SA vs IND ODI Series: ಟಿ20 ಸರಣಿ ಮುಕ್ತಾಯ: ಭಾರತ-ಆಫ್ರಿಕಾ ಏಕದಿನ ಸರಣಿ ಯಾವಾಗ?, ಎಷ್ಟು ಗಂಟೆಗೆ?
South Africa vs India 1st ODI Live Streaming: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಸರಣಿ ಮುಕ್ತಾಯಗೊಂಡಿದ್ದು, ಇದೀಗ ಮೂರು ಪಂದ್ಯಗಳ ಏಕದಿನ ಸರಣಿಗೆ ಉಭಯ ತಂಡಗಳು ಸಜ್ಜಾಗುತ್ತಿದೆ. ಭಾರತ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ. ಹಾಗಾದರೆ, ಮೊದಲ ಏಕದಿನ ಯಾವಾಗ?, ಎಲ್ಲಿ ನಡೆಯಲಿದೆ?. ಇಲ್ಲಿದೆ ಮಾಹಿತಿ.
ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಟಿ20 ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳ ಟಿ20 ಸರಣಿ 1-1 ಅಂಕಗಳ ಅಂತರದಿಂದ ಸಮಬಲ ಕಂಡಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾದರೆ, ದ್ವಿತೀಯ ಪಂದ್ಯದಲ್ಲಿ ಆಫ್ರಿಕಾ 5 ವಿಕೆಟ್ಗಳ ಜಯ ಸಾಧಿಸಿತ್ತು. ಗುರುವಾರ ನಡೆದ ಮೂರನೇ ಟಿ20ಯಲ್ಲಿ ಟೀಮ್ ಇಂಡಿಯಾ 106 ರನ್ಗಳಿಂದ ಜಯಿಸಿತು. ಇದೀಗ ಉಭಯ ತಂಡಗಳು ಏಕದಿನ ಸರಣಿಗೆ ಸಜ್ಜಾಗಬೇಕಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಹಾಗಾದರೆ, ಇಂಡೋ-ಆಫ್ರಿಕಾ ಮೊದಲ ಏಕದಿನ ಯಾವಾಗ?, ಎಲ್ಲಿ ನಡೆಯಲಿದೆ?. ಇಲ್ಲಿದೆ ಮಾಹಿತಿ.
ಭಾರತ- ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ ಯಾವಾಗ?
ಡಿಸೆಂಬರ್ 17 ಭಾನುವಾರದಂದು ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಏಕದಿನ ಪಂದ್ಯ ನಡೆಯಲಿದೆ.
ಭಾರತ-ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ ಎಲ್ಲಿ ಆಡಲಾಗುತ್ತದೆ?
ಭಾರತ ಮತ್ತು ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ ಜೋಹಾನ್ಸ್ಬರ್ಗ್ನ ನ್ಯೂ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಭಾರತ-ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ vs ದಕ್ಷಿಣ ಆಫ್ರಿಕಾ ಪ್ರಥಮ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಮತ್ತು ಡಿಸ್ನಿ+ ಹಾಟ್‌ಸ್ಟಾರ್ ಪಂದ್ಯಗಳನ್ನು ಆನ್‌ಲೈನ್‌ನಲ್ಲಿ ಲೈವ್ ಸ್ಟ್ರೀಮ್ ಮಾಡುತ್ತದೆ.
IND vs SA 3rd T20I: 3ನೇ ಟಿ20 ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಸೂರ್ಯಕುಮಾರ್ ಏನು ಹೇಳಿದ್ರು ನೋಡಿ
ಭಾರತ-ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ಹಾಗೂ ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಆರಂಭವಾಗಲಿದೆ.
ಏಕದಿನ ಪಂದ್ಯಕ್ಕೆ ಉಭಯ ತಂಡಗಳು:
ಭಾರತ ಏಕದಿನ ತಂಡ: ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ-ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ದೀಪಕ್ ಚಹರ್.
ದಕ್ಷಿಣ ಆಫ್ರಿಕಾ ಏಕದಿನ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಟೋನಿ ಡಿ ಜೊರ್ಜಿ, ನಾಂಡ್ರೆ ಬರ್ಗರ್, ರೀಜಾ ಹೆಂಡ್ರಿಕ್ಸ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಎಂಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಕೈಲ್ ವೆರ್ರೆನ್, ಲಿಜಾದ್ ವಿಲಿಯಮ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ