IND vs WI: ಟೀಮ್ ಇಂಡಿಯಾ ಟಿ20 ತಂಡದಿಂದ ಯಾರಿಗೆಲ್ಲಾ ವಿಶ್ರಾಂತಿ..?

India T20 Squad WI Tour: ಈಗಾಗಲೇ ವೆಸ್ಟ್ ಇಂಡೀಸ್ ವಿರುದ್ದದ 3 ಪಂದ್ಯಗಳ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಈ ತಂಡದಿಂದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಸೇರಿದಂತೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

IND vs WI: ಟೀಮ್ ಇಂಡಿಯಾ ಟಿ20 ತಂಡದಿಂದ ಯಾರಿಗೆಲ್ಲಾ ವಿಶ್ರಾಂತಿ..?
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 14, 2022 | 1:54 PM

ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಗೆ ಶೀಘ್ರದಲ್ಲೇ ಟೀಮ್ ಇಂಡಿಯಾವನ್ನು (Team India) ಆಯ್ಕೆ ಮಾಡಲಾಗುತ್ತದೆ. 5 ಪಂದ್ಯಗಳ ಈ ಸರಣಿಯಿಂದ ಟೀಮ್ ಇಂಡಿಯಾದ ಇಬ್ಬರು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗುತ್ತದೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಅದರಂತೆ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ವಿಂಡೀಸ್​ ವಿರುದ್ದದ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಹಾಗೆಯೇ ಇಂಗ್ಲೆಂಡ್ ವಿರುದ್ದದ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿರುವ ಜಸ್​ಪ್ರೀತ್ ಬುಮ್ರಾ ಕೂಡ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.

ಟಿ20 ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ವಿರಾಟ್ ಕೊಹ್ಲಿ ಹಾಗೂ ಜಸ್​ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲು ಟೀಮ್ ಇಂಡಿಯಾ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇತ್ತ ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಯ ವೇಳೆ ಗಾಯಗೊಂಡಿರುವ ಕೊಹ್ಲಿ ಮೊದಲ ಪಂದ್ಯವನ್ನು ಆಡಿರಲಿಲ್ಲ. ಹಾಗೆಯೇ 2ನೇ ಪಂದ್ಯಕ್ಕೂ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಿಂದಲೂ ಕೊಹ್ಲಿಗೆ ವಿಶ್ರಾಂತಿ ಪಡೆಯಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.

ಇನ್ನು ವಿರಾಟ್ ಕೊಹ್ಲಿಯ ಸ್ಥಾನದಲ್ಲಿ ಕೆಎಲ್ ರಾಹುಲ್ ಕಂಬ್ಯಾಕ್ ಮಾಡಲಿದ್ದಾರೆ ಎಂದು ತಿಳಿಸಲಾಗಿದೆ. ಸೌತ್ ಆಫ್ರಿಕಾ ವಿರುದ್ದದ ಸರಣಿಯ ವೇಳೆ ಗಾಯಗೊಂಡಿದ್ದ ರಾಹುಲ್ ಇಂಗ್ಲೆಂಡ್ ವಿರುದ್ದದ ಸರಣಿಯಿಂದ ಹೊರಗುಳಿದಿದ್ದರು. ಇದೀಗ ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಯ ಮೂಲಕ ಟೀಮ್ ಇಂಡಿಯಾಗೆ ಮರಳಲು ಸಿದ್ದತೆಯನ್ನು ಆರಂಭಿಸಿದ್ದಾರೆ.

ಇದನ್ನೂ ಓದಿ
Image
Virat Kohli: ವಿರಾಟ್ ಕೊಹ್ಲಿಯ ಫಾರ್ಮ್​ ಬಗ್ಗೆ ಟೀಕೆ ಮಾಡುವ ಮುನ್ನ ಈ ಅಂಕಿ ಅಂಶಗಳನ್ನೊಮ್ಮೆ ನೋಡಿ..!
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಹಾಗೆಯೇ ಚೈನಾಮನ್ ಸ್ಪಿನ್ನರ್ ಕುಲ್ದೀಪ್​ ಯಾದವ್​ಗೆ ಮತ್ತೆ ಅವಕಾಶ ಸಿಗುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಗೆ ಆಯ್ಕೆಯಾಗಿದ್ದ ಕುಲ್ದೀಪ್ ಅಭ್ಯಾಸದ ವೇಳೆ ಗಾಯಗೊಂಡಿದ್ದರು. ಇದೀಗ ಪೂರ್ಣ ಗುಣಮುಖರಾಗಿರುವ ಕುಲ್ದೀಪ್ ಯಾದವ್ ವೆಸ್ಟ್ ಇಂಡೀಸ್ ವಿರುದ್ದದ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಇನ್ನು ಈಗಾಗಲೇ ವೆಸ್ಟ್ ಇಂಡೀಸ್ ವಿರುದ್ದದ 3 ಪಂದ್ಯಗಳ ಏಕದಿನ ಸರಣಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಈ ತಂಡದಿಂದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಸೇರಿದಂತೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಗೆ ಟೀಮ್ ಇಂಡಿಯಾ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ) ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್

ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಅಧಿಕಾರಿಗಳು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಅಧಿಕಾರಿಗಳು, ಗ್ರಾಮಸ್ಥರ ಆಕ್ರೋಶ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು