
ಬಹುನಿರೀಕ್ಷಿತ ಟಿ20 ವಿಶ್ವಕಪ್ಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ ಚುಟುಕು ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಯುಎಸ್ಎ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಏಕೈಕ ಅಭ್ಯಾಸ ಪಂದ್ಯವಾಡಲಿದೆ. ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ಎದುರಾಳಿ ಸೌತ್ ಆಫ್ರಿಕಾ.
ಫೆಬ್ರವರಿ 4 ರಂದು ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಅಭ್ಯಾಸ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ ಮೂಲಕ ಭಾರತ ತಂಡವು ಟಿ20 ವಿಶ್ವಕಪ್ಗಾಗಿ ಸಕಲ ರೀತಿಯಲ್ಲೂ ಸಜ್ಜಾಗಲಿದೆ.
ಸೌತ್ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದ ಬಳಿಕ ಟೀಮ್ ಇಂಡಿಯಾ ಫೆಬ್ರವರಿ 7 ರಂದು ಯುಎಸ್ಎ ತಂಡದ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಇದಾದ ಬಳಿಕ ಭಾರತ ತಂಡ ನಮೀಬಿಯಾ ವಿರುದ್ಧ ಕಣಕ್ಕಿಳಿಯಲಿದೆ. ಇನ್ನು ಫೆಬ್ರವರಿ 15 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ.
ಹಾಗೆಯೇ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಮ್ ಇಂಡಿಯಾ ನೆದರ್ಲೆಂಡ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ನಾಲ್ಕು ಪಂದ್ಯಗಳ ಬಳಿಕ ಸೂಪರ್-8 ಸುತ್ತಿನ ಪಂದ್ಯಗಳು ಶುರುವಾಗಲಿದೆ.
ಈ ನಾಲ್ಕು ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿದೆ. ಅಂದರೆ 4 ಗ್ರೂಪ್ಗಳ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ. ಅದರಂತೆ ಮೊದಲ ಸುತ್ತಿನ ಬಳಿಕ ಸೂಪರ್-8 ಹಂತದ ಮುಖಾಮುಖಿ ಶುರುವಾಗಲಿದೆ. ಸೂಪರ್-8 ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆಯಲಿದೆ.
ಟಿ20 ವಿಶ್ವಕಪ್ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
ಇದನ್ನೂ ಓದಿ: ಸೋಲಿನ ನಡುವೆಯೂ RCB ತಂಡದ ಭರ್ಜರಿ ದಾಖಲೆ
___________________
___________________
___________________
___________________