AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Namibia: ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಪ್ರಮುಖರಿಗೆ ವಿಶ್ರಾಂತಿ: ಭಾರತದ ಪ್ಲೇಯಿಂಗ್ XIನಲ್ಲಿ 4 ಬದಲಾವಣೆ?

India Predicted Playing XI against Namibia: ಟಿ20 ವಿಶ್ವಕಪ್​ನ ಇಂದಿನ ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಭಾರತದ ಪ್ರಮುಖ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡುವ ಸಂಭವವಿದೆ.

India vs Namibia: ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಪ್ರಮುಖರಿಗೆ ವಿಶ್ರಾಂತಿ: ಭಾರತದ ಪ್ಲೇಯಿಂಗ್ XIನಲ್ಲಿ 4 ಬದಲಾವಣೆ?
India Playing XI vs Namibia
TV9 Web
| Updated By: Vinay Bhat|

Updated on: Nov 08, 2021 | 11:31 AM

Share

ಟೀಮ್ ಇಂಡಿಯಾ (Team India) ಟಿ20 ವಿಶ್ವಕಪ್​ನಲ್ಲಿ (T20 World Cup) ತನ್ನ ಕೊನೇಯ ಲೀಗ್ ಪಂದ್ಯ ಆಡುವುದಕ್ಕೂ ಮುನ್ನವೇ ಟೂರ್ನಿಯಿಂದ ಹೊರಬಿದ್ದಾಗಿದೆ. ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ (New Zealand vs Afghanistan) ತಂಡ ಗೆಲುವು ಸಾಧಿಸುವ ಮೂಲಕ ಭಾರತದ ಸೆಮಿ ಫೈನಲ್ ಕನಸು ಭಗ್ನಗೊಂಡಿತು. ಇದರ ನಡುವೆ ಇಂದು ಭಾರತ ತಂಡ ನಮೀಬಿಯಾ (India vs Namibia) ವಿರುದ್ಧ ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ವಿಶೇಷ ಎಂದರೆ ಭಾರತ ಪರ ವಿರಾಟ್ ಕೊಹ್ಲಿ (Virat Kohli) ನಾಯಕನಾಗಿ ಆಡುತ್ತಿರುವ ಕೊನೇ ಟಿ20 ಪಂದ್ಯ ಇದಾಗಿದೆ. ಉಭಯ ತಂಡಗಳಿಗು ಇದೊಂದು ಔಪಚಾರಿಕ ಪಂದ್ಯ. ಹೀಗಾಗಿ ಈ ಪಂದ್ಯಕ್ಕೆ ಟೀಮ್ ಇಂಡಿಯಾದ (Team India) ಪ್ಲೇಯಿಂಗ್ ಇಲೆವೆನ್​ನಲ್ಲಿ ದೊಡ್ಡ ಬದಲಾವಣೆ ನಿರೀಕ್ಷಿಸಲಾಗಿದೆ. ಪ್ರಮುಖ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಇತರೆ ಆಟಗಾರರಿಗೆ ಅವಕಾಶ (India Playing XI vs Nambia) ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೌದು, ಭಾರತದ ಪ್ರಮುಖ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡುವ ಸಂಭವವಿದೆ. ಹೀಗಾಗಿ ಓಪನರ್​​ಗಳಾಗಿ ಭಾರತ ಪರ ಕೆಎಲ್ ರಾಹುಲ್ ಜೊತೆ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಬಹುದು. ವಿರಾಟ್ ಕೊಹ್ಲಿಗೆ ಇದು ನಾಯಕನಾಗಿ ಕೊನೇಯ ಪಂದ್ಯ ಆಗಿರುವುದರಿಂದ ಮೂರನೇ ಕ್ರಮಾಂಕದಲ್ಲೇ ಆಡಲಿದ್ದಾರೆ. 4ನೇ ಸ್ಥಾನದಲ್ಲಿ ಸೂರ್ಯಕುಮಾರ್ ಕಣಕ್ಕಿಳಿದರೆ ನಂತರದ ಸ್ಥಾನದಲ್ಲಿ ರಿಷಭ್ ಪಂತ್ ಬ್ಯಾಟ್ ಬೀಸಲಿದ್ದಾರೆ.

ಆಲ್ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಇದ್ದರೆ ರವೀಂದ್ರ ಜಡೇಜಾ ಬದಲು ಶಾರ್ದೂಲ್ ಠಾಕೂರ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಅಂತೆಯೆ ಮೊಹಮ್ಮದ್ ಶಮಿ ಬದಲು ರಾಹುಲ್ ಚಹಾರ್, ಜಸ್​ಪ್ರೀತ್ ಬುಮ್ರಾ ಬದಲು ಭುವನೇಶ್ವರ್ ಕುಮಾರ್​ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು. ಉಳಿದಂತೆ ಆರ್. ಅಶ್ವಿನ್ ಮತ್ತು ವರುಣ್ ಚಕ್ರವರ್ತಿ ತಂಡದಲ್ಲಿ ಇರಲಿದ್ದಾರೆ.

2003ರ ಏಕದಿನ ವಿಶ್ವಕಪ್‌ನಲ್ಲಿ ಮೊದಲ ಬಾರಿ ನಮೀಬಿಯ ತಂಡವನ್ನು ಎದುರಿಸಿದ್ದ ಭಾರತಕ್ಕೆ ಇದು ಟಿ20ಯಲ್ಲಿ ಮೊದಲ ಮುಖಾಮುಖಿ ಆಗಿದೆ. ಆಡಿದ ಚೊಚ್ಚಲ ಟಿ20 ವಿಶ್ವಕಪ್‌ನಲ್ಲೇ ನಮೀಬಿಯಾ ಅರ್ಹತಾ ಸುತ್ತಿನಿಂದ ಸೂಪರ್‌ 12 ಹಂತಕ್ಕೆ ಮೊತ್ತ ಮೊದಲ ಬಾರಿ ಅರ್ಹತೆ ಪಡೆದು ಗಮನಾರ್ಹ ಪ್ರದರ್ಶನ ನೀಡಿದೆ. ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ಸೋತರೂ ಕಿವೀಸ್‌ ಬೌಲರ್‌ಗಳನ್ನು ಬೆಂಡೆತ್ತಿ ಗಮನ ಸೆಳೆದಿತ್ತು. ನಮಿಬಿಯಾ ಬೌಲರ್‌ಗಳ ಪ್ರದರ್ಶನವೂ ಉತ್ತಮವಾಗಿದ್ದು, ಭಾರತ ತಂಡ ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ.

ಪಿಚ್ ಹೇಗಿದೆ?:

ಭಾರತ ಟೂರ್ನಿಯಿಂದ ಹೊರಬೀಳಲು ಪ್ರಮುಖ ಕಾರಣ ಆಡಿದ ಮೊದಲ ಎರಡು ಪಂದ್ಯಗಳಲ್ಲಿ ಸೋತಿರುವುದು. ಅದು ಇದೇ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದ ಪಿಚ್​ನಲ್ಲಿ. ಇಲ್ಲಿ ವಿರಾಟ್ ಕೊಹ್ಲಿ ಮೊದಲ ಎರಡೂ ಪಂದ್ಯಗಳಲ್ಲಿ ಟಾಸ್‌ ಸೋತು ಬ್ಯಾಟ್‌ ಮಾಡಿ ಸೋತಿತ್ತು. ಹೀಗಾಗಿ ಟಾಸ್‌ ಗೆದ್ದ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಳ್ಳುವ ಕಡೆಗೆ ಗಮನ ನೀಡಲಿವೆ. 2ನೇ ಇನಿಂಗ್ಸ್‌ ವೇಳೆ ಕ್ರೀಡಾಂಗಣದ ಹುಲ್ಲುಹಾಸಿನ ಮೇಲೆ ತೇವಾಂಶ ಹೆಚ್ಚಾಗುವುದರಿಂದ ಬೌಲರ್‌ಗಳಿಗೆ ಚೆಂಡನ್ನು ಹಿಡಿಯಲು ಕಷ್ಟವಾಗುತ್ತದೆ. ಹೀಗಾಗಿ ರನ್‌ ಚೇಸಿಂಗ್‌ ಇಲ್ಲಿ ಅತ್ಯುತ್ತಮ ಆಯ್ಕೆ.

Devon Conway: ನ್ಯೂಜಿಲೆಂಡ್​ನಿಂದ ನಡೆಯಿತಾ ಮೋಸದಾಟ?: ಔಟ್ ಆದರೂ ಕ್ರೀಸ್​ನಿಂದ ಕದಲದ ಡೆವೋನ್‌ ಕಾನ್ವೇ

Mohan Singh Death: ಅಫ್ಘಾನ್ ನ್ಯೂಜಿಲೆಂಡ್ ಪಂದ್ಯಕ್ಕೂ ಮುನ್ನ ಅಬುಧಾಬಿ ಪಿಚ್ ಕ್ಯೂರೇಟರ್ ಮೋಹನ್‌ ಸಿಂಗ್‌ ನಿಗೂಢ ಸಾವು

(India T20 World cup Predicted Playing XI of Virat Kohli lead India for T20 World Cup 2021 Match Against Namibia)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ