AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Test Squad: ಭಾರತ ಟೆಸ್ಟ್ ತಂಡ ಪ್ರಕಟ

India Test Squad 2025: ಭಾರತ ಮತ್ತು ವೆಸ್ಟ್ ಇಂಡೀಸ್ (IND vs WI) ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಅಹಮದಾಬಾದ್ ಹಾಗೂ ದೆಹಲಿಯಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರುಗಳ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾಣಿಸಿಕೊಂಡಿಲ್ಲ.

India Test Squad: ಭಾರತ ಟೆಸ್ಟ್ ತಂಡ ಪ್ರಕಟ
Team India
ಝಾಹಿರ್ ಯೂಸುಫ್
|

Updated on:Sep 25, 2025 | 1:13 PM

Share

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಟೀಮ್ ಇಂಡಿಯಾ ಉಪನಾಯಕ ರಿಷಭ್ ಪಂತ್ ಗಾಯಗೊಂಡಿದ್ದರು. ಹೀಗಾಗಿ ವಿಂಡೀಸ್ ಸರಣಿಯಿಂದ ಹೊರಗುಳಿದಿದ್ದಾರೆ.

ರಿಷಭ್ ಪಂತ್ ಅವರ ಅಲಭ್ಯತೆಯ ನಡುವೆ ಭಾರತ ತಂಡದ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬ್ಯಾಕಪ್ ವಿಕೆಟ್ ಕೀಪರ್ ಆಗಿ ತಮಿಳುನಾಡು ಮೂಲದ ಎನ್​. ಜಗದೀಸನ್ ಆಯ್ಕೆಯಾಗಿದ್ದಾರೆ.

ಇನ್ನುಳಿದಂತೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡ ಬಹುತೇಕ ಆಟಗಾರರು ವಿಂಡೀಸ್​ ಸರಣಿಯಲ್ಲೂ ಕಣಕ್ಕಿಳಿಯಲಿದ್ದಾರೆ. ಅದರಂತೆ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕವು ಶುಭ್​ಮನ್ ಗಿಲ್​ಗೆ ಫಿಕ್ಸ್. ಐದನೇ ಕ್ರಮಾಂಕದಲ್ಲಿ ಧ್ರುವ್ ಜುರೆಲ್ ಕಾಣಿಸಿಕೊಂಡರೆ, ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ. ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ತಂಡದಲ್ಲಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್​ ವಿರುದ್ಧದ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ…

ಭಾರತ ಟೆಸ್ಟ್ ತಂಡ: ಶುಭ್​​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್).

ಇದನ್ನೂ ಓದಿ: ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ಕ್ಯಾಚ್ ಕೈಚೆಲ್ಲಿ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

ಭಾರತ vs ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ:

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಗೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಹಾಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…

ದಿನಾಂಕ ದಿನ ಸಮಯ  ಪಂದ್ಯ ಕ್ರೀಡಾಂಗಣ ನಗರ
ಅಕ್ಟೋಬರ್ 2-6 ಗುರುವಾರ-ಸೋಮ ಬೆಳಗ್ಗೆ 9:30 1ನೇ ಟೆಸ್ಟ್ ನರೇಂದ್ರ ಮೋದಿ ಸ್ಟೇಡಿಯಂ ಅಹಮದಾಬಾದ್
ಅಕ್ಟೋಬರ್ 10-14 ಶುಕ್ರ-ಮಂಗಳ ಬೆಳಗ್ಗೆ 9:30 2ನೇ ಟೆಸ್ಟ್ ಅರುಣ್ ಜೇಟ್ಲಿ ಸ್ಟೇಡಿಯಂ ದೆಹಲಿ

Published On - 12:46 pm, Thu, 25 September 25

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು