IND vs ZIM: ಕೆರಿಬಿಯನ್ ಪ್ರವಾಸ ಅಂತ್ಯ: ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಮಾಹಿತಿ

| Updated By: Vinay Bhat

Updated on: Aug 09, 2022 | 9:11 AM

India tour of Zimbabwe, 2022: ಭಾರತ ಕ್ರಿಕೆಟ್ ತಂಡ ಸದ್ಯದಲ್ಲೇ ಜಿಂಬಾಬ್ವೆ ಪ್ರವಾಸ ಬೆಳೆಸಲಿದೆ. ಅಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ವಿಶೇಷ ಎಂದರೆ ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ನಾಡಿಗೆ ತೆರಳುತ್ತಿದೆ.

IND vs ZIM: ಕೆರಿಬಿಯನ್ ಪ್ರವಾಸ ಅಂತ್ಯ: ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಮಾಹಿತಿ
IND Tour of ZIM
Follow us on

ಕೆರಿಬಿಯನ್ ಪ್ರವಾಸ ಬೆಳೆಸಿದ್ಧ ಭಾರತ ಕ್ರಿಕೆಟ್ ತಂಡ ಭರ್ಜರಿ ಯಶಸ್ಸು ಸಾಧಿಸಿ ತವರಿಗೆ ಹಿಂತಿರುಗಿದೆ. ಶಿಖರ್ ಧವನ್ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್​ಸ್ವೀಪ್ ಮಾಡಿದ್ದ ಟೀಮ್ ಇಂಡಿಯಾ ನಂತರ ರೋಹಿತ್ ಶರ್ಮಾ (Rohit Sharma) ಕ್ಯಾಪ್ಟನ್ಸಿಯಲ್ಲಿ ಟಿ20 ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡು ಪರಾಕ್ರಮ ಮೆರೆಯಿತು. ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆಯ್ಕೆಯಾಗಿದ್ದ ಎಲ್ಲ ಆಟಗಾರರು ಇಲ್ಲಿ ಕಣಕ್ಕಿಳಿದರು. ಈ ಮೂಲಕ ತನ್ನ ಬೆಂಚ್ ಸ್ಟ್ರೆಂತ್ ಅನ್ನು ಪರೀಕ್ಷಿಸಿದ ಭಾರತ ಅದರಲ್ಲೂ ಯಶಸ್ಸು ಕಂಡಿತು. ಇದೀಗ ತವರಿಗೆ ಮರಳಿರುವ ಟೀಮ್ ಇಂಡಿಯಾ (Team India) ಸದ್ಯದಲ್ಲೇ ಮುಂದಿನ ಪ್ರವಾಸಕ್ಕೆ ಸಜ್ಜಾಗಬೇಕಿದೆ. ಹಾಗಾದರೆ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?, ಎಲ್ಲಿ ನಡೆಯಲಿದೆ?, ಇಲ್ಲಿದೆ ನೋಡಿ ಸಂಪೂರ್ಣ ವಿವರ.

ಭಾರತ ಕ್ರಿಕೆಟ್ ತಂಡ ಸದ್ಯದಲ್ಲೇ ಜಿಂಬಾಬ್ವೆ ಪ್ರವಾಸ ಬೆಳೆಸಲಿದೆ. ಅಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ವಿಶೇಷ ಎಂದರೆ ಭಾರತ ತಂಡವು 6 ವರ್ಷಗಳ ಬಳಿಕ ಜಿಂಬಾಬ್ವೆ ನಾಡಿಗೆ ತೆರಳುತ್ತಿದೆ. ಈ ಹಿಂದೆ ಎಂಎಸ್ ಧೋನಿ ನೇತೃತ್ವದ ತಂಡವು 2016 ರಲ್ಲಿ ಮೂರು ಏಕದಿನ ಮತ್ತು 3 ಟಿ20 ಪಂದ್ಯಗಳನ್ನು ಜಿಂಬಾಬ್ವೆಯಲ್ಲಿ ಆಡಿತ್ತು. ಈ ಎರಡೂ ಸರಣಿಯಲ್ಲಿ ಅಂದು ಭಾರತ ತಂಡ ಗೆಲುವು ದಾಖಲಿಸಿತ್ತು. ಇದೀಗ 6 ವರ್ಷಗಳ ಬಳಿಕ ಭಾರತ ತಂಡವು ಜಿಂಬಾಬ್ವೆ ಪ್ರವಾಸ ಕೈಗೊಳ್ಳುತ್ತಿದೆ.

ಈಗಾಗಲೇ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಕೂಡ ಪ್ರಕಟವಾಗಿದ್ದು, ಶಿಖರ್ ಧವನ್ ನಾಯಕತ್ವದ ಜವಾಬ್ದಾರಿ ವಹಿಸಿದ್ದಾರೆ. ರೋಹಿತ್ ಶರ್ಮಾ, ರಿಷಭ್ ಪಂತ್, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಕೆಲ ಹಿರಿಯರಿಗೆ ವಿಶ್ರಾಂತಿ ನೀಡಲಾಗಿದೆ. ಇದೇ ವೇಳೆ ಸುದೀರ್ಘ ಗಾಯದ ನಂತರ ದೀಪಕ್ ಚಹಾರ್ ಮತ್ತೆ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ. ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಪರ ಮಿಂಚು ಹರಿಸಿದ್ದ ರಾಹುಲ್ ತ್ರಿಪಾಠಿಗೆ ಅವಕಾಶ ನೀಡಲಾಗಿದೆ. ಆಲ್​ರೌಂಡರ್​​ ವಾಷಿಂಗ್ಟನ್ ಸುಂದರ್​ ಸಹ ಅವಕಾಶ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ
CWG 2022: ಕಾಮನ್​ವೆಲ್ತ್ ಗೇಮ್ಸ್ 2022 ರಲ್ಲಿ ಭಾರತ ಗೆದ್ದ 61 ಪದಕಗಳ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ
CWG 2022: ಕಾಮನ್​ವೆಲ್ತ್ ಗೇಮ್ಸ್ 2022ಕ್ಕೆ ಅದ್ಧೂರಿ ತೆರೆ: ಒಟ್ಟು 61 ಪದಕ ಬಾಚಿಕೊಂಡ ಭಾರತ
India Squad For Asia cup 2022: ಏಷ್ಯಾಕಪ್​ಗಾಗಿ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ
Suresh Raina: ಸುರೇಶ್ ರೈನಾ ಸೂಪರ್ ಫ್ಯಾನ್ ನಿಧನ..!

ಐಸಿಸಿ ಸೂಪರ್ ಲೀಗ್​ ಭಾಗವಾಗಿ ಮೂರು ಏಕದಿನ ಪಂದ್ಯಗಳ ಸರಣಿ ನಡೆಯಲಿವೆ. ಉಭಯ ತಂಡಗಳ ನಡುವೆ ಹರಾರೆ ಮೈದಾನದಲ್ಲಿ ಆಗಸ್ಟ್​ 18, 20 ಹಾಗೂ 22ರಂದು ಪಂದ್ಯಗಳು ನಡೆಯಲಿವೆ. ಐಸಿಸಿ ಪುರುಷರ ಕ್ರಿಕೆಟ್​ ವಿಶ್ವಕಪ್​ ಸೂಪರ್ ಲೀಗ್​ನ ಭಾಗವಾಗಿ ಈ ಸರಣಿ ನಡೆಯಲಿದ್ದು, ವಿಶ್ವಕಪ್​​​ಗೆ ನೇರ ಅರ್ಹತೆ ಪಡೆದುಕೊಳ್ಳಲು ಜಿಂಬಾಬ್ವೆಗೆ ಈ ಸರಣಿ ಮಹತ್ವ ಪಡೆದುಕೊಂಡಿದೆ. ಐಸಿಸಿ ಲೀಗ್​​​ ಶ್ರೇಯಾಂಕದಲ್ಲಿ ಜಿಂಬಾಬ್ವೆ ಪ್ರಸ್ತುತ 12ನೇ ಸ್ಥಾನದಲ್ಲಿದೆ.

ಭಾರತಜಿಂಬಾಬ್ವೆ ಸರಣಿ ವೇಳಾಪಟ್ಟಿ ಹೀಗಿದೆ:

ಆಗಸ್ಟ್ 18- ಮೊದಲ ಏಕದಿನ ಪಂದ್ಯ

ಆಗಸ್ಟ್ 20- ಎರಡನೇ ಏಕದಿನ ಪಂದ್ಯ

ಆಗಸ್ಟ್ 22- ಮೂರನೇ ಏಕದಿನ ಪಂದ್ಯ

ಈ ಎಲ್ಲಾ ಪಂದ್ಯಗಳು ಹರಾರೆಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಮಧ್ಯಾಹ್ನ 12:45ಕ್ಕೆ ಶುರುವಾಗಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ.

ಭಾರತ ತಂಡ:

ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹಾರ್.

Published On - 9:11 am, Tue, 9 August 22