AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 9 ಸಿಕ್ಸರ್‌, 6 ಬೌಂಡರಿ..! 31 ಎಸೆತಗಳಲ್ಲಿ ಸಿಡಿಲಬ್ಬರ ಸೃಷ್ಟಿಸಿದ ವೈಭವ್ ಸೂರ್ಯವಂಶಿ

Vaibhav Suryavanshi's Blazing 86: ಭಾರತ ಮತ್ತು ಇಂಗ್ಲೆಂಡ್ ನಡುವಿನ U19 ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಅವರು ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 20 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಅವರು, ಒಟ್ಟು 31 ಎಸೆತಗಳಲ್ಲಿ 9 ಸಿಕ್ಸರ್ ಮತ್ತು 6 ಬೌಂಡರಿಗಳ ಸಹಾಯದಿಂದ 86 ರನ್ ಗಳಿಸಿದರು. ಆದಾಗ್ಯೂ, ಶತಕದಿಂದ ಕೇವಲ 14 ರನ್‌ಗಳಿಂದ ವಂಚಿತರಾದರು

IND vs ENG: 9 ಸಿಕ್ಸರ್‌, 6 ಬೌಂಡರಿ..! 31 ಎಸೆತಗಳಲ್ಲಿ ಸಿಡಿಲಬ್ಬರ ಸೃಷ್ಟಿಸಿದ ವೈಭವ್ ಸೂರ್ಯವಂಶಿ
Vaibhav Suryavanshi
ಪೃಥ್ವಿಶಂಕರ
|

Updated on: Jul 02, 2025 | 10:11 PM

Share

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್‌ (India vs England) ನಡುವಿನ 19 ವರ್ಷದೊಳಗಿನವರ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ಭಾರತದ 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi) ಸತತ ಮೂರನೇ ಪಂದ್ಯದಲ್ಲೂ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದ್ದಾರೆ. ಆದರೆ ಮೊದಲ ಎರಡು ಪಂದ್ಯಗಳಲ್ಲಿ ಅರ್ಧಶತಕದಿಂದ ವಂಚಿತರಾಗಿದ್ದ ವೈಭವ್ ಇದೀಗ ಮೂರನೇ ಪಂದ್ಯದಲ್ಲಿ ಶತಕ ವಂಚಿತರಾಗಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಆದಾಗ್ಯೂ ವೈಭವ್ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್‌ ಮೂಲಕ ಕೇವಲ 20 ಎಸೆತಗಳಲ್ಲಿ ಬಿರುಗಾಳಿಯ ಅರ್ಧಶತಕ ಬಾರಿಸಿದರು. ಅಲ್ಲದೆ ತಮ್ಮ ಇನ್ನಿಂಗ್ಸ್‌ನಲ್ಲಿ 9 ಸಿಕ್ಸರ್‌, 6 ಬೌಂಡರಿಗಳನ್ನು ಸಹ ಬಾರಿಸಿದರು.

268 ರನ್ ಗುರಿ ನೀಡಿದ ಇಂಗ್ಲೆಂಡ್

ಜುಲೈ 2 ರ ಬುಧವಾರ ಇಂಗ್ಲೆಂಡ್‌ನ ನಾರ್ಥಾಂಪ್ಟನ್‌ನಲ್ಲಿ ಉಭಯ ತಂಡಗಳ ನಡುವೆ ಯುವ ಏಕದಿನ ಸರಣಿಯ ಮೂರನೇ ಪಂದ್ಯ ನಡೆಯಿತು. ಮಳೆಯಿಂದಾಗಿ ತಲಾ 40 ಓವರ್​ಗಳಿಗೆ ಪಂದ್ಯವನ್ನು ಸೀಮಿತಗೊಳಿಸಲಾಯಿತು. ಹೀಗಾಗಿ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆತಿಥೇಯ ಇಂಗ್ಲೆಂಡ್‌ ತಂಡ ನಾಯಕ ಥಾಮಸ್ ರ್ಯು ಅವರ ಸ್ಫೋಟಕ ಇನ್ನಿಂಗ್ಸ್‌ನ ಆಧಾರದ ಮೇಲೆ 6 ವಿಕೆಟ್‌ಗಳ ನಷ್ಟಕ್ಕೆ 268 ರನ್ ಗಳಿಸಿತು. ಥಾಮಸ್ ಕೇವಲ 44 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಾಯದಿಂದ 76 ರನ್ ಕಲೆಹಾಕಿದರು. ಅವರ ಜೊತೆಗೆ, ಆರಂಭಿಕ ಬಿಜೆ ಡಾಕಿನ್ಸ್ ಕೂಡ 61 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಇತ್ತ ಭಾರತದ ಪರ ಕನಿಷ್ಕ್ ಚೌಹಾಣ್ ಗರಿಷ್ಠ 3 ವಿಕೆಟ್‌ಗಳನ್ನು ಪಡೆದರು.

ಗುರಿ ದೊಡ್ಡದಿದ್ದರಿಂದ ಭಾರತಕ್ಕೆ ವೇಗದ ಆರಂಭದ ಅಗತ್ಯವಿತ್ತು. ಅದರಂತೆ ಆರಂಭಿಕರಾಗಿ ಕಣಕ್ಕಿಳಿದ ಯುವ ಆರಂಭಿಕ ವೈಭವ್ ಸೂರ್ಯವಂಶಿ ಬಂದ ತಕ್ಷಣ ಇಂಗ್ಲೆಂಡ್ ಬೌಲರ್‌ಗಳ ಮೇಲೆ ಸವಾರಿ ಮಾಡಲು ಪ್ರಾರಂಭಿಸಿ ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದರು. ಕಳೆದ ಎರಡು ಪಂದ್ಯಗಳಲ್ಲಿ ಕ್ರಮವಾಗಿ 45 ಮತ್ತು 48 ರನ್ ಗಳಿಸಿ ಔಟಾಗಿದ್ದ ವೈಭವ್ ಈ ಪಂದ್ಯದಲ್ಲಿ ಅರ್ಧಶತಕ ದಾಟುವಲ್ಲಿ ಯಶಸ್ವಿಯಾದರು.

IND vs ENG: ಸತತ 2ನೇ ಪಂದ್ಯದಲ್ಲೂ ಅರ್ಧಶತಕದಂಚಿನಲ್ಲಿ ಎಡವಿದ ವೈಭವ್ ಸೂರ್ಯವಂಶಿ

20 ಎಸೆತಗಳಲ್ಲಿ ಅರ್ಧಶತಕ

ಕೇವಲ 20 ಎಸೆತಗಳಲ್ಲಿ ತಮ್ಮ ಬಿರುಗಾಳಿಯ ಅರ್ಧಶತಕವನ್ನು ಪೂರೈಸಿದ 14 ವರ್ಷದ ವೈಭವ್ ಈ ವೇಳೆಗಾಗಲೇ 4 ಬೌಂಡರಿ ಮತ್ತು 5 ಸಿಕ್ಸರ್‌ಗಳನ್ನು ಬಾರಿಸಿದ್ದರು. ಇನ್ನಿಂಗ್ಸ್​ನ ಆರನೇ ಓವರ್‌ನಲ್ಲಿ ಅರ್ಧಶತಕವನ್ನು ಪೂರೈಸಿದ ವೈಭವ್, ಈ ಓವರ್‌ನಲ್ಲಿ 3 ಸಿಕ್ಸರ್‌ ಮತ್ತು 1 ಬೌಂಡರಿಯನ್ನು ಬಾರಿಸಿದರು. ಎಂಟನೇ ಓವರ್‌ನಲ್ಲಿಯೂ ಬೌಂಡರಿಗಳ ಮಳೆಗರೆದ ವೈಭವ್ ಈ ಓವರ್​ನಲ್ಲಿ ಸತತ 3 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದರು.

ಆದರೆ ತಮ್ಮ ಶತಕದ ಸಮೀಪದಲ್ಲಿ ಎಡವಿದ ವೈಭವ್, ಅದೇ ಓವರ್‌ನ ಕೊನೆಯ ಎಸೆತದಲ್ಲಿ ಸಿಕ್ಸರ್ ಹೊಡೆಯಲು ಪ್ರಯತ್ನಿಸಿ ಕ್ಯಾಚ್ ನೀಡಿ ಔಟ್ ಆದರು. ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 31 ಎಸೆತಗಳನ್ನು ಎದುರಿಸಿದ ವೈಭವ್, 9 ಸಿಕ್ಸರ್ ಮತ್ತು 6 ಬೌಂಡರಿಗಳ ಸಹಾಯದಿಂದ 86 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿ ಕೇವಲ 14 ರನ್‌ಗಳಿಂದ ಶತಕ ವಂಚಿತರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ