India Squad For T20: ಭಾರತ ಟಿ20 ತಂಡ ಪ್ರಕಟ: ಕೊಹ್ಲಿ, ರೋಹಿತ್ಗೆ ಇಲ್ಲ ಸ್ಥಾನ
India Vs West Indies: ಈ ಸರಣಿಗೆ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಆಯ್ಕೆಯಾಗಿಲ್ಲ. ಹಾಗೆಯೇ ಗಾಯದ ಕಾರಣ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ.
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು (India T20 Squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ. ಇನ್ನು ಎಂದಿನಂತೆ ಟಿ20 ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ಹಾಗೆಯೇ ಇದೇ ಮೊದಲ ಬಾರಿಗೆ ತಿಲಕ್ ವರ್ಮಾ, ಯಶಸ್ವಿ ಜೈಸ್ವಾಲ್ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಅಬ್ಬರಿಸಿದ್ದರು. ಇದೀಗ ಈ ಇಬ್ಬರು ಎಡಗೈ ದಾಂಡಿಗರು ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಸ್ಥಾನದಲ್ಲಿ ತಂಡಕ್ಕೆ ಕಂಬ್ಯಾಕ್ ಮಾಡಿದ್ದರೆ, ಸೂರ್ಯಕುಮಾರ್ ಯಾದವ್ಗೆ ಉಪನಾಯಕನ ಸ್ಥಾನ ನೀಡಲಾಗಿದೆ.
ಮತ್ತೊಂದೆಡೆ ಈ ಸರಣಿಗೆ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಆಯ್ಕೆಯಾಗಿಲ್ಲ. ಹಾಗೆಯೇ ಗಾಯದ ಕಾರಣ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಬದಲಾಗಿ ವೇಗಿಗಳಾಗಿ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ಹಾಗೂ ಮುಖೇಶ್ ಕುಮಾರ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಸ್ಪಿನ್ನರ್ಗಳಾಗಿ ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್ ಹಾಗೂ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.
ಭಾರತ ಟಿ20 ತಂಡ : ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್, ನವದೀಪ್ ಸೈನಿ.
ODI World Cup 2023: ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನಕ್ಕೆ ಗೆಲುವು ಖಚಿತ: ಸಯೀದ್ ಅಜ್ಮಲ್
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕಟ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ಭಾರತ-ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ:
- 1ನೇ ಟೆಸ್ಟ್: ಜುಲೈ 12-16 – ವಿಂಡ್ಸರ್ ಪಾರ್ಕ್, ಡೊಮಿನಿಕಾ (7:30 PM IST)
- 2ನೇ ಟೆಸ್ಟ್: ಜುಲೈ 20-24 – ಕ್ವೀನ್ಸ್ ಪಾರ್ಕ್ ಓವಲ್, ಟ್ರಿನಿಡಾಡ್ (7:30 PM IST)
- 1ನೇ ODI: ಜುಲೈ 27 – ಕೆನ್ಸಿಂಗ್ಟನ್ ಓವಲ್, ಬಾರ್ಬಡೋಸ್ (7:00 PM IST)
- 2ನೇ ODI: ಜುಲೈ 29 – ಕೆನ್ಸಿಂಗ್ಟನ್ ಓವಲ್, ಬಾರ್ಬಡೋಸ್ (7:00 PM IST)
- 3ನೇ ODI: ಆಗಸ್ಟ್ 1 – ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್ (7:00 PM IST)
- 1ನೇ T20I: ಆಗಸ್ಟ್ 3 – ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್ (8:00 PM IST)
- 2ನೇ T20I: ಆಗಸ್ಟ್ 6 – ರಾಷ್ಟ್ರೀಯ ಕ್ರೀಡಾಂಗಣ, ಗಯಾನಾ (8: 00 PM IST)
- 3ನೇ T20I: ಆಗಸ್ಟ್ 8 – ರಾಷ್ಟ್ರೀಯ ಕ್ರೀಡಾಂಗಣ, ಗಯಾನಾ (8:00 PM IST)
- 4ನೇ T20I: ಆಗಸ್ಟ್ 12 – ಬ್ರೋವರ್ಡ್ ಕೌಂಟಿ ಸ್ಟೇಡಿಯಂ, ಫ್ಲೋರಿಡಾ (8:00 PM IST)
- 5ನೇ T20I: ಆಗಸ್ಟ್ 13 – ಬ್ರೋವರ್ಡ್ ಕೌಂಟಿ ಸ್ಟೇಡಿಯಂ, ಫ್ಲೋರಿಡಾ (8:00 PM IST)
Published On - 9:34 pm, Wed, 5 July 23