AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India T20 WC Jersey: ಟಿ20 ವಿಶ್ವಕಪ್​ನಲ್ಲಿ ಹೊಸ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ

Team India New Jersey for T20 World Cup 2022: ಈ ಬಾರಿಯ ಟಿ20 ವಿಶ್ವಕಪ್​ ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದು, ಈ ಟೂರ್ನಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ಸೀಮಿತ ಓವರ್​ಗಳ ಸರಣಿ ಆಡಲಿದೆ.

India T20 WC Jersey: ಟಿ20 ವಿಶ್ವಕಪ್​ನಲ್ಲಿ ಹೊಸ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಟೀಮ್ ಇಂಡಿಯಾ
Team India New Jersey
TV9 Web
| Edited By: |

Updated on:Sep 13, 2022 | 4:45 PM

Share

Team India New Jersey for T20 World Cup 2022: ಟಿ20 ವಿಶ್ವಕಪ್​ಗಾಗಿ ಟೀಮ್ ಇಂಡಿಯಾ (Team India) ಘೋಷಣೆಯ ಬೆನ್ನಲ್ಲೇ ಇದೀಗ ಬಿಸಿಸಿಐ (BCCI) ತಂಡದ ಹೊಸ ಜೆರ್ಸಿಯನ್ನು ಅನಾವರಣಗೊಳಿಸಲು ಮುಂದಾಗಿದೆ. ಅಂದರೆ ಟೀಮ್ ಇಂಡಿಯಾ ಟಿ20 ವಿಶ್ವಕಪ್​ನಲ್ಲಿ ಹೊಸ ಬಣ್ಣದ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಭಾರತ ತಂಡದ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಧರಿಸುವ ಜೆರ್ಸಿಯನ್ನು ಶೀಘ್ರದಲ್ಲೇ ಅನವಾರಣಗೊಳಿಸುವುದಾಗಿ ವಿಡಿಯೋ ಮೂಲಕ ತಿಳಿಸಲಾಗಿದೆ.

ಈ ವಿಡಿಯೋದಲ್ಲಿ ನಾಯಕ ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದು, ಟೀಮ್ ಇಂಡಿಯಾದ ಅಧಿಕೃತ ಕಿಟ್ ಪ್ರಾಯೋಜಕ MPL ನ ವೆಬ್‌ಸೈಟ್‌ಗೆ ಭೇಟಿ ನೀಡಲು ಮತ್ತು ಇತರೆ ಇನ್‌ಪುಟ್‌ಗಳನ್ನು ಪಡೆದುಕೊಳ್ಳುವಂತೆ ಈ ವಿಡಿಯೋದಲ್ಲಿ ಅಭಿಮಾನಿಗಳಿಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಹಾಗೆಯೇ ವಿಶೇಷ ವಿಡಿಯೋದಲ್ಲಿ ಅಭಿಮಾನಿಗಳೇ ನೀವು ನಮ್ಮನ್ನು ಇಂದು ಕ್ರಿಕೆಟಿಗರನ್ನಾಗಿ ಮಾಡಿದ್ದೀರಿ ಎಂದು ರೋಹಿತ್ ಶರ್ಮಾ ಹೇಳಿದರೆ, ನಿಮ್ಮ ಬೆಂಬಲವಿಲ್ಲದೆ ಆಟವು ಪರಿಪೂರ್ಣವಾಗಿರಲ್ಲ ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ. ಹಾಗೆಯೇ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಟೀಮ್ ಇಂಡಿಯಾದ ಹೊಸ ಜೆರ್ಸಿಯ ಭಾಗವಾಗಿರಿ ಎಂದು ಹಾರ್ದಿಕ್ ಪಾಂಡ್ಯ ಈ ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ.

ವಿಶೇಷ ಎಂದರೆ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಹಾಗೂ ರೋಹಿತ್ ಶರ್ಮಾ ಟೀಮ್ ಇಂಡಿಯಾದ ​ ಟ್ರ್ಯಾಕ್​ ಸೂಟ್​ ಧರಿಸಿದ್ದಾರೆ. ಇದೇ ವೇಳೆ ಇಬ್ಬರು ತಿಳಿ ನೀಲಿ ಬಣ್ಣದ ಜೆರ್ಸಿಯನ್ನು ಧರಿಸಿರುವುದು ಸ್ಪಷ್ಟವಾಗಿ ಕಾಣಸಿಗುತ್ತದೆ. ಅಂದರೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಹಳೆಯ ಮಾದರಿಯ ತಿಳಿ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಕಳೆದ ಟಿ20 ವಿಶ್ವಕಪ್​ನಿಂದ ಟೀಮ್ ಇಂಡಿಯಾ ಕಡು ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿಯುತ್ತಿದೆ. ಆದರೆ ಆ ಜೆರ್ಸಿಯು ನಿರೀಕ್ಷಿತ ಮಟ್ಟದಲ್ಲಿ ಅಭಿಮಾನಿಗಳನ್ನು ಸೆಳೆದಿರಲಿಲ್ಲ. ಇದೀಗ ಹಳೆಯ ಆಕಾಶ ನೀಲಿ ಜೆರ್ಸಿಯಲ್ಲೇ ಮತ್ತೆ ಟೀಮ್ ಇಂಡಿಯಾ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು.

ಈ ಬಾರಿಯ ಟಿ20 ವಿಶ್ವಕಪ್​ ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದು, ಈ ಟೂರ್ನಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧ ಸೀಮಿತ ಓವರ್​ಗಳ ಸರಣಿ ಆಡಲಿದೆ.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

 ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

Published On - 4:34 pm, Tue, 13 September 22

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ