AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಬೃಹತ್ ಟಾರ್ಗೆಟ್; ವಿಶ್ವ ದಾಖಲೆ ಸೃಷ್ಟಿಸಿದ ಯಂಗ್ ಇಂಡಿಯಾ

U19 World Cup Final: ಹರಾರೆಯಲ್ಲಿ ನಡೆದ U19 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಸಾಧನೆ ಮಾಡಿದೆ. ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ 411 ರನ್ ಗಳಿಸಿ, ವಿಶ್ವಕಪ್ ಫೈನಲ್‌ನಲ್ಲಿ ಅತಿ ಹೆಚ್ಚು ಮೊತ್ತ ಗಳಿಸಿದ ಹೊಸ ದಾಖಲೆ ನಿರ್ಮಿಸಿದೆ. ಈ ಮೊದಲು ಯಾವ ತಂಡವೂ 300 ರನ್ ದಾಟಿರಲಿಲ್ಲ. ವೈಭವ್ ಸೂರ್ಯವಂಶಿ ಕೇವಲ 80 ಎಸೆತಗಳಲ್ಲಿ 175 ರನ್ ಸಿಡಿಸಿ ಈ ಬೃಹತ್ ಮೊತ್ತಕ್ಕೆ ಪ್ರಮುಖ ಕೊಡುಗೆ ನೀಡಿದರು.

ವಿಶ್ವಕಪ್ ಫೈನಲ್ ಇತಿಹಾಸದಲ್ಲೇ ಬೃಹತ್ ಟಾರ್ಗೆಟ್; ವಿಶ್ವ ದಾಖಲೆ ಸೃಷ್ಟಿಸಿದ ಯಂಗ್ ಇಂಡಿಯಾ
Ind Vs Eng
ಪೃಥ್ವಿಶಂಕರ
|

Updated on:Feb 06, 2026 | 5:52 PM

Share

ಹರಾರೆಯಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಫೈನಲ್​ನಲ್ಲಿ (U19 World Cup Final) ಭಾರತ ಹಾಗೂ ಇಂಗ್ಲೆಂಡ್ (India vs England) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಬರೋಬ್ಬರಿ 411 ರನ್ ಕಲೆಹಾಕಿದೆ. ಈ ಮೂಲಕ 19 ವರ್ಷದೊಳಗಿನವರ ವಿಶ್ವಕಪ್ ಫೈನಲ್​ನಲ್ಲಿ ಅತಿದೊಡ್ಡ ಮೊತ್ತ ಕಲೆಹಾಕಿದ ವಿಶ್ವ ದಾಖಲೆ ನಿರ್ಮಿಸಿದೆ. ಈ ವಿಶ್ವಕಪ್ ಫೈನಲ್‌ ಇತಿಹಾಸದಲ್ಲಿ ಇದುವರೆಗೂ ಯಾವ ತಂಡಕ್ಕೂ 300 ರನ್​ಗಳ ಗಡಿ ದಾಟಲೂ ಸಾಧ್ಯವಾಗಿರಲಿಲ್ಲ. ಆದರೆ ಟೀಂ ಇಂಡಿಯಾ 400 ರನ್​ಗಳ ಗಡಿ ದಾಟಿ ನೂತನ ದಾಖಲೆ ನಿರ್ಮಿಸಿದೆ. ಟೀಂ ಇಂಡಿಯಾ ಇಷ್ಟು ಬೃಹತ್ ಮೊತ್ತ ಕಲೆಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ ವೈಭವ್ ಸೂರ್ಯವಂಶಿ (Vaibhav Suryavanshi) ಈ ಪಂದ್ಯದಲ್ಲಿ ಕೇವಲ 80 ಎಸೆತಗಳಲ್ಲಿ ಬರೋಬ್ಬರಿ 175 ರನ್ ಕಲೆಹಾಕಿದರು.

ಇಂಗ್ಲೆಂಡ್ ದಾಖಲೆ ಉಡೀಸ್

ಫೈನಲ್‌ನಲ್ಲಿ 411 ರನ್ ಕಲೆಹಾಕುವ ಮೂಲಕ ಟೀಂ ಇಂಡಿಯಾ ಈ ಆವೃತ್ತಿಯಲ್ಲಿ ಅತಿದೊಡ್ಡ ಮೊತ್ತ ಕಲೆಹಾಕಿದ್ದ ಇಂಗ್ಲೆಂಡ್ ದಾಖಲೆಯನ್ನು ಮುರಿದಿದೆ. ಇದೇ ಆವೃತ್ತಿಯಲ್ಲಿ ಇಂಗ್ಲೆಂಡ್, ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆರು ವಿಕೆಟ್‌ಗಳಿಗೆ 404 ರನ್ ಕಲೆಹಾಕಿತ್ತು. ಇನ್ನು ಅಂಡರ್ 19 ವಿಶ್ವಕಪ್ ಇತಿಹಾಸದಲ್ಲಿ ಅತಿ ದೊಡ್ಡ ಸ್ಕೋರ್ ದಾಖಲಿಸಿದ ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾ 5ನೇ ಸ್ಥಾನವನ್ನು ಪಡೆದುಕೊಂಡಿದೆ. ಮೊದಲ ಸ್ಥಾನದಲ್ಲಿರುವ ಆಸ್ಟ್ರೇಲಿಯಾ 2002 ರಲ್ಲಿ ಕೀನ್ಯಾ ತಂಡದ ವಿರುದ್ಧ 480 ರನ್ ಕಲೆಹಾಕಿತ್ತು. ಅದು ಈವರೆಗಿನ ದಾಖಲೆಯಾಗಿದೆ.

ಭಾರತಕ್ಕೆ ವೈಭವ್ ಆಸರೆ

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಭಾರತ ಕಳಪೆ ಆರಂಭ ಪಡೆಯಿತು. ಆರನ್ ಜಾರ್ಜ್ 9 ರನ್‌ಗಳಿಗೆ ಔಟಾದರು. ಆ ಬಳಿಕ ಜೊತೆಯಾದ ವೈಭವ್ ಸೂರ್ಯವಂಶಿ ಮತ್ತು ನಾಯಕ ಆಯುಷ್ ಮ್ಹಾತ್ರೆ 90 ಎಸೆತಗಳಲ್ಲಿ ಎರಡನೇ ವಿಕೆಟ್‌ಗೆ 142 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಮ್ಹಾತ್ರೆ 51 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಒಳಗೊಂಡಂತೆ 53 ರನ್ ಬಾರಿಸಿದರೆ, ವೈಭವ್ 32 ಎಸೆತಗಳಲ್ಲಿ ಅರ್ಧಶತಕ ಮತ್ತು 55 ಎಸೆತಗಳಲ್ಲಿ ಶತಕ ಪೂರೈಸಿದರು. ನಂತರ 71 ಎಸೆತಗಳಲ್ಲಿ 150 ರನ್ ಪೂರ್ಣಗೊಳಿಸಿದ ವೈಭವ್ ಅಂತಿಮವಾಗಿ 80 ಎಸೆತಗಳಲ್ಲಿ 15 ಬೌಂಡರಿ ಮತ್ತು 15 ಸಿಕ್ಸರ್‌ಗಳ ಸಹಾಯದಿಂದ 175 ರನ್ ಬಾರಿಸಿ ಔಟಾದರು.

15 ಸಿಕ್ಸರ್, 175 ರನ್; ಹರಾರೆಯಲ್ಲಿ ವೈಭವ್ ಆರ್ಭಟಕ್ಕೆ ಇಂಗ್ಲೆಂಡ್ ಹೈರಾಣ

ಇದೇ ವೇಳೆ ವೈಭವ್ 39 ಎಸೆತಗಳಲ್ಲಿ ವೇದಾಂತ್ ತ್ರಿವೇದಿ ಅವರೊಂದಿಗೆ ಮೂರನೇ ವಿಕೆಟ್‌ಗೆ 89 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ವೈಭವ್ ವಿಕೆಟ್ ಪತನವಾದಾಗ ತಂಡದ ಮೊತ್ತ 251 ರನ್‌ ಆಗಿತ್ತು. ಇದರ ನಂತರ ಉಳಿದ 7 ಆಟಗಾರರು ಸ್ಕೋರ್​ ಬೋರ್ಡ್​ಗೆ 160 ರನ್ ಸೇರಿಸಿದರು. ವೇದಾಂತ್ 36 ಎಸೆತಗಳಲ್ಲಿ 32 ರನ್ ಗಳಿಸಿದರೆ, ವಿಹಾನ್ ಮಲ್ಹೋತ್ರಾ 36 ಎಸೆತಗಳಲ್ಲಿ 30 ರನ್ ಬಾರಿಸಿದರು. ಅಭಿಗ್ಯಾನ್ ಕುಂಡು 31 ಎಸೆತಗಳಲ್ಲಿ 40 ರನ್, ಅಂಬ್ರಿಸ್ ಕೇವಲ 18 ರನ್, ಕನಿಷ್ಕ್ ಚೌಹಾಣ್ 20 ಎಸೆತಗಳಲ್ಲಿ ಅಜೇಯ 37 ರನ್ ಗಳಿಸಿದರು. ಇಂಗ್ಲೆಂಡ್ ಪರ ಜೇಮ್ಸ್ ಮಿಂಟೊ ಮೂರು ವಿಕೆಟ್ ಪಡೆದರೆ, ಸೆಬಾಸ್ಟಿಯನ್ ಮಾರ್ಗನ್ ಮತ್ತು ಅಲೆಕ್ಸ್ ಗ್ರೀನ್ ತಲಾ ಎರಡು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:25 pm, Fri, 6 February 26

ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಇಂದು ನಾನು ಕಷ್ಟಪಟ್ಟು 'ವಿಕಸಿತ ಭಾರತ'ದ ಬುನಾದಿ ಹಾಕುತ್ತಿರುವುದು ನಿಮಗಾಗಿ
ಇಂದು ನಾನು ಕಷ್ಟಪಟ್ಟು 'ವಿಕಸಿತ ಭಾರತ'ದ ಬುನಾದಿ ಹಾಕುತ್ತಿರುವುದು ನಿಮಗಾಗಿ
ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ
ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ
ತಂತ್ರಜ್ಞಾನ ಶಾಪ ಎಂದು ಭಾವಿಸುವ ಬದಲು "ವರದಾನ" ಎಂದು ಸ್ವೀಕರಿಸಿ
ತಂತ್ರಜ್ಞಾನ ಶಾಪ ಎಂದು ಭಾವಿಸುವ ಬದಲು