ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವೆ ನಡೆಯಲ್ಲಿರುವ 2 ಟೆಸ್ಟ್ ಪಂದ್ಯಗಳ ಸರಣಿಗೆ ಉಭಯ ತಂಡಗಳು ಪ್ರಕಟವಾಗಿವೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಜುಲೈ 12 ರಿಂದ 16 ರವರೆಗೆ ಡೊಮಿನಿಕಾದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ 13 ಸದಸ್ಯರ ತಂಡವನ್ನು ಪ್ರಕಟಿಸಿದೆ. ಎಡಗೈ ಬ್ಯಾಟ್ಸ್‌ಮನ್ ಕಿರ್ಕ್ ಮೆಕೆಂಜಿ (Kirk McKenzie) ಮೊದಲ ಬಾರಿಗೆ ವೆಸ್ಟ್ ಇಂಡೀಸ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಟಿ20ಯಲ್ಲಿ ದ್ವಿಶತಕ ಸಿಡಿಸಿದ ರಹಕೀಮ್ ಕಾರ್ನ್‌ವಾಲ್ (Rakheem Cornwall) ಕೂಡ ಟೆಸ್ಟ್ ತಂಡಕ್ಕೆ ವಾಪಸಾಗಿದ್ದಾರೆ. ತಂಡದಲ್ಲಿ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ಇತ್ತ ಬಾರ್ಬಡೋಸ್ನಲ್ಲಿ ವಾರದಿಂದ ಅಭ್ಯಾಸ ನಡೆಸಿದ ಟೀಂ ಇಂಡಿಯಾ, ಮೊದಲ ಟೆಸ್ಟ್ಗಾಗಿ ಡೊಮಿನಿಕಾಗೆ ಪ್ರಯಾಣ ಬೆಳೆಸಿದೆ.
ಮೊದಲ ಟೆಸ್ಟ್ ಪಂದ್ಯದೊಂದಿಗೆ ಉಭಯ ತಂಡಗಳು ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಆರಂಭಿಸಲಿವೆ. ಹೀಗಾಗಿ ಉಭಯ ತಂಡಗಳು ಸರಣಿ ಗೆಲುವಿಗಾಗಿ ಪ್ರಯತ್ನಿಸಲಿವೆ. ಇನ್ನು ಈ ಟೆಸ್ಟ್ ಸರಣಿಗೆ ಬಿಸಿಸಿಐ ನಾಲ್ಕು ದಿನಗಳ ಹಿಂದೆಯೇ ಅಂದರೆ, ಜುಲೈ 4 ರಂದು ಟೀಂ ಇಂಡಿಯಾವನ್ನು ಪ್ರಕಟಿಸಿತ್ತು. ನಿರೀಕ್ಷೆಯಂತೆ ಟೀಂ ಇಂಡಿಯಾದಲ್ಲೂ ಹಲವು ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ಉಭಯ ತಂಡಗಳ ಮುಖಾಮುಖಿಯಲ್ಲಿ ಯಾರ ಕೈ ಮೇಲಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.
ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿದ ರುತುರಾಜ್, ಕಿಶನ್; ಭಾರತ ತಂಡದಲ್ಲಿ ಸಿಗುತ್ತಾ ಅವಕಾಶ?
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೂರನೇ ಸೀಸನ್ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಎರಡೂ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿರುವುದರಿಂದ ವೆಸ್ಟ್ ಇಂಡೀಸ್ ಸರಣಿಯ ಮೇಲೆ ಕಣ್ಣಿಟ್ಟಿದೆ. ಭಾರತ ತಂಡ ಡೊಮಿನಿಕಾ ತಲುಪಿದ್ದರೆ, ಕೆರಿಬಿಯನ್ ತಂಡ ಭಾನುವಾರ ಆಗಮಿಸಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಟೆಸ್ಟ್ ಐತಿಹಾಸಿಕವಾಗಿ ನಡೆಯಲಿದ್ದು, ಉಭಯ ತಂಡಗಳ ನಡುವೆ ನಡೆಯುವ ಮೊದಲ ಟೆಸ್ಟ್ ಪಂದ್ಯ 100ನೇ ಟೆಸ್ಟ್ ಪಂದ್ಯವಾಗಲಿದೆ.
ವೆಸ್ಟ್ ಇಂಡೀಸ್ ತಂಡ: ಕ್ರೇಗ್ ಬೆಥ್‌ವೈಟ್, ಜೆರ್ಮೈನ್ ಬ್ಲಾಕ್‌ವುಡ್, ಅಲಿಕ್, ಟಿ ಚಂದ್ರಪಾಲ್, ರಹಕೀಮ್ ಕಾರ್ನ್‌ವಾಲ್, ಜೋಶುವಾ ಡಿ ಸಿಲ್ವಾ, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕಿರ್ಕ್ ಮೆಕೆಂಜಿ, ರೇಯಾನ್, ಕೆಮರ್ ರೋಚ್, ಜೋಮೆಲ್.
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವೀಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕಟ್, ನವದೀಪ್ ಸೈನಿ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ