
ಈ ವರ್ಷದ ಆರಂಭದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದಲ್ಲಿ ಭಾರತ ಅಂಡರ್-19 ತಂಡವು (India U19 Squad 2026) ಅಂಡರ್-19 ವಿಶ್ವಕಪ್ ಗೆದ್ದಿತು. ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರಾ ಮತ್ತು ಅಭಿಗ್ಯಾನ್ ಕುಂಡು ಅವರಂತಹ ಯುವ ಪ್ರತಿಭೆಗಳು ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದವು. ಇದೀಗ ಭಾರತ ಅಂಡರ್ 19 ತಂಡ ಶ್ರೀಲಂಕಾ ಪ್ರವಾಸಕ್ಕೆ ಸಿದ್ಧವಾಗಿದೆ. ಈ ಪ್ರವಾಸದಲ್ಲಿ ಭಾರತ ಯುವ ಪಡೆ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಪ್ರವಾಸಕ್ಕೆ ಭಾರತ ಅಂಡರ್ 19 ತಂಡವನ್ನು ಸಹ ಬಿಸಿಸಿಐ ಪ್ರಕಟಿಸಿದೆ. ಆದರೆ ಈ ಬಾರಿ ತಂಡದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ತಂಡದಲ್ಲಿ ವೈಭವ್ ಆಗಲಿ ಆಯುಷ್ ಆಗಲಿ ಇಲ್ಲ. ಆದಾಗ್ಯೂ ತಂಡದಲ್ಲಿ ಮಾಜಿ ಟೀಂ ಇಂಡಿಯಾ ನಾಯಕ ರಾಹುಲ್ ದ್ರಾವಿಡ್ ಅವರ ಕಿರಿಯ ಮಗ ಅನ್ವಯ್ ದ್ರಾವಿಡ್ ( Anvay Dravid) ಆಯ್ಕೆಯಾಗಿರುವುದು ಅಭಿಮಾನಿಗಳ ಸಂತೋಷವನ್ನು ಇಮ್ಮಡಿಗೊಳಿಸಿದೆ.
ಬಿಸಿಸಿಐ ಜೂನಿಯರ್ ಕ್ರಿಕೆಟ್ ಸಮಿತಿಯು ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ 19 ವರ್ಷದೊಳಗಿನವರ ಭಾರತ ಪುರುಷರ ತಂಡದ ತಂಡವನ್ನು ಆಯ್ಕೆ ಮಾಡಿದೆ. ಮೇಲೆ ಹೇಳಿದಂತೆ ಈ ಪ್ರವಾಸದಲ್ಲಿ ಭಾರತ ತಂಡವು ಮೂರು ಏಕದಿನ ಪಂದ್ಯಗಳು ಮತ್ತು ಎರಡು ರೆಡ್-ಬಾಲ್ ಪಂದ್ಯಗಳನ್ನು ಆಡಲಿದೆ. ಈ ತಂಡದ ನಾಯಕತ್ವವನ್ನು ಯಶವರ್ಧನ್ ಸಿಂಗ್ ಚೌಹಾಣ್ ಅವರಿಗೆ ನೀಡಲಾಗಿದೆ. ಯಶ್ ವೈಟ್-ಬಾಲ್ ಮತ್ತು ರೆಡ್-ಬಾಲ್ ತಂಡಗಳೆರಡಕ್ಕೂ ನಾಯಕರಾಗಿರುತ್ತಾರೆ. ಲಕ್ಷ್ಯ ರಾಯ್‌ಚಂದಾನಿ ಎರಡೂ ತಂಡಗಳಿಗೆ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಪ್ರವಾಸಕ್ಕಾಗಿ ಅನ್ವಯ್ ದ್ರಾವಿಡ್ ಅವರನ್ನು ಏಕದಿನ ತಂಡದಲ್ಲಿ ಮಾತ್ರ ಆಯ್ಕೆ ಮಾಡಲಾಗಿದ್ದು, ರೆಡ್-ಬಾಲ್ ಸರಣಿಗೆ ಆಯ್ಕೆ ಮಾಡಲಾಗಿಲ್ಲ.
🚨 News 🚨
India Men’s U19 squads for Sri Lanka series announced.
More Details 🔽https://t.co/tGJ7FRywxK
— BCCI (@BCCI) June 11, 2026
ಏಕದಿನ ಸರಣಿಗೆ ಭಾರತ ತಂಡ: ಸಾಗರ್ ವಿರ್ಕ್, ಲಕ್ಷ ರಾಯಚಂದನಿ (ಉಪನಾಯಕ), ಯಶ್ಬರ್ಧನ್ ಸಿಂಗ್ ಚೌಹಾಣ್ (ನಾಯಕ), ವಿನೀತ್ ವಿ ಕೆ, ಅರ್ಜುನ್ ರಜಪೂತ್, ಕುಶಾಗ್ರಾ ಓಜಾ, ರಜತ್ ಬಘೇಲ್ (ವಿಕೆಟ್ ಕೀಪರ್), ಅನ್ವಯ್ ದ್ರಾವಿಡ್ (ವಿಕೆಟ್ ಕೀಪರ್), ಅನ್ಮೋಲ್ಜೀತ್ ಸಿಂಗ್, ವುಟ್ಕುರಿ ಯಶ್ವೀರ್ ಗೌಡ್, ರೋಹಿತ್ ಅನಿಲ್ ಯಾದವ್, ಶವಿನ್ ವಿ, ಕಾವ್ಯಾ ಪರೇಶ್ ಪಟೇಲ್, ಮೋಹಿತ್ ಉಲ್ವಾ, ಇಶಾನ್ ಸೂದ್
ರೆಡ್ ಬಾಲ್ ಸರಣಿಗೆ ಭಾರತ ತಂಡ: ಸಾಗರ್ ವಿರ್ಕ್, ಲಕ್ಷ ರಾಯಚಂದನಿ (ಉಪನಾಯಕ), ಯಶ್ಬರ್ಧನ್ ಸಿಂಗ್ ಚೌಹಾಣ್ (ನಾಯಕ), ಪಟೇಲ್ ಕುಶ್, ಮನಲ್ ಚೌಹಾಣ್, ಕುಶಾಗ್ರಾ ಓಜಾ, ಮಾನವ್ ಕೃಷ್ಣ (ವಿಕೆಟ್ ಕೀಪರ್), ಆರ್ಯನ್ ಸಂದೇಶ್ ಸಕ್ಪಾಲ್ (ವಿಕೆಟ್ ಕೀಪರ್), ಹೇಮಚುದೇಶನ್ ಜೆ, ಬಿ ಕೆ ಕಿಶೋರ್, ರೋಹಿತ್ ಅನಿಲ್ ಯಾದವ್, ಕಾವ್ಯಾ ಪರೇಶ್ ಪಟೇಲ್, ಪ್ರಿಯಾಂಶು ಸಿಂಗ್, ಪ್ರಣವ್ ರಾಘವೇಂದ್ರ, ಚಿಗುರುಪತಿ ವೆಂಕಟ