2024 ರ ಟಿ20 ವಿಶ್ವಕಪ್ ಗೆದ್ದಿರುವ ಟೀಂ ಇಂಡಿಯಾ ಇದೀಗ ಜಿಂಬಾಬ್ವೆಯನ್ನು ಎದುರಿಸಲು ಸಜ್ಜಾಗಿದೆ. ಜಿಂಬಾಬ್ವೆ ವಿರುದ್ಧ ಭಾರತ 5 ಟಿ20 ಪಂದ್ಯಗಳ ಸರಣಿಯನ್ನು ಆಡಬೇಕಿದೆ. ಈ ಸರಣಿಯಲ್ಲಿ ಶುಭ್‌ಮನ್ ಗಿಲ್ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಈ ಸರಣಿಯಲ್ಲಿ ಟೀಂ ಇಂಡಿಯಾ ತನ್ನ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿದ್ದು, ಯುವ ಆಟಗಾರರಿಗೆ ಆಧ್ಯತೆ ನೀಡಿದೆ. ಅಲ್ಲದೆ ಇದೇ ಮೊದಲ ಬಾರಿಗೆ ಕೆಲವು ಯುವ ಆಟಗಾರರು ಟೀಂ ಇಂಡಿಯಾ ಪರ ಕಣಕ್ಕಿಳಿಯಲ್ಲಿದ್ದಾರೆ. ಹೀಗಾಗಿ ಈ ಸರಣಿ ಯುವ ಪಡೆಗೆ ಅತ್ಯವಶ್ಯಕವಾಗಿದೆ. ಏಕೆಂದರೆ ಭಾರತ ಟಿ20 ತಂಡದಲ್ಲಿ ಹಿರಿಯರ ನಿರ್ಗಮನದೊಂದಿಗೆ ಹಲವು ಸ್ಥಾನಗಳು ಖಾಲಿಯಾಗಿವೆ. ಹೀಗಾಗಿ ಯುವ ಆಟಗಾರರು ಈ ಸರಣಿಯಲ್ಲಿ ಮಿಂಚಿದರೆ, ಅವರಿಗೆ ತಂಡದಲ್ಲಿ ಖಾಯಂ ಸ್ಥಾನ ಸಿಗುವ ಸಾಧ್ಯತೆಗಳಿವೆ.
ಭಾರತ ಮತ್ತು ಜಿಂಬಾಬ್ವೆ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಜುಲೈ 6 ರಂದು ನಡೆಯಲಿದೆ. ಮುಂದಿನ ಪಂದ್ಯ ಭಾನುವಾರ ನಡೆಯಲಿದೆ. ಎಲ್ಲಾ ಪಂದ್ಯಗಳು ಭಾರತದಲ್ಲಿ ಸಂಜೆ 4:30 ಕ್ಕೆ ಪ್ರಾರಂಭವಾಗುತ್ತವೆ. 4 ಗಂಟೆಗೆ ಟಾಸ್ ನಡೆಯಲಿದೆ. ಈ ಪಂದ್ಯವು 8 ರಿಂದ 8:30 ರ ನಡುವೆ ಕೊನೆಗೊಳ್ಳುತ್ತದೆ.
2024 ರ ಟಿ20 ವಿಶ್ವಕಪ್ ಗೆದ್ದ ನಂತರ, ಟೀಂ ಇಂಡಿಯಾ ಕೆಟ್ಟ ಹವಾಮಾನದಿಂದಾಗಿ ಬಾರ್ಬಡೋಸ್‌ನಲ್ಲಿ ಸಿಲುಕಿಕೊಂಡಿತ್ತು. ಇದರಿಂದಾಗಿ ಒಟ್ಟು 5 ಆಟಗಾರರು ಜಿಂಬಾಬ್ವೆ ಪ್ರವಾಸಕ್ಕೆ ತಂಡ ಸೇರಲು ಸಾಧ್ಯವಾಗಿಲ್ಲ. ಅವರ ಸ್ಥಾನಕ್ಕೆ ಬಿಸಿಸಿಐ ಸಾಯಿ ಸುದರ್ಶನ್, ಜಿತೇಶ್ ಶರ್ಮಾ ಮತ್ತು ಹರ್ಷಿತ್ ರಾಣಾ ಅವರನ್ನು ಮೊದಲ ಎರಡು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ತಂಡಕ್ಕೆ ಸೇರಿಸಿಕೊಂಡಿದೆ. ಸಂಜು ಸ್ಯಾಮ್ಸನ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಬದಲಿಗೆ ಈ ಆಟಗಾರರಿಗೆ ಅವಕಾಶ ಸಿಕ್ಕಿದೆ. ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿದಿರುವುದರಿಂದ ಈ ಸರಣಿಯಲ್ಲಿ ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾ ಕೋಚ್ ಆಗಲಿದ್ದಾರೆ. ಇದರ ಹೊರತಾಗಿ ಬಿಸಿಸಿಐ ಇನ್ನೂ ತಂಡದ ನೂತನ ಕೋಚ್ ಅನ್ನು ಪ್ರಕಟಿಸಿಲ್ಲ.
ಮೊದಲೆರಡು ಪಂದ್ಯಗಳಿಗೆ ಭಾರತ ತಂಡ: ಶುಭ್‌ಮನ್ ಗಿಲ್ (ನಾಯಕ), ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ, ಸಾಯಿ ಸುದರ್ಶನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ.
ಶುಭ್‌ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿವಂ ದುಬೆ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ಅವೇಶ್ ಖಾನ್, ಖಲೀಲ್ ಅಹ್ಮದ್, ಮುಖೇಶ್ ಕುಮಾರ್ ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ