ಟಿ20 ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯ-ದಕ್ಷಿಣ ಆಫ್ರಿಕಾಗೆ ಆತಿಥ್ಯ ವಹಿಸಲಿದೆ ಭಾರತ; ಸಂಪೂರ್ಣ ವೇಳಾಪಟ್ಟಿ ಹೀಗಿದೆ
ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ.
ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೂ (T20 World Cup) ಮುನ್ನ ಟೀಂ ಇಂಡಿಯಾ (Team India) ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಏಕದಿನ ಮತ್ತು ಟಿ20 ಸರಣಿಗಳನ್ನು ಆಡಲಿದೆ ಎಂದು ಬಿಸಿಸಿಐ (BCCI) ಮಾಹಿತಿ ನೀಡಿದೆ. ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದಾದ ಬಳಿಕ ಉಭಯ ತಂಡಗಳ ನಡುವೆ ಸಮಾನ ಸಂಖ್ಯೆಯ ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಮತ್ತೊಂದೆಡೆ, ಸೆಪ್ಟೆಂಬರ್ 20 ರಿಂದ ಭಾರತವು ಆಸ್ಟ್ರೇಲಿಯಾವನ್ನು ಆತಿಥ್ಯ ವಹಿಸಲಿದ್ದು ಮೂರು ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 20 ರಂದು ಮೊಹಾಲಿಯಲ್ಲಿ ನಡೆಯಲಿದೆ. ಇದರ ನಂತರ ಎರಡನೇ ಟಿ20 ಸೆಪ್ಟೆಂಬರ್ 23 ರಂದು ನಾಗ್ಪುರದಲ್ಲಿ ಮತ್ತು ಕೊನೆಯ ಪಂದ್ಯ ಹೈದರಾಬಾದ್‌ನಲ್ಲಿ ಸೆಪ್ಟೆಂಬರ್ 25 ರಂದು ನಡೆಯಲಿದೆ. ಇದಾದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಆಡಲಿದೆ. ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 28 ರಂದು ತಿರುವನಂತಪುರದಲ್ಲಿ, ಎರಡನೇ ಪಂದ್ಯ ಅಕ್ಟೋಬರ್ 1 ರಂದು ಗುವಾಹಟಿಯಲ್ಲಿ ಮತ್ತು ಕೊನೆಯ ಪಂದ್ಯ ಅಕ್ಟೋಬರ್ 3 ರಂದು ಇಂದೋರ್‌ನಲ್ಲಿ ನಡೆಯಲಿದೆ. ಟಿ20 ಸರಣಿ ಬಳಿಕ ಏಕದಿನ ಸರಣಿ ನಡೆಯಲಿದೆ.
ಭಾರತ ಏಕಕಾಲಕ್ಕೆ ಎರಡು ಸರಣಿಗಳಲ್ಲಿ ಆಡಲಿದೆ
ಆದರೆ, ಈ ಏಕದಿನ ಸರಣಿಯಲ್ಲಿ ಟಿ20 ವಿಶ್ವಕಪ್‌ನ ತಂಡಕ್ಕೆ ಯಾರು ಆಯ್ಕೆಯಾಗುತ್ತಾರೆ ಎಂಬುದನ್ನು ಹೇಳಲು ಕಷ್ಟಸಾಧ್ಯ. ಏಕೆಂದರೆ ಈ ಸರಣಿ ಆರಂಭವಾಗುವ ವೇಳೆಗೆ ಭಾರತ ತಂಡ ಆಸ್ಟ್ರೇಲಿಯಾಕ್ಕೆ ತೆರಳಲಿದೆ. ಬಿಸಿಸಿಐ ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದು, “ನಮ್ಮ ಕಾರ್ಯದರ್ಶಿ ಜಯ್ ಶಾ ಅವರು ಒಂದೇ ಸಮಯದಲ್ಲಿ ಎರಡು ಬಲಿಷ್ಠ ತಂಡಗಳನ್ನು ಹೊಂದಿದ್ದೇವೆ ಎಂದು ಈಗಾಗಲೇ ಹೇಳಿದ್ದರು. ಈ ಕಾರಣಕ್ಕಾಗಿ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯನ್ನು ಟಿ20 ವಿಶ್ವಕಪ್‌ಗೂ ಮೊದಲು ಆಡಲಿದೆ. ಆದರೆ ವಿಶ್ವಕಪ್ನಲ್ಲಿ ಆಡುವ ಆಟಗಾರರು ಈ ಸರಣಿಯ ಭಾಗವಾಗಿರುವುದಿಲ್ಲ.
ಕೊನೆಯ ಏಕದಿನ ಪಂದ್ಯ ಕೋಲ್ಕತ್ತಾ ಬದಲಿಗೆ ದೆಹಲಿಯಲ್ಲಿ ನಡೆಯಲಿದೆ
ಏಕದಿನ ಸರಣಿಯ ಕೊನೆಯ ಪಂದ್ಯವನ್ನು ಕೋಲ್ಕತ್ತಾದಲ್ಲಿ ನಡೆಸುವ ಯೋಜನೆ ಇತ್ತು ಆದರೆ ಅದು ಆಗಲಿಲ್ಲ ಎಂದು ಮೂಲಗಳು ತಿಳಿಸಿವೆ. ಸರದಿ ನೀತಿಯ ಪ್ರಕಾರ, ಕೊನೆಯ ಏಕದಿನ ಪಂದ್ಯವನ್ನು ಕೋಲ್ಕತ್ತಾದಲ್ಲಿ ನಡೆಸಬೇಕಾಗಿತ್ತು. ಆದರೆ ಆ ಸಮಯದಲ್ಲಿ ದುರ್ಗಾ ಪೂಜೆ ಹಾಗೂ ಹಬ್ಬಗಳು ಇರುವುದರಿಂದ ಕ್ರಿಕೆಟ್ ಪಂದ್ಯಗಳಿಗೆ ಪೊಲೀಸ್ ರಕ್ಷಣೆ ನೀಡಲು ಸಾಧ್ಯವಾಗುವುದಿಲ್ಲ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆ ಹೇಳಿಕೊಂಡಿದೆ. ಅದಕ್ಕಾಗಿಯೇ ಒಂದು ಪಂದ್ಯವನ್ನು ಡೆಲ್ಲಿಗೆ ಬದಲಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Published On - 2:10 pm, Fri, 22 July 22