AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs South Africa: ಭಾರತ-ದಕ್ಷಿಣ ಆಫ್ರಿಕಾ ಸರಣಿ ರದ್ದಾಗುವ ಸಾಧ್ಯತೆ..!

India vs South Africa Test: ಭಾರತದ ಟೆಸ್ಟ್ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್.

India vs South Africa: ಭಾರತ-ದಕ್ಷಿಣ ಆಫ್ರಿಕಾ ಸರಣಿ ರದ್ದಾಗುವ ಸಾಧ್ಯತೆ..!
IND vs SA
TV9 Web
| Edited By: |

Updated on: Dec 19, 2021 | 8:34 PM

Share

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa)  ನಡುವಣ ಟೆಸ್ಟ್ ಸರಣಿಯು ಡಿಸೆಂಬರ್ 26 ರಿಂದ ಶುರುವಾಗಬೇಕಿದೆ. ಆದರೆ ಅತ್ತ ದಕ್ಷಿಣ ಆಫ್ರಿಕಾದಲ್ಲಿ ಕೊರೋನಾಂತಕ ಹೆಚ್ಚಾಗುತ್ತಿದ್ದು, ಹೀಗಾಗಿ ಇದೀಗ ಸರಣಿ ಮೇಲೆ ಕಾರ್ಮೋಡ ಕವಿದಿದೆ. ಏಕೆಂದರೆ ಈಗಾಗಲೇ ಓಮಿಕ್ರಾನ್ ಕೊರೋನಾ ಭೀತಿ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ಬೋರ್ಡ್​ ದೇಶೀಯ ಟೂರ್ನಿಗಳನ್ನು ರದ್ದುಗೊಳಿಸಿದೆ. ಹೀಗಾಗಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಸರಣಿ ಕೂಡ ರದ್ದಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ದಕ್ಷಿಣ ಆಫ್ರಿಕಾ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ನಡೆಯಬೇಕಿದ್ದ ಡಿಸೆಂಬರ್ 16-19 (ವಿಭಾಗ 2) ಮತ್ತು ಡಿಸೆಂಬರ್ 19-22 (ವಿಭಾಗ 1) ದಿನಾಂಕಗಳಲ್ಲಿ ನಡೆಯಬೇಕಿದ್ದ ಐದನೇ ಸುತ್ತಿನ ಪಂದ್ಯಗಳನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಸಿಎಸ್‌ಎ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಏಕೆಂದರೆ ಈ ಪಂದ್ಯಗಳನ್ನು ಜೈವಿಕ-ಸುರಕ್ಷಿತ ಬಬಲ್ ಇಲ್ಲದೆ ಆಡಬೇಕಿತ್ತು. ಈ ಕಾರಣದಿಂದ ಮುಂದೂಡಲು ನಿರ್ಧರಿಸಲಾಗಿದೆ. ನಾಲ್ಕನೇ ಸುತ್ತು ಸೇರಿದಂತೆ ಮುಂದೂಡಲ್ಪಟ್ಟ ಪಂದ್ಯಗಳನ್ನು ಮುಂದಿನ ವರ್ಷಕ್ಕೆ ಮರು ನಿಗದಿಪಡಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಇತ್ತ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಡಿಸೆಂಬರ್ 26 ರಂದು ಸೆಂಚುರಿಯನ್​ನಲ್ಲಿ ಮೊದಲ ಟೆಸ್ಟ್, 2022ರ ಜನವರಿ 3-7 ರ ನಡುವೆ ಜೋಹಾನ್ಸ್‌ಬರ್ಗ್‌ನಲ್ಲಿ ಎರಡನೇ ಟೆಸ್ಟ್ ಪಂದ್ಯ ಮತ್ತು ಮೂರನೇ ಪಂದ್ಯವು ಜನವರಿ 11 ರಿಂದ 15 ರವರೆಗೆ ನ್ಯೂಲ್ಯಾಂಡ್ಸ್ ಕೇಪ್ ಟೌನ್‌ನಲ್ಲಿ ನಡೆಯಲಿದೆ. ಆದರೆ ಸೆಂಚುರಿಯನ್ ಮತ್ತು ಜೋಹಾನ್ಸ್‌ಬರ್ಗ್‌ನಲ್ಲಿ ಕೊರೋನಾದ ಹೊಸ ರೂಪಾಂತರವಾದ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗಿವೆ. ಇಂತಹ ಪರಿಸ್ಥಿತಿಯಲ್ಲಿ ಕ್ರಿಕೆಟ್ ದಕ್ಷಿಣ ಆಫ್ರಿಕಾ ಯಾವುದೇ ರೀತಿಯ ರಿಸ್ಕ್ ತೆಗೆದುಕೊಳ್ಳಲು ಬಯಸುವುದಿಲ್ಲ.

ಕಳೆದ ದಿನದಿಂದ ದಕ್ಷಿಣ ಆಫ್ರಿಕಾದಲ್ಲಿ 25 ಸಾವಿರಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣಗಳು ವರದಿಯಾಗುತ್ತಿವೆ. ಇದರ ನಡುವೆ ಭಾರತ-ದಕ್ಷಿಣ ಆಫ್ರಿಕಾ ನಡುವಣ ಸರಣಿ ನಡೆಸುವುದು ಕೂಡ ದೊಡ್ಡ ಸಾವಾಲಾಗಲಿದೆ. ಹೀಗಾಗಿ ಸರಣಿ ರದ್ದಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈಗಾಗಲೇ ಮುಂಬರುವ ದಿನಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಆಡಬೇಕಿದ್ದ ಸರಣಿಯನ್ನು ಮುಂದೂಡುವುದು ಸೂಕ್ತವೆಂದು ನೆದರ್ಲೆಂಡ್ಸ್ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ. ಆದರೆ ಇದೀಗ ದಕ್ಷಿಣ ಆಫ್ರಿಕಾದಲ್ಲಿ ಉಳಿದಿರುವ ಟೀಮ್ ಇಂಡಿಯಾ ಕೊರೋನಾಂತಕದ ನಡುವೆ ಸರಣಿ ಆಡಲಿದೆಯಾ ಎಂಬುದೇ ಇದೀಗ ದೊಡ್ಡ ಪ್ರಶ್ನೆ.

ದಕ್ಷಿಣ ಆಫ್ರಿಕಾ ಮತ್ತು ಭಾರತ ಕ್ರಿಕೆಟ್ ಸರಣಿ ವೇಳಾಪಟ್ಟಿ ಹೀಗಿದೆ:

ಟೆಸ್ಟ್ ಸರಣಿ: ಮೊದಲ ಟೆಸ್ಟ್ ಪಂದ್ಯ- ಡಿಸೆಂಬರ್. 26-30: ಸೂಪರ್ ಸ್ಪೋರ್ಟ್ ಪಾರ್ಕ್, ಸೆಂಚೂರಿಯನ್ 2ನೇ ಟೆಸ್ಟ್ ಪಂದ್ಯ- ಜನವರಿ 3-7: ವಾಂಡರರ್ಸ್, ಜೋಹಾನ್ಸ್​ಬರ್ಗ್ 3ನೇ ಟೆಸ್ಟ್​ ಪಂದ್ಯ- ಜನವರಿ 11-15: ನ್ಯೂಲ್ಯಾಂಡ್ಸ್, ಕೇಪ್ ಟೌನ್

ಏಕದಿನ ಸರಣಿ: ಮೊದಲ ಪಂದ್ಯ- ಜನವರಿ 19: ಬೋಲ್ಯಾಂಡ್ ಪಾರ್ಕ್, ಪಾರ್ಲ್ 2ನೇ ಪಂದ್ಯ ಜನವರಿ 21: ಬೋಲ್ಯಾಂಡ್ ಪಾರ್ಕ್, ಪಾರ್ಲ್ 3ನೇ ಪಂದ್ಯ ಜನವರಿ 23: ನ್ಯೂಲೆಂಡ್ಸ್, ಕೇಪ್ ಟೌನ್

ಭಾರತದ ಟೆಸ್ಟ್ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್.ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಪ್ರಿಯಾಂಕ್ ಪಾಂಚಾಲ್

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: Sourav Ganguly: ವಿರಾಟ್ ಕೊಹ್ಲಿ ಇಲ್ಲದಿದ್ದಾಗಲೂ ಟೀಮ್ ಇಂಡಿಯಾ ಕಪ್ ಗೆದ್ದಿದೆ!

ಇದನ್ನೂ ಓದಿ: IPL 2022: ಪಂಜಾಬ್ ಕಿಂಗ್ಸ್​ಗೆ ಕನ್ನಡಿಗನೇ ಕಿಂಗ್ ಆಗುವ ಸಾಧ್ಯತೆ..!

(India tour of South Africa: Ahead of Test series, CSA postpones more domestic due to Covid-19 scare)