
ಅಲ್ ಅಮೆರಾತ್ ಕ್ರೀಡಾಂಗಣದಲ್ಲಿ ನಡೆದ 2026 ರ ಅಂಡರ್-19 ಏಷ್ಯಾಕಪ್‌ನ ಗ್ರ್ಯಾಂಡ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಭಾರತ ಯುವ ಪಡೆ ದಾಖಲೆಯ 8ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ತೀವ್ರ ಕುತೂಹಲ ಮೂಡಿಸಿದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ದಾಖಲೆಯ 338 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತ್ತಾದರೂ ಆ ಬಳಿಕ ಮಧ್ಯಮ ಕ್ರಮಾಂಕದ ವೈಫಲ್ಯದಿಂದಾಗಿ ಸೋಲಿನ ಸುಳಿಗೆ ಸಿಲುಕಿತ್ತು. ಆದರೆ 9ನೇ ವಿಕೆಟ್ಗೆ ಜೊತೆಯಾದ ಆರ್ಯನ್ ಹಾಗೂ ಮನಲ್ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟರು.
Published On - 6:43 pm, Sat, 14 November 26