Team India: ಭಾರತಕ್ಕೆ ಬಂದಿಳಿದ ವಿಶ್ವ ಚಾಂಪಿಯನ್ನರು

T20 World Cup 2024: ಶನಿವಾರ (ಜೂ.29) ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 176 ರನ್ ಕಲೆಹಾಕಿದರೆ, ಸೌತ್ ಆಫ್ರಿಕಾ ತಂಡವು 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಭಾರತ ತಂಡವು 7 ರನ್​ಗಳಿಂದ ಜಯ ಸಾಧಿಸಿ ಟಿ20 ವಿಶ್ವಕಪ್ ಅನ್ನು ಗೆದ್ದುಕೊಂಡಿತ್ತು.

Team India: ಭಾರತಕ್ಕೆ ಬಂದಿಳಿದ ವಿಶ್ವ ಚಾಂಪಿಯನ್ನರು
Team India
Follow us
|

Updated on:Jul 04, 2024 | 8:09 AM

ಟಿ20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾ (Team India) ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದಿದ್ದಾರೆ. ಬಿಸಿಸಿಐ ವ್ಯವಸ್ಥೆ ಮಾಡಿದ ಏರ್​ ಇಂಡಿಯಾ ಚಾರ್ಟರ್ಡ್​ ಫ್ಲೈಟ್​ನಲ್ಲಿ ಭಾರತೀಯ ಆಟಗಾರರು, ಸಿಬ್ಬಂದಿಗಳು ಹಾಗೂ ಕುಟುಂಬಸ್ಥರು ಬಾರ್ಬಡೋಸ್​ನಿಂದ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ವಿಶ್ರಾಂತಿಗಾಗಿ ಹೋಟೆಲ್​ಗೆ ತೆರಳಿದ್ದು, ಬೆಳಗ್ಗೆ 11 ಗಂಟೆಗೆ ವಿಶ್ವಕಪ್ ಟ್ರೋಫಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ.

ಅದ್ಧೂರಿ ಸ್ವಾಗತ:

ಭಾರತ ತಂಡವು ಮುಂಜಾನೆ ಆಗಮಿಸಿದರೂ, ಏರ್​ಪೋರ್ಟ್​ನಲ್ಲಿ ಟೀಮ್ ಇಂಡಿಯಾವನ್ನು ಸ್ವಾಗತಿಸಲು ಅಭಿಮಾನಿಗಳು ಜಮಾಯಿಸಿದ್ದರು. ಅಲ್ಲದೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಟೀಮ್ ಇಂಡಿಯಾ ಘೋಷಣೆಗಳೊಂದಿಗೆ ಭಾರತ ತಂಡವನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಇದೀಗ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಟೀಮ್ ಇಂಡಿಯಾ ಸ್ವಾಗತದ ವಿಡಿಯೋ:

ಟೀಮ್ ಇಂಡಿಯಾ ಆಗಮನ ವಿಳಂಬವೇಕೆ?

ಟಿ20 ವಿಶ್ವಕಪ್ ಫೈನಲ್ ಮುಕ್ತಾಯದ ಬೆನ್ನಲ್ಲೇ ಬಾರ್ಬಡೋಸ್​ನಲ್ಲಿ ಬೆರಿಲ್ ಚಂಡಮಾರುತ ಶುರುವಾಗಿತ್ತು. ಬಿರುಗಾಳಿ ಸಹಿತದ ಭಾರೀ ಮಳೆಯಿಂದಾಗಿ ವಿಮಾನಯಾನಗಳು ಬಂದ್ ಆಗಿದ್ದವು. ಅಲ್ಲದೆ ಬಹುತೇಕ ವಿಮಾನ ನಿಲ್ದಾಣಗಳು ತನ್ನ ಸೇವಾ ಕಾರ್ಯವನ್ನು ಸ್ಥಗಿತಗೊಳಿಸಿತ್ತು. ಇದರಿಂದ ಟೀಮ್ ಇಂಡಿಯಾದ ಹಿಂತಿರುಗುವಿಕೆಯು ವಿಳಂಬವಾಗಿದೆ. ಅದರಂತೆ ಇದೀಗ ಬಿಸಿಸಿಐ ವ್ಯವಸ್ಥೆ ಮಾಡಿದ ವಿಶೇಷ ವಿಮಾನದ ಮೂಲಕ ಭಾರತೀಯ ಆಟಗಾರರು ವಿಶ್ವಕಪ್​ನೊಂದಿಗೆ ತವರಿಗೆ ಹಿಂತಿರುಗಿದ್ದಾರೆ.

ಅದ್ಧೂರಿ ರೋಡ್ ಶೋ:

ಗುರುವಾರ ಸಂಜೆ 5 ಗಂಟೆಗೆ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್‌ನಿಂದ ಮೆರವಣಿಗೆ ಮೂಲಕ ತೆರೆದ ಬಸ್​ನಲ್ಲಿ ಟೀಮ್ ಇಂಡಿಯಾ ವಾಂಖೆಡೆ ಸ್ಟೇಡಿಯಂಗೆ ಆಗಮಿಸಲಿದ್ದಾರೆ. ಅಲ್ಲದೆ ಈ ರೋಡ್​ ಶೋನ ಬಳಿಕ ವಾಂಖೆಡೆ ಕ್ರೀಡಾಂಗಣಕ್ಕೆ ವಿಜಯೋತ್ಸವ ಆಚರಿಸಲಿದ್ದಾರೆ. ಇದೇ ವೇಳೆ ವಿಶ್ವ ಚಾಂಪಿಯನ್ನರಿಗೆ ಬಿಸಿಸಿಐ ಘೋಷಿಸಿರುವ 125 ಕೋಟಿ ರೂ. ಬಹುಮಾನ ಮೊತ್ತವನ್ನು ನೀಡಲಾಗುತ್ತದೆ.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ನಾಯಕ ಯಾರು?

ನೇರ ಪ್ರಸಾರ:

ಟೀಮ್ ಇಂಡಿಯಾದ ವಿಜಯೋತ್ಸವವನ್ನು ಸಂಜೆ 5 ಗಂಟೆಯಿಂದ ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್​ನ ಚಾನೆಲ್​ಗಳಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು. ಹಾಗೆಯೇ ಜಿಯೋ ಸಿನಿಮಾ ಆ್ಯಪ್ ಹಾಗೂ ಸ್ಪೋರ್ಟ್ಸ್ 18 ಚಾನೆಲ್​ಗಳಲ್ಲೂ ಈ ಅದ್ಧೂರಿ ಕಾರ್ಯಕ್ರಮದ ನೇರ ಪ್ರಸಾರ ಇರಲಿದೆ.

Published On - 7:30 am, Thu, 4 July 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ