AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ

2026 T20 World Cup India squad: 2026ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಅಜಿತ್ ಅಗರ್ಕರ್ ಸಮಿತಿ ಆಯ್ಕೆ ಮಾಡಿದ 15 ಸದಸ್ಯರ ತಂಡದಲ್ಲಿ ಮುಂಬೈ ಇಂಡಿಯನ್ಸ್‌ನ 4 ಆಟಗಾರರು ಸೇರಿದಂತೆ ಏಳು ಐಪಿಎಲ್ ತಂಡಗಳ ಆಟಗಾರರಿಗೆ ಸ್ಥಾನ ಸಿಕ್ಕಿದೆ. ಆದರೆ, ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳಿಂದ ಒಬ್ಬರೂ ಆಯ್ಕೆಯಾಗಿಲ್ಲ. ಈ ಬಾರಿ ಭಾರತವೇ ಚಾಂಪಿಯನ್ ಆಗುವ ವಿಶ್ವಾಸವಿದೆ.

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ
T20 World Cup 2026
ಪೃಥ್ವಿಶಂಕರ
|

Updated on: Dec 21, 2025 | 3:18 PM

Share

2026 ರ ಟಿ20 ವಿಶ್ವಕಪ್‌ಗಾಗಿ ಹಾಲಿ ಚಾಂಪಿಯನ್ ಟೀಂ ಇಂಡಿಯಾವನ್ನು ಘೋಷಿಸಲಾಗಿದೆ. ಡಿಸೆಂಬರ್ 20 ರಂದು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಆ ನಂತರ ನಡೆಯಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರ ಬಲಿಷ್ಠ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಪ್ರಕಟಿಸಿದೆ. ಆಯ್ಕೆಯಾದ ತಂಡದಲ್ಲಿ ಭಾಗಶಃ ಎಲ್ಲರೂ ನಿರೀಕ್ಷಿಸಿದ್ದ ಆಟಗಾರರೇ ಇದ್ದು, ಈ ಬಾರಿಯೂ ಭಾರತವೇ ಚಾಂಪಿಯನ್ ಆಗುವ ಲಕ್ಷಣಗಳು ಗೋಚರಿಸುತ್ತಿವೆ. ಆದಾಗ್ಯೂ ಈ ಟೂರ್ನಿಗೆ ಆಯ್ಕೆಯಾದ ಆಟಗಾರರಲ್ಲಿ ಆರ್‌ಸಿಬಿ ಸೇರಿದಂತೆ ಮೂರು ಐಪಿಎಲ್ ತಂಡಗಳ ಆಟಗಾರರು ಆಯ್ಕೆಯಾಗದಿರುವುದು ಗಮನಿಸಬೇಕಾದ ಸಂಗತಿಯಾಗಿದೆ. ಇದರರ್ಥ 10 ಐಪಿಎಲ್ ತಂಡಗಳಲ್ಲಿ, ಏಳು ತಂಡಗಳ ಆಟಗಾರರು ಮಾತ್ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಯಾವ ಐಪಿಎಲ್ ತಂಡಗಳ ಆಟಗಾರರಿಗೆ ಅವಕಾಶ ಸಿಕ್ಕಿಲ್ಲ?

ಆ ಮೂರು ತಂಡಗಳಲ್ಲಿ ಆರ್‌ಸಿಬಿ, ಲಕ್ನೋ ಸೂಪರ್​ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳಿಂದ ಒಬ್ಬರು ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿಲ್ಲ. ಈ ಮೂರು ತಂಡಗಳನ್ನು ಹೊರತುಪಡಿಸಿ ಉಳಿದ 7 ತಂಡಗಳಲ್ಲಿ ಒಬ್ಬರಾದರೂ ಆಟಗಾರರು ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಯಾವ ತಂಡದಿಂದ ಹೆಚ್ಚಿನ ಆಟಗಾರರ ಆಯ್ಕೆ?

2026 ರ ಟಿ20 ವಿಶ್ವಕಪ್‌ಗೆ ಆಯ್ಕೆಯಾದ ಟೀಂ ಇಂಡಿಯಾದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು ಪಾರುಪತ್ಯ ಮೇರೆದಿದ್ದಾರೆ. ಈ ತಂಡದಿಂದ ನಾಲ್ವರು ಆಟಗಾರು ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಿಂದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ತಿಲಕ್ ವರ್ಮಾ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದ್ದಾರೆ.

ಮುಂಬೈ ಇಂಡಿಯನ್ಸ್ ನಂತರ, ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಮೂವರು ಆಟಗಾರರು ಆಯ್ಕೆಯಾಗಿದ್ದಾರೆ. ಅವರಲ್ಲಿ ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಮತ್ತು ರಿಂಕು ಸಿಂಗ್ ಸೇರಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಿಂದ ತಲಾ ಇಬ್ಬರು ಆಟಗಾರರನ್ನು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್‌ನಿಂದ ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಆಯ್ಕೆಯಾಗಿದ್ದರೆ, ಸಿಎಸ್‌ಕೆ ತಂಡದಿಂದ ಸಂಜು ಸ್ಯಾಮ್ಸನ್ ಮತ್ತು ಶಿವಂ ದುಬೆ ಆಯ್ಕೆಯಾಗಿದ್ದಾರೆ.

ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ 2026 ರ ಟಿ20 ವಿಶ್ವಕಪ್‌ನಲ್ಲಿ ಆಡಲು ಅವಕಾಶ ಪಡೆದಿದ್ದಾರೆ. ಇವರೆಲ್ಲರ ಹೊರತಾಗಿ, ಪಂಜಾಬ್ ಕಿಂಗ್ಸ್‌ ತಂಡದಿಂದ ಅರ್ಷದೀಪ್ ಸಿಂಗ್ ಮತ್ತು ಗುಜರಾತ್ ಟೈಟಾನ್ಸ್‌ ತಂಡದಿಂದ ವಾಷಿಂಗ್ಟನ್ ಸುಂದರ್ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

2026 ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ, ಅಕ್ಷರ್ ಪಟೇಲ್ (ಉಪನಾಯಕ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್‌ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್!
ಚಾಮರಾಜನಗರದಲ್ಲಿ ಶುರುವಾಯ್ತು ಆಪರೇಶನ್ ಬೀಸ್ಟ್!
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ