AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣರೋಚಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಏಷ್ಯಾಕಪ್ ಗೆದ್ದ ಭಾರತ ಯುವ ಪಡೆ

ಅಲ್ ಅಮೆರಾತ್‌ನಲ್ಲಿ ನಡೆದ 2026ರ ಅಂಡರ್-19 ಏಷ್ಯಾಕಪ್ ಫೈನಲ್‌ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನವನ್ನು ಮಣಿಸಿ, ದಾಖಲೆಯ 9ನೇ ಬಾರಿಗೆ ಟ್ರೋಫಿ ಗೆದ್ದಿದೆ. 338 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ, ಮಧ್ಯಮ ಕ್ರಮಾಂಕದ ವೈಫಲ್ಯದ ನಡುವೆಯೂ ಆರ್ಯನ್ ಮತ್ತು ಮೋಹಿತ್ ಅವರ 8ನೇ ವಿಕೆಟ್ ಪಾಲುದಾರಿಕೆಯಿಂದ ರೋಚಕ ಗೆಲುವು ಸಾಧಿಸಿತು. ಇದು ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ಕ್ಷಣ.

ರಣರೋಚಕ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿ ಏಷ್ಯಾಕಪ್ ಗೆದ್ದ ಭಾರತ ಯುವ ಪಡೆ
Ind U19
ಪೃಥ್ವಿಶಂಕರ
|

Updated on:Nov 14, 2026 | 6:46 PM

Share

ಅಲ್ ಅಮೆರಾತ್ ಕ್ರೀಡಾಂಗಣದಲ್ಲಿ ನಡೆದ 2026 ರ ಅಂಡರ್-19 ಏಷ್ಯಾಕಪ್‌ನ ಗ್ರ್ಯಾಂಡ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಭಾರತ ಯುವ ಪಡೆ ದಾಖಲೆಯ 8ನೇ ಬಾರಿಗೆ ಏಷ್ಯಾಕಪ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ತೀವ್ರ ಕುತೂಹಲ ಮೂಡಿಸಿದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ದಾಖಲೆಯ 338 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತ್ತಾದರೂ ಆ ಬಳಿಕ ಮಧ್ಯಮ ಕ್ರಮಾಂಕದ ವೈಫಲ್ಯದಿಂದಾಗಿ ಸೋಲಿನ ಸುಳಿಗೆ ಸಿಲುಕಿತ್ತು. ಆದರೆ 9ನೇ ವಿಕೆಟ್​ಗೆ ಜೊತೆಯಾದ ಆರ್ಯನ್ ಹಾಗೂ ಮೋಹಿತ್ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟರು.

Published On - 6:43 pm, Sat, 14 November 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More