IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ 15 ಸದಸ್ಯರ ಟೀಂ ಇಂಡಿಯಾ ಪ್ರಕಟ
Team India's T20 Squad vs SA: ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಶುಭ್‌ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದು, ಗಿಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಅವರ ಫಿಟ್‌ನೆಸ್ ಭಾಗವಹಿಸುವಿಕೆಗೆ ನಿರ್ಣಾಯಕ. ಆದರೆ, ರಿಂಕು ಸಿಂಗ್ ಅವರನ್ನು ಕೈಬಿಟ್ಟಿರುವುದು ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾವನ್ನು ( India vs South Africa) ಪ್ರಕಟಿಸಲಾಗಿದೆ. ರಾಯ್‌ಪುರದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯದ ಸಮಯದಲ್ಲಿ, ಬಿಸಿಸಿಐ ಐದು ಪಂದ್ಯಗಳ ಟಿ20 ಸರಣಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಬಿಸಿಸಿಐ (BCCI) ಪ್ರಕಟಿಸಿರುವ ತಂಡದ ವಿಶೇಷತೆ ಎಂದರೆ ಶುಭ್‌ಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ (Hardik Pandya) ಗಾಯದ ನಂತರ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಹಾಗೆಯೇ ಶುಭ್‌ಮನ್ ಗಿಲ್ಗೆ (Shubman Gill) ಉಪನಾಯಕತ್ವವನ್ನು ನೀಡಲಾಗಿದೆ. ಆದರೆ ಸರಣಿಯಲ್ಲಿ ಅವರ ಭಾಗವಹಿಸುವಿಕೆಯು ಅವರ ಫಿಟ್‌ನೆಸ್ ಅನ್ನು ಅವಲಂಬಿಸಿರುತ್ತದೆ. ಆದಾಗ್ಯೂ, ಈ ಸರಣಿಯಿಂದ ರಿಂಕು ಸಿಂಗ್ ಅವರನ್ನು ಕೈಬಿಟ್ಟಿರುವುದು ಚರ್ಚೆಗೆ ಕಾರಣವಾಗಿದೆ.
ಗಿಲ್ ಮತ್ತು ಹಾರ್ದಿಕ್ ಇನ್
ವಾಸ್ತವವಾಗಿ ಇಂದು ಐದು ಪಂದ್ಯಗಳ ಸರಣಿಗೆ ಆಟಗಾರರ ಆಯ್ಕೆ ಕುರಿತು ಚರ್ಚಿಸಲು ಆಯ್ಕೆ ಸಮಿತಿ ಸಭೆ ಸೇರಿತ್ತು. ಆಯ್ಕೆದಾರರು ಶುಭ್‌ಮನ್ ಗಿಲ್ ಅವರನ್ನು ಆಯ್ಕೆ ಮಾಡುತ್ತಾರೆಯೇ ಎಂಬ ಪ್ರಶ್ನೆ ಇತ್ತು. ಏಕೆಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿದ್ದ ಗಿಲ್, ಟೆಸ್ಟ್ ಸರಣಿ ಮತ್ತು ನಂತರ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಅಂದಿನಿಂದ ಅವರು ಚೇತರಿಕೆ ಮತ್ತು ಪುನರ್ವಸತಿಗೆ ಒಳಗಾಗುತ್ತಿದ್ದಾರೆ.
ಆದಾಗ್ಯೂ, ಆಯ್ಕೆದಾರರು ಗಿಲ್ ಅವರನ್ನು ತಂಡದಲ್ಲಿಯೇ ಉಳಿಸಿಕೊಳ್ಳಲು ನಿರ್ಧರಿಸಿದ್ದು, ಅವರು ತಂಡಕ್ಕೆ ಮರಳುವುದು ಅವರ ಫಿಟ್ನೆಸ್ ಮೇಲೆ ಅವಲಂಬಿತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಗಿಲ್ ಜೊತೆಗೆ ಹಾರ್ದಿಕ್ ಪಾಂಡ್ಯ ಕೂಡ ಎರಡು ತಿಂಗಳ ನಂತರ ಟೀಂ ಇಂಡಿಯಾಕ್ಕೆ ಮರಳುತ್ತಿದ್ದಾರೆ. ಕೊನೆಯ ಬಾರಿಗೆ 2025 ರ ಏಷ್ಯಾಕಪ್‌ನಲ್ಲಿ ಫೈನಲ್‌ಗೂ ಮೊದಲು ತಂಡದಲ್ಲಿ ಆಡಿದ್ದ ಪಾಂಡ್ಯ ಅಂದಿನಿಂದ ತಂಡದಿಂದ ಹೊರಗುಳಿದಿದ್ದರು. ಆದರೆ ಇತ್ತೀಚೆಗೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಟಕ್ಕೆ ಮರಳಿದ್ದ ಹಾರ್ದಿಕ್ ತಮ್ಮ ಫಿಟ್ನೆಸ್ ಅನ್ನು ಸಾಬೀತುಪಡಿಸಿದ್ದರು.
🚨 NEWS 🚨#TeamIndia‘s squad for the 5⃣-match T20I series against South Africa announced.
Details ▶️ https://t.co/3Bscuq6Gri #INDvSA | @IDFCFIRSTBank pic.twitter.com/0bHLCcbwTD
— BCCI (@BCCI) December 3, 2025
ರಿಂಕು-ರೆಡ್ಡಿ ಔಟ್
ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಈ ಸರಣಿಗೂ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ಸರಣಿಯನ್ನು ಆಡಿದ ತಂಡವನ್ನು ಉಳಿಸಿಕೊಂಡಿದೆ. ಹಾರ್ದಿಕ್ ಪಾಂಡ್ಯ ವಿಷಯದಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ರಿಂಕು ಸಿಂಗ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ಸರಣಿಯಲ್ಲಿ ರಿಂಕುಗೆ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಆಡಲು ಅವಕಾಶ ಸಿಕ್ಕಿತು, ಆದರೆ ಆ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಅದಕ್ಕೂ ಮೊದಲು ಏಷ್ಯಾಕಪ್‌ನಲ್ಲಿ ಅವರು ಕೇವಲ ಒಂದು ಪಂದ್ಯವನ್ನು ಆಡಿದ್ದರು. ಒಟ್ಟಾರೆಯಾಗಿ, ಈ ವರ್ಷ ಐದು ಟಿ20 ಪಂದ್ಯಗಳಲ್ಲಿ ರಿಂಕುಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಸಿಕ್ಕಿದ್ದು, ಅವುಗಳಲ್ಲಿ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ರಿಂಕು ಜೊತೆಗೆ, ನಿತೀಶ್ ಕುಮಾರ್ ರೆಡ್ಡಿ ಅವರನ್ನು ಸಹ ಈ ಸರಣಿಯಿಂದ ಹೊರಗಿಡಲಾಗಿದೆ.
PAK vs SL: ಟಿ20 ಯಲ್ಲಿ ಅತಿ ಹೆಚ್ಚು ಸೊನ್ನೆ; ಮತ್ತೊಂದು ಬೇಡದ ದಾಖಲೆ ಬರೆದ ಬಾಬರ್
ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್‌ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ಸಂಜು ಸ್ಯಾಮ್ಸನ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:56 pm, Wed, 3 December 25
