ICC T20 World Cup: ಐಸಿಸಿ ಟಿ20 ವಿಶ್ವಕಪ್​ಗೆ ಭಾರತ ತಂಡ ಈ ದಿನಾಂಕದಂದು ಪ್ರಕಟ: ಯಾರಿಗೆಲ್ಲ ಅವಕಾಶ?

India T20 WC Squad: ಇದೀಗ ಬಂದಿರುವ ಮಾಹಿತಿ ಪ್ರಕಾರ ಸೆಪ್ಟಂಬರ್ 16 ರಂದು ಬಿಸಿಸಿಐ ಟಿ20 ವಿಶ್ವಕಪ್​​​ಗೆ 16 ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟ ಮಾಡಲಿದೆಯಂತೆ.

ICC T20 World Cup: ಐಸಿಸಿ ಟಿ20 ವಿಶ್ವಕಪ್​ಗೆ ಭಾರತ ತಂಡ ಈ ದಿನಾಂಕದಂದು ಪ್ರಕಟ: ಯಾರಿಗೆಲ್ಲ ಅವಕಾಶ?
India T20 WC Squad
Follow us
TV9 Web
| Updated By: Vinay Bhat

Updated on:Sep 10, 2022 | 10:46 AM

ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಮಹಾಟೂರ್ನಿ ಹತ್ತಿರವಾಗುತ್ತಿದೆ. ಮುಂದಿನ ತಿಂಗಳು ಅಕ್ಟೋಬರ್ 16ಕ್ಕೆ ಈ ಚಟುಕು ವಿಶ್ವಕಪ್​ಗೆ ಚಾಲನೆ ಸಿಗಲಿದ್ದು, ಈಗಾಗಲೆ ಕೆಲವು ತಂಡಗಳು ಕೂಡ ಪ್ರಕಟವಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇನ್ನಷ್ಟೆ ಟೀಮ್ ಇಂಡಿಯಾವನ್ನು ವಿಶ್ವಕಪ್​ಗೆ ಹೆಸರಿಸಬೇಕಿದೆ. ಇದೀಗ ಬಂದಿರುವ ಮಾಹಿತಿ ಪ್ರಕಾರ ಸೆಪ್ಟಂಬರ್ 16 ರಂದು ಬಿಸಿಸಿಐ ಟಿ20 ವಿಶ್ವಕಪ್​​ಗೆ 16 ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟ ಮಾಡಲಿದೆಯಂತೆ. ಟೀಮ್ ಇಂಡಿಯಾದಲ್ಲಿ (Team India) ಇಂಜುರಿಯಿಂದ ಅನೇಕ ಆಟಗಾರರು ಬಳಲುತ್ತಿದ್ದು, ಸೆ. 16ಕ್ಕೂ ಮುನ್ನ ಬೆಂಗಳೂರಿನ ಎನ್​ಸಿಯನಲ್ಲಿ ಫಿಟ್​ನೆಸ್ ಪರೀಕ್ಷೆಗೆ ಒಳಗಾಗ ಬೇಕಿದೆ ಎಂದು ಬಿಸಿಸಿಐ ಹೇಳಿದೆ.

ಮುಖ್ಯವಾಗಿ ಯಾರ್ಕರ್ ಕಿಂಗ್ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಮೇಲೆ ಎಲ್ಲರ ಕಣ್ಣಿದೆ. ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದರೆ, ಹರ್ಷಲ್ ಪಕ್ಕೆಲುಬು ಗಾಯಕ್ಕೆ ತುತ್ತಾಗಿದ್ದರು. ಈಗಾಗಲೇ ಅನೇಕ ಪಂದ್ಯಗಳಿಂದ ಹೊರಗುಳಿದಿರುವ ಇವರು ಸದ್ಯ ಫಿಟ್​ನೆಸ್ ಟೆಸ್ಟ್​ನಲ್ಲಿ ಉತ್ತೀರ್ಣರಾಗಿ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆಯುತ್ತಾರ ಎಂಬುದು ನೋಡಬೇಕಿದೆ.

ಈ ಬಗ್ಗೆ ಇನ್​ಸೈಡ್ ಸ್ಪೋರ್ಟ್ಸ್​​ ಜೊತೆ ಮಾತನಾಡಿರುವ ಬಿಸಿಸಿಐ ಆಯ್ಕೆ ಸಮಿತಿ ಅಧಿಕಾರಿಯೊಬ್ಬರು, ”ಸದ್ಯದಲ್ಲೇ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನ ಪ್ರಕಟ ಮಾಡುತ್ತೇವೆ. ಇದಕ್ಕೂ ಮುನ್ನ ನಮಗೆ ಹರ್ಷಲ್ ಹಾಗೂ ಜಸ್​ಪ್ರೀತ್ ಬುಮ್ರಾ ಅವರ ಫಿಟ್​ನೆಸ್ ಅಪ್ಡೇಟ್ ಬೇಕಿದೆ. ಇದು ಆದ ತಕ್ಷಣ ತಂಡವನ್ನು ಹೆಸರಿಸುತ್ತೇವೆ. ಈ ವಾರವೇ ಬುಮ್ರಾ ಫಿಟ್​ನೆಸ್ ಟೆಸ್ಟ್​ಗೆ ಒಳಗಾಗಲಿದ್ದಾರೆ,” ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
Virender Sehwag: ಫಿನಿಶರ್ ಅಂತ ಆಯ್ಕೆ ಮಾಡಿ, ಡ್ರೆಸ್ಸಿಂಗ್ ರೂಮ್​ನಲ್ಲಿ ಕೂರಿಸಿದ್ರೆ, ಪಂದ್ಯ ಗೆಲ್ಲಕ್ಕಾಗುತ್ತಾ?
Image
Virat Kohli: ವಿರಾಟ್ ಕೊಹ್ಲಿ ದಾಖಲೆಯ ಶತಕ ಸಿಡಿಸುವ ಮುನ್ನ ಕ್ರೀಸ್​ನಲ್ಲಿ ಏನು ಮಾಡಿದ್ರು ನೋಡಿ
Image
SL vs PAK: ಏಷ್ಯಾಕಪ್ ಫೈನಲ್​ಗೂ ಮುನ್ನ ಪಾಕಿಸ್ತಾನಕ್ಕೆ ಮಣ್ಣು ಮುಕ್ಕಿಸಿದ ಶ್ರೀಲಂಕಾ
Image
Aaron Finch retires: ಕಳಪೆ ಫಾರ್ಮ್: ಏಕದಿನ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ ಆ್ಯರೋನ್ ಫಿಂಚ್

ಮೂಲಗಳ ಪ್ರಕಾರ, ಹರ್ಷಲ್ ಪಟೇಲ್ ಫಿಟ್ ಆಗಿದ್ದು ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್ ಮಾಡಲು ಸಿದ್ಧರಾಗಿದ್ದಾರೆ. ಆದರೆ, ಬುಮ್ರಾ ಆಡುವ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಹರ್ಷಲ್ ನೆಟ್​ನಲ್ಲಿ ಬೌಲಿಂಗ್ ಅಭ್ಯಾಸ ಕೂಡ ಶುರು ಮಾಡಿಕೊಂಡಿದ್ದಾರೆ. ಇನ್ನು ರವೀಂದ್ರ ಜಡೇಜಾ ಅವರಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು ಇವರು ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಾರೆ. ಇವೆಲ್ಲದರ ನಡುವೆ ಬಹುಕಾಲದ ಬಳಿಕ ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಸೇರಿಕೊಳ್ಳುವ ಸಂಭವವಿದೆ ಎಂಬ ಮಾತುಕೂಡ ಕೇಳಿಬರುತ್ತಿದೆ.

ಟಿ20 ವಿಶ್ವಕಪ್​ಗೆ ತಂಡವನ್ನು ಪ್ರಕಟ ಮಾಡಲು ಸೆಪ್ಟಂಬರ್ 16 ಕೊನೆಯ ದಿನಾಂಕವಾಗಿದೆ. ಇದಕ್ಕೂ ಮುನ್ನ ಬಿಸಿಸಿಐ ಅಧಿಕಾರಿಗಳು, ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಸಭೆ ಸೇರಿ ಚರ್ಚಿಸಬೇಕಿದೆ. ಈಗಾಗಲೇ ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ತಮ್ಮ ಟೀಮ್ ಅನ್ನು ಪ್ರಕಟ ಮಾಡಿದೆ.

Published On - 10:44 am, Sat, 10 September 22

ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ