AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಮೊದಲ ಟೆಸ್ಟ್​ಗೆ ವಿಂಡೀಸ್ ತಂಡ ಪ್ರಕಟ; ಐತಿಹಾಸಿಕ ಟೆಸ್ಟ್​ಗೆ ಉಭಯ ತಂಡಗಳು ಹೀಗಿವೆ

IND vs WI: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಯಲ್ಲಿರುವ 2 ಟೆಸ್ಟ್ ಪಂದ್ಯಗಳ ಸರಣಿಗೆ ಉಭಯ ತಂಡಗಳು ಪ್ರಕಟವಾಗಿವೆ.

IND vs WI: ಮೊದಲ ಟೆಸ್ಟ್​ಗೆ ವಿಂಡೀಸ್ ತಂಡ ಪ್ರಕಟ; ಐತಿಹಾಸಿಕ ಟೆಸ್ಟ್​ಗೆ ಉಭಯ ತಂಡಗಳು ಹೀಗಿವೆ
ಭಾರತ- ವಿಂಡೀಸ್ ಮೊದಲ ಟೆಸ್ಟ್
ಪೃಥ್ವಿಶಂಕರ
|

Updated on: Jul 08, 2023 | 11:31 AM

Share

ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವೆ ನಡೆಯಲ್ಲಿರುವ 2 ಟೆಸ್ಟ್ ಪಂದ್ಯಗಳ ಸರಣಿಗೆ ಉಭಯ ತಂಡಗಳು ಪ್ರಕಟವಾಗಿವೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಜುಲೈ 12 ರಿಂದ 16 ರವರೆಗೆ ಡೊಮಿನಿಕಾದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ 13 ಸದಸ್ಯರ ತಂಡವನ್ನು ಪ್ರಕಟಿಸಿದೆ. ಎಡಗೈ ಬ್ಯಾಟ್ಸ್‌ಮನ್ ಕಿರ್ಕ್ ಮೆಕೆಂಜಿ (Kirk McKenzie) ಮೊದಲ ಬಾರಿಗೆ ವೆಸ್ಟ್ ಇಂಡೀಸ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಟಿ20ಯಲ್ಲಿ ದ್ವಿಶತಕ ಸಿಡಿಸಿದ ರಹಕೀಮ್ ಕಾರ್ನ್‌ವಾಲ್ (Rakheem Cornwall) ಕೂಡ ಟೆಸ್ಟ್ ತಂಡಕ್ಕೆ ವಾಪಸಾಗಿದ್ದಾರೆ. ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ಇತ್ತ ಬಾರ್ಬಡೋಸ್​ನಲ್ಲಿ ವಾರದಿಂದ ಅಭ್ಯಾಸ ನಡೆಸಿದ ಟೀಂ ಇಂಡಿಯಾ, ಮೊದಲ ಟೆಸ್ಟ್​ಗಾಗಿ ಡೊಮಿನಿಕಾಗೆ ಪ್ರಯಾಣ ಬೆಳೆಸಿದೆ.

ಮೊದಲ ಟೆಸ್ಟ್ ಪಂದ್ಯದೊಂದಿಗೆ ಉಭಯ ತಂಡಗಳು ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಆರಂಭಿಸಲಿವೆ. ಹೀಗಾಗಿ ಉಭಯ ತಂಡಗಳು ಸರಣಿ ಗೆಲುವಿಗಾಗಿ ಪ್ರಯತ್ನಿಸಲಿವೆ. ಇನ್ನು ಈ ಟೆಸ್ಟ್ ಸರಣಿಗೆ ಬಿಸಿಸಿಐ ನಾಲ್ಕು ದಿನಗಳ ಹಿಂದೆಯೇ ಅಂದರೆ, ಜುಲೈ 4 ರಂದು ಟೀಂ ಇಂಡಿಯಾವನ್ನು ಪ್ರಕಟಿಸಿತ್ತು. ನಿರೀಕ್ಷೆಯಂತೆ ಟೀಂ ಇಂಡಿಯಾದಲ್ಲೂ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಉಭಯ ತಂಡಗಳ ಮುಖಾಮುಖಿಯಲ್ಲಿ ಯಾರ ಕೈ ಮೇಲಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.

ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿದ ರುತುರಾಜ್, ಕಿಶನ್​; ಭಾರತ ತಂಡದಲ್ಲಿ ಸಿಗುತ್ತಾ ಅವಕಾಶ?

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೊದಲ ಟೆಸ್ಟ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೂರನೇ ಸೀಸನ್​ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಎರಡೂ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿರುವುದರಿಂದ ವೆಸ್ಟ್ ಇಂಡೀಸ್ ಸರಣಿಯ ಮೇಲೆ ಕಣ್ಣಿಟ್ಟಿದೆ. ಭಾರತ ತಂಡ ಡೊಮಿನಿಕಾ ತಲುಪಿದ್ದರೆ, ಕೆರಿಬಿಯನ್ ತಂಡ ಭಾನುವಾರ ಆಗಮಿಸಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಟೆಸ್ಟ್ ಐತಿಹಾಸಿಕವಾಗಿ ನಡೆಯಲಿದ್ದು, ಉಭಯ ತಂಡಗಳ ನಡುವೆ ನಡೆಯುವ ಮೊದಲ ಟೆಸ್ಟ್ ಪಂದ್ಯ 100ನೇ ಟೆಸ್ಟ್ ಪಂದ್ಯವಾಗಲಿದೆ.

ಟೆಸ್ಟ್ ಸರಣಿಗೆ ಉಭಯ ತಂಡಗಳು

ವೆಸ್ಟ್ ಇಂಡೀಸ್ ತಂಡ: ಕ್ರೇಗ್ ಬೆಥ್‌ವೈಟ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್, ಟಿ ಚಂದ್ರಪಾಲ್, ರಹಕೀಮ್ ಕಾರ್ನ್‌ವಾಲ್, ಜೋಶುವಾ ಡಿ ಸಿಲ್ವಾ, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕಿರ್ಕ್ ಮೆಕೆಂಜಿ, ರೇಯಾನ್, ಕೆಮರ್ ರೋಚ್, ಜೋಮೆಲ್.

ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವೀಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ