವ್ ಅವರ ಬದಲಿಗೆ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ಭಾರತ ಟಿ20 ತಂಡದ ನೂತನ ನಾಯಕನನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ. ಇನ್ನು ಯುವ ಆಟಗಾರ ತಿಲಕ್ ವರ್ಮಾ ಅವರಿಗೆ ಉಪನಾಯಕನ ಜವಾಬ್ದಾರಿ ನೀಡಲಾಗಿದೆ.
ಹಾಗೆಯೇ ಐಪಿಎಲ್ 2026 ರಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ನೊಂದಿಗೆ ಅಬ್ಬರಿಸಿದ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಅವರನ್ನು ಭಾರತ ಹಿರಿಯರ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಮುಂಬರುವ ಟಿ20 ಸರಣಿ ಹಾಗೂ ಟೂರ್ನಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ…
ಐರ್ಲೆಂಡ್ ಟಿ20 ಸರಣಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್. ಸಿರಾಜ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ.
ಇಂಗ್ಲೆಂಡ್ ಟಿ20 ಸರಣಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್. ಸಿರಾಜ್, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ.
ಇದನ್ನೂ ಓದಿ: ಕ್ಲಿಯರ್ ಔಟ್ ಆಗಿದ್ದರೂ… ನಾಟಕವಾಡಿ ಬಚಾವಾದ ಕೆಎಲ್ ರಾಹುಲ್!
ಏಷ್ಯಾಕಪ್ಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.
Published On - 1:50 pm, Sat, 6 June 26