India Tour of West Indies 2023: ಭಾರತ-ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ನಾಳೆಯಿಂದ (ಜುಲೈ 12) ಶುರುವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7.30 ರಿಂದ ಶುರುವಾಗಲಿದೆ. ವೆಸ್ಟ್ ಇಂಡೀಸ್ನಲ್ಲಿ ಇದುವರೆಗೆ ಭಾರತ ತಂಡವು ಒಟ್ಟು 51 ಟೆಸ್ಟ್ ಪಂದ್ಯಗಳನ್ನಾಡಿದೆ. ಇದೀಗ 52ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿ ನಿಂತಿದೆ.
ವಿಶೇಷ ಎಂದರೆ ಈ ಹಿಂದಿನ ಅಂಕಿ ಅಂಶಗಳ ಪ್ರಕಾರ ಟೀಮ್ ಇಂಡಿಯಾ ವಿರುದ್ಧ ವೆಸ್ಟ್ ಇಂಡೀಸ್ ಮೇಲುಗೈ ಹೊಂದಿದೆ. ಅಂದರೆ ಇದುವರೆಗಿನ 51 ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಅತ್ತ ಆತಿಥೇಯ ಕೆರಿಬಿಯನ್ನರು ಒಟ್ಟು 16 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 26 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿತ್ತು. ಹೀಗಾಗಿ ಈ ಬಾರಿ ಕೂಡ ಭಾರತದ ವಿರುದ್ಧ ಮೇಲುಗೈ ಸಾಧಿಸುವ ವಿಶ್ವಾಸದಲ್ಲಿದೆ ವೆಸ್ಟ್ ಇಂಡೀಸ್.
ಈ ಪಂದ್ಯದ ಇನ್ನುಳಿದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ:
ವೆಸ್ಟ್ ಇಂಡೀಸ್ ಮತ್ತು ಭಾರತ ನಡುವಿನ ಮೊದಲ ಟೆಸ್ಟ್ ಯಾವಾಗ ಆರಂಭವಾಗುತ್ತದೆ?
ಜುಲೈ 12 ರ ಬುಧವಾರದಂದು ಸ್ಥಳೀಯ ಕಾಲಮಾನ 9:30 AM ಹಾಗೂ ಭಾರತೀಯ ಕಾಲಮಾನ 7.30 PM ರಿಂದ ಪ್ರಾರಂಭವಾಗಲಿದೆ.
ವೆಸ್ಟ್ ಇಂಡೀಸ್ vs ಭಾರತ ಮೊದಲ ಟೆಸ್ಟ್ ಪಂದ್ಯವನ್ನು ಯಾವ ಚಾನೆಲ್‌ನಲ್ಲಿ ವೀಕ್ಷಿಸಬಹುದು?
ಈ ಪಂದ್ಯವನ್ನು ದೂರದರ್ಶನ (ಡಿಡಿ) ಸ್ಪೋರ್ಟ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದು. ಆದರೆ ಡಿಟಿಎಚ್ನಲ್ಲಿ ನೇರ ಪ್ರಸಾರ ಇರುವುದಿಲ್ಲ. ಬದಲಾಗಿ ಉಚಿತ ಕೇಬಲ್ ನೆಟ್‌ವರ್ಕ್‌ಗಳ ಡಿಡಿ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದಾಗಿದೆ.
ಯಾವ ಅಪ್ಲಿಕೇಶ್ನಲ್ಲಿ ಲೈವ್ ಸ್ಟೀಮಿಂಗ್ ವೀಕ್ಷಿಸಬಹುದು?
JioCinema (ಜಿಯೋ ನಿನಿಮಾ) ಮತ್ತು Fancode (ಫ್ಯಾನ್ಕೋಡ್) ಆ್ಯಪ್ಗಳಲ್ಲಿ ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಇರಲಿದೆ.
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ , ರವೀಂದ್ರ ಜಡೇಜಾ , ಮುಖೇಶ್ ಕುಮಾರ್, ಅಕ್ಷರ್ ಪಟೇಲ್, ನವದೀಪ್ ಸೈನಿ , ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕತ್.
ಇದನ್ನೂ ಓದಿ: IND vs WI: ಇಶಾನ್ vs ಭರತ್: ಟೀಮ್ ಇಂಡಿಯಾ ವಿಕೆಟ್ ಕೀಪರ್ ಯಾರು?
ವೆಸ್ಟ್ ಇಂಡೀಸ್: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಜರ್ಮೈನ್ ಬ್ಲಾಕ್‌ವುಡ್ (ಉಪನಾಯಕ), ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಅಲಿಕ್ ಅಥಾನಾಜೆ, ರಹಕೀಮ್ ಕಾರ್ನ್‌ವಾಲ್, ಶಾನನ್ ಗೇಬ್ರಿಯಲ್, ಜೇಸನ್ ಹೋಲ್ಡರ್, ಅಲ್ಝಾರಿ ಜೋಸೆಫ್, ರೇಮನ್ ರೈಫರ್, ಕೆಮರ್ ರೋಚ್, ತೇಜ್ನರೈನ್ ಚಂದ್ರಪಾಲ್, ಕಿರ್ಕ್ ಮೆಕ್ಕೆಂಝಿ, ಜೊಮೆಲ್ ವಾರ್ರಿಕನ್.