India Tour of England: ಲಂಡನ್​ನಲ್ಲಿ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Jun 16, 2022 | 1:47 PM

India vs England: ಮುಂಬರುವ ಟಿ20 ವಿಶ್ವಕಪ್​ ಹಿನ್ನಲೆಯಲ್ಲಿ ಇಂಗ್ಲೆಂಡ್ ವಿರುದ್ದದ ಸೀಮಿತ ಓವರ್​ಗಳ ಸರಣಿಯೂ ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದಾಗಿದೆ.

India Tour of England: ಲಂಡನ್​ನಲ್ಲಿ ಟೀಮ್ ಇಂಡಿಯಾ
Team India
Follow us on

India Tour of England: ಜುಲೈ 1 ರಿಂದ ಭಾರತ-ಇಂಗ್ಲೆಂಡ್ (India vs England) ನಡುವಣ ಸರಣಿ ಶುರುವಾಗಲಿದೆ. ಈ ಸರಣಿಯ ಟೆಸ್ಟ್ ಪಂದ್ಯಕ್ಕೆ ಈಗಾಗಲೇ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಈ ತಂಡದಲ್ಲಿರುವ ಪ್ರಮುಖ ಆಟಗಾರರಿಗೆ ಸೌತ್ ಆಫ್ರಿಕಾ (IND vs SA) ವಿರುದ್ದದ ಸರಣಿಯಿಂದ ವಿಶ್ರಾಂತಿ ನೀಡಲಾಗಿತ್ತು. ಅದರಂತೆ ಬುಧವಾರ ಟೀಮ್ ಇಂಡಿಯಾ ಟೆಸ್ಟ್​ ತಂಡದ ಪ್ರಮುಖ ಆಟಗಾರರು ಇಂಗ್ಲೆಂಡ್ ವಿರುದ್ದದ ಸರಣಿಗಾಗಿ ಲಂಡನ್​ಗೆ ಬಂದಿಳಿದಿದ್ದಾರೆ. ಇಂಗ್ಲೆಂಡ್​ಗೆ ತೆರಳಿದ ಪ್ರಮುಖ ಆಟಗಾರರಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬರ್ಮಾ, ಆರ್ ಅಶ್ವಿನ್, ಆಲ್‌ರೌಂಡರ್ ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಪ್ರಸಿದ್ಧ್ ಕೃಷ್ಣ, ಚೇತೇಶ್ವರ ಪೂಜಾರ, ಹನುಮ ವಿಹಾರಿ ಮತ್ತು ವಿಕೆಟ್ ಕೀಪರ್ ಕೆಎಸ್ ಭರತ್ ಇದ್ದಾರೆ.

ಇನ್ನುಳಿದ ಆಟಗಾರರು ಸೌತ್ ಆಫ್ರಿಕಾ ವಿರುದ್ದ ಟಿ20 ಸರಣಿ ಆಡುತ್ತಿದ್ದು ಈ ಸರಣಿಯ ಮುಕ್ತಾಯದ ಬಳಿಕ ಇಂಗ್ಲೆಂಡ್​ಗೆ ಪ್ರಯಾಣಿಸಲಿದ್ದಾರೆ. ಅದರಂತೆ ಕೋಚ್ ರಾಹುಲ್ ದ್ರಾವಿಡ್, ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ಗಾಯದಿಂದ ಚೇತರಿಸಿಕೊಂಡರೆ) ಜೂನ್ 20 ರಂದು ಲಂಡನ್​ಗೆ ತೆರಳಲಿದ್ದಾರೆ.

ಜೂನ್ 24 ರಿಂದ ವಾರ್ಮ್-ಅಪ್ ಮ್ಯಾಚ್ ಶುರುವಾಗಲಿದ್ದು, ಈ ಮೂಲಕ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಲಿದೆ. ಕಳೆದ ವರ್ಷ ನಡೆದ ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಯ ಕೊನೆಯ ಪಂದ್ಯವು ಕೊರೋನಾ ಭೀತಿ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಈ ಪಂದ್ಯವನ್ನು ಜುಲೈ 1 ರಿಂದ 5 ರವರೆಗೆ ಆಡಲಾಗುತ್ತದೆ. ಇದಾದ ಬಳಿಕ ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿಗಳನ್ನು ಆಡಲಿದೆ.

ಇದನ್ನೂ ಓದಿ
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಮುಂಬರುವ ಟಿ20 ವಿಶ್ವಕಪ್​ ಹಿನ್ನಲೆಯಲ್ಲಿ ಇಂಗ್ಲೆಂಡ್ ವಿರುದ್ದದ ಸೀಮಿತ ಓವರ್​ಗಳ ಸರಣಿಯೂ ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದಾಗಿದೆ. ಮತ್ತೊಂದೆಡೆ ಇದೇ ತಿಂಗಳು 26 ಮತ್ತು 28 ರಂದು ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ದ ಟಿ20 ಸರಣಿ ಆಡಲಿದೆ. ಈ ಸರಣಿಗಾಗಿ ಮೀಸಲು ತಂಡವನ್ನು ಆಯ್ಕೆ ಮಾಡಲಾಗಿದ್ದು, ಆ ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಿದ್ದಾರೆ.

ಐರ್ಲೆಂಡ್ ವಿರುದ್ದದ 2 ಪಂದ್ಯಗಳ ಟಿ20 ಸರಣಿಯ ಬಳಿಕ ಪ್ರಮುಖ ಆಟಗಾರರು ಇಂಗ್ಲೆಂಡ್ ವಿರುದ್ದದ ಟಿ20 ಸರಣಿಗಾಗಿ ತೆರಳಲಿದ್ದಾರೆ. ಅದರಂತೆ ಐರ್ಲೆಂಡ್ ವಿರುದ್ದದ ಸರಣಿ ಮುಕ್ತಾಯದ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ದದ ಏಕದಿನ ಹಾಗೂ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗುತ್ತದೆ.

ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ ಹೀಗಿದೆ:

  1. ಜುಲೈ 1 – 5: ಏಕೈಕ ಟೆಸ್ಟ್ ಪಂದ್ಯ (ಎಡ್ಜ್‌ಬಾಸ್ಟನ್)
  2. ಜುಲೈ 7: ಮೊದಲ ಟಿ20 ಪಂದ್ಯ (ಏಜಿಯಾಸ್ ಬೌಲ್)
  3. ಜುಲೈ 9: 2ನೇ ಟಿ20 ಪಂದ್ಯ (ಎಡ್ಜ್‌ಬಾಸ್ಟನ್)
  4. ಜುಲೈ 10: 3ನೇ ಟಿ20 ಪಂದ್ಯ (ಟ್ರೆಂಟ್ ಬ್ರಿಡ್ಜ್)

 

ಏಕದಿನ ಸರಣಿ ವೇಳಾಪಟ್ಟಿ:

  1. ಜುಲೈ 12- ಮೊದಲ ಏಕದಿನ ಪಂದ್ಯ (ಕಿಯಾ ಓವಲ್)
  2. ಜುಲೈ 14- 2ನೇ ಏಕದಿನ ಪಂದ್ಯ (ಲಾರ್ಡ್ಸ್)
  3. ಜುಲೈ 17- 3ನೇ ಏಕದಿನ ಪಂದ್ಯ (ಮ್ಯಾಂಚೆಸ್ಟರ್)

 

ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿಧ್ದ್ ಕೃಷ್ಣ.

 

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:45 pm, Thu, 16 June 22