IND vs WI: ದೇಶೀ ಕ್ರಿಕೆಟ್​ನ ಸೂಪರ್ ಸ್ಟಾರ್​ಗೆ ಮತ್ತೆ ಮೋಸ; ಇದು ಅನ್ಯಾಯ ಎಂದ ನೆಟ್ಟಿಗರು

India Test Squad vs West Indies: 16 ಸದಸ್ಯರ ಟೆಸ್ಟ್ ತಂಡದಲ್ಲಿ ಸರ್ಫರಾಜ್ ಖಾನ್ ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದು ಟೀಂ ಇಂಡಿಯಾ ಅಭಿಮಾನಿಗಳನ್ನು ಕೆರಳಿಸಿದೆ.

IND vs WI: ದೇಶೀ ಕ್ರಿಕೆಟ್​ನ ಸೂಪರ್ ಸ್ಟಾರ್​ಗೆ ಮತ್ತೆ ಮೋಸ; ಇದು ಅನ್ಯಾಯ ಎಂದ ನೆಟ್ಟಿಗರು
ಸರ್ಫರಾಜ್ ಖಾನ್
Follow us
ಪೃಥ್ವಿಶಂಕರ
|

Updated on: Jun 23, 2023 | 6:41 PM

ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ (India Vs West Indies) ಮೂರು ಮಾದರಿಯ ವಿದೇಶಿ ಸರಣಿಗಾಗಿ ಬಿಸಿಸಿಐ (BCCI) ಟೆಸ್ಟ್ ಹಾಗೂ ಏಕದಿನ ತಂಡವನ್ನು ಪ್ರಕಟಿಸಿದೆ. ಅದರಲ್ಲೂ ಟೆಸ್ಟ್ ಸರಣಿಗೆ ಹಲವು ಹೊಸ ಮುಖಗಳಿಗೆ ಆಧ್ಯತೆ ನೀಡಿರುವ ಆಯ್ಕೆ ಮಂಡಳಿ ಕಳಪೆ ಫಾರ್ಮ್​ನಲ್ಲಿರುವ ಆಟಗಾರರಿಗೆ ತಂಡದಿಂದ ಕೋಕ್ ನೀಡಿದೆ. ಅಂತಹ ಆಟಗಾರರಲ್ಲಿ ಚೇತೇಶ್ವರ್ ಪೂಜಾರ ಹಾಗೂ ವೇಗಿ ಉಮೇಶ್ ಯಾದವ್ ( Cheteshwar Pujara and Umesh Yadav) ಸೇರಿದ್ದಾರೆ. ಹಾಗೇಯೇ ಮೊದಲೇ ಊಹಿಸಿದಂತೆ, ಇನ್-ಫಾರ್ಮ್ ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್ ಮತ್ತು ರುತುರ್ರಾಜ್ ಗಾಯಕ್ವಾಡ್ ( Yashasvi Jaiswal and Ruturraj Gaikwad) ಟೀಂ ಇಂಡಿಯಾಕ್ಕೆ ಎಂಟ್ರಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ 16 ಸದಸ್ಯರ ಟೆಸ್ಟ್ ತಂಡದಲ್ಲಿ ಸರ್ಫರಾಜ್ ಖಾನ್ (Sarfaraz Khan) ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ. ಇದು ಟೀಂ ಇಂಡಿಯಾ ಅಭಿಮಾನಿಗಳನ್ನು ಕೆರಳಿಸಿದೆ.

ನಿರೀಕ್ಷೆಯಂತೆ ಆಯ್ಕೆ ಮಂಡಳಿ ಮುಂದಿನ ಆವೃತ್ತಿಯ ಟೆಸ್ಟ್ ಚಾಂಪಿಯನ್​ಶಿಪ್ ಅನ್ನು ಗಮನದಲ್ಲಿಟ್ಟುಕೊಂಡು ಈ ತಂಡವನ್ನು ಆಯ್ಕೆ ಮಾಡಿದೆ. ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಅಜಿಂಕ್ಯ ರಹಾನೆಯನ್ನು ತಂಡದ ಉಪನಾಯಕನಾಗಿ ಆಯ್ಕೆ ಮಾಡಿದೆ. ಆದರೆ ತಂಡದ ಆಯ್ಕೆಗೂ ಮುನ್ನ ಈ ಬಾರಿ ಟೆಸ್ಟ್ ತಂಡಕ್ಕೆ ಆಯ್ಕೆಯಾಗುವ ಪ್ರಮುಖ ಆಟಗಾರರಲ್ಲಿ ಪ್ರಮುಖರಾಗಿದ್ದ ಸರ್ಫರಾಜ್ ಖಾನ್​ಗೆ ಬಿಸಿಸಿಐ ಮತ್ತೊಮ್ಮೆ ಅನ್ಯಾಯ ಮಾಡಿದೆ.

IND vs WI: ತಂಡದಿಂದಲೇ ಹೊರಬಿದ್ದಿದ್ದ ರಹಾನೆ ಇದೀಗ ಟೀಂ ಇಂಡಿಯಾದ ಉಪನಾಯಕ..!

13 ಶತಕಗಳೊಂದಿಗೆ 3505 ರನ್

25 ವರ್ಷ ವಯಸ್ಸಿನ ಮಧ್ಯಮ ಕ್ರಮಾಂಕದ ಬ್ಯಾಟರ್ ಸರ್ಫರಾಜ್, ಕಳೆದ ಮೂರು ವರ್ಷಗಳಿಂದ ದೇಶೀಯ ಕ್ರಿಕೆಟ್‌ನಲ್ಲಿ ಸಾಕಷ್ಟು ರನ್ ಗಳಿಸಿದ್ದರು. ಹೀಗಾಗಿ ಅವರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡುವ ನಿರೀಕ್ಷೆ ಇತ್ತು. ಈ ಮುಂಬೈ ಬ್ಯಾಟರ್ 27 ಪ್ರಥಮ ದರ್ಜೆ ಪಂದ್ಯಗಳಲ್ಲಿ 79.65 ಸರಾಸರಿಯಲ್ಲಿ 13 ಶತಕಗಳೊಂದಿಗೆ 3505 ರನ್ ಕಲೆ ಹಾಕಿದ್ದಾರೆ. ಆದರೆ ಇನ್ನೂ ಭಾರತದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯದೆ ಇರುವುದು ಯುವ ಕ್ರಿಕೆಟಿಗನಿಗೆ ಆಗುತ್ತಿರುವ ಅನ್ಯಾಯವನ್ನು ಎತ್ತಿ ತೋರಿಸಿದೆ. ಹೀಗಾಗಿ ತಂಡ ಪ್ರಕಟವಾದ ಬಳಿಕ ಬಿಸಿಸಿಐ ವಿರುದ್ಧ ಗುಡುಗಿರುವ ನೆಟ್ಟಿಗರು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ನೆಟ್ಟಿಗರ ಆಕ್ರೋಶ

ಸರ್ಫರಾಜ್ ಖಾನ್ ತಂಡದಲ್ಲಿ ಆಯ್ಕೆಯಾಗದಿರುವ ಬಗ್ಗೆ ಆಯ್ಕೆ ಮಂಡಳಿಯನ್ನು ಗುರಿಯಾಗಿಸಿಕೊಂಡು ಟ್ವೀಟ್ ಮಾಡಿರುವ ನೆಟ್ಟಿಗರು, ಈ ಆಯ್ಕೆ ಮಂಡಳಿ ಕೇವಲ ಐಪಿಎಲ್​ನಲ್ಲಿ ಮಿಂಚಿದವರಿಗೆ ಮಾತ್ರ ಅವಕಾಶ ನೀಡುತ್ತದೆ ಎಂದು ಟೀಕಿಸಿದ್ದಾರೆ. ಇನ್ನು ಕೆಲವರು ಅದ್ಭುತ ಪ್ರತಿಭೆಯನ್ನು ಬಿಸಿಸಿಐ ಕಡೆಗಣಿಸುತ್ತಿದೆ ಎಂದು ಆರೋಪಿಸಿದ್ದಾರೆ. ಅಂತಹ ಕೆಲವು ಟ್ವೀಟ್​ಗಳು ಇಂತಿವೆ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್