India Test Squad: ಭಾರತ ಟೆಸ್ಟ್ ತಂಡ ಪ್ರಕಟ
India Squad For England Test Series: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ವಿಶೇಷ ಎಂದರೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಲ್ಲದೆ, ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ವಿದೇಶಿ ಸರಣಿ ಆಡಲು ಮುಂದಾಗುತ್ತಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಟೆಸ್ಟ್ (India Test Squad) ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡವನ್ನು ಯುವ ಆಟಗಾರ ಶುಭ್ಮನ್ ಗಿಲ್ (Shubman Gill) ಮುನ್ನಡೆಸಲಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವ ಜಸ್ಪ್ರೀತ್ ಬುಮ್ರಾಗೆ ಲಭಿಸಲಿದೆ ಎನ್ನಲಾಗಿತ್ತು. ಆದರೆ ಭವಿಷ್ಯದ ದೃಷ್ಟಿಯಿಂದ ಗಿಲ್ ಅವರಿಗೆ ನಾಯಕತ್ವ ನೀಡಲಾಗಿದೆ. ಹಾಗೆಯೇ ಉಪನಾಯಕನಾಗಿ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ.
ಇನ್ನು ತಂಡದಲ್ಲಿ ಆರಂಭಿಕರಾಗಿ ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್ ಕಾಣಿಸಿಕೊಂಡಿದ್ದಾರೆ. ಇವರಲ್ಲಿ ಇಬ್ಬರು ಇನಿಂಗ್ಸ್ ಆರಂಭಿಸುವುದು ಖಚಿತ. ಅಲ್ಲದೆ ಮತ್ತೊಬ್ಬರು ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ.
ಮಧ್ಯಮ ಕ್ರಮಾಂಕದ ಬ್ಯಾಟರ್ಗಳಾಗಿ ಕೆಎಲ್ ರಾಹುಲ್, ಕರುಣ್ ನಾಯರ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಯ್ಕೆಯಾಗಿದ್ದಾರೆ.
ಆಲ್ರೌಂಡರ್ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನು ವೇಗದ ಬೌಲರ್ಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್ ಹಾಗೂ ಅರ್ಷದೀಪ್ ಸಿಂಗ್ ಆಯ್ಕೆಯಾಗಿದ್ದಾರೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ…
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್.
ಇದನ್ನೂ ಓದಿ: IPL 2025: ಹೀಗಾದ್ರೆ RCB ಎಲಿಮಿನೇಟರ್ ಪಂದ್ಯವಾಡಬೇಕಾಗುತ್ತೆ..!
ಭಾರತ ಮತ್ತು ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:
- ಮೊದಲ ಟೆಸ್ಟ್: 20-24 ಜೂನ್, 2025 – ಹೆಡ್ಲಿಂಗ್ಲೆ, ಲೀಡ್ಸ್
- 2ನೇ ಟೆಸ್ಟ್: ಜುಲೈ 2-6, 2025 – ಎಡ್ಜ್ಬಾಸ್ಟನ್, ಬರ್ಮಿಂಗ್ಹ್ಯಾಮ್
- 3ನೇ ಟೆಸ್ಟ್: ಜುಲೈ 10-14, 2025 – ಲಾರ್ಡ್ಸ್, ಲಂಡನ್
- 4ನೇ ಟೆಸ್ಟ್: 23-27 ಜುಲೈ, 2025 – ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್
- 5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025 – ದಿ ಓವಲ್, ಲಂಡನ್
Published On - 1:40 pm, Sat, 24 May 25
