AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಯುವ ಪಡೆಯನ್ನು ಕ್ಲೀನ್ ಸ್ವೀಪ್ ಮಾಡಿದ ಯಂಗ್ ಇಂಡಿಯಾ

ಭಾರತ U19 ತಂಡ ಆಸ್ಟ್ರೇಲಿಯಾ U19 ವಿರುದ್ಧದ ಯೂತ್ ಏಕದಿನ ಸರಣಿಯಲ್ಲಿ 3-0 ಅಂತರದಲ್ಲಿ ಕ್ಲೀನ್‌ ಸ್ವೀಪ್ ಸಾಧಿಸಿದೆ. ಕೊನೆಯ ಪಂದ್ಯದಲ್ಲಿ ಲಕ್ಷ್ಯ ರಾಜೇಶ್ ರಾಯ್‌ಚಂದಾನಿ ಅವರ ಅಜೇಯ ಶತಕ ಹಾಗೂ ರಜತ್ ಬಾಗೆಲ್ ಅವರ ಅಬ್ಬರದ ಆಟದಿಂದ ಭಾರತ 6 ವಿಕೆಟ್ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಮಾಡಿದ ಆಸೀಸ್‌ 254 ರನ್ ಗಳಿಸಿದ್ದು, ಭಾರತ ಇದನ್ನು ಸುಲಭವಾಗಿ ಬೆನ್ನಟ್ಟಿತು. ಈ ಗೆಲುವಿನೊಂದಿಗೆ ಯುವ ಭಾರತ ತಂಡ ಭವಿಷ್ಯದ ಆಟಗಾರರನ್ನು ಪರಿಚಯಿಸಿತು.

ಆಸ್ಟ್ರೇಲಿಯಾ ಯುವ ಪಡೆಯನ್ನು ಕ್ಲೀನ್ ಸ್ವೀಪ್ ಮಾಡಿದ ಯಂಗ್ ಇಂಡಿಯಾ
ಭಾರತ Vs ಆಸ್ಟ್ರೇಲಿಯಾ ಯುವ ಪಡೆ
ಪೃಥ್ವಿಶಂಕರ
|

Updated on:Sep 23, 2026 | 5:49 PM

Share

ಭಾರತ ಹಾಗೂ ಆಸ್ಟ್ರೇಲಿಯಾ ಅಂಡರ್-19 ತಂಡಗಳ ನಡುವೆ ನಡೆದ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಯಲ್ಲಿ ಮೇಲುಗೈ ಸಾಧಿಸಿದ್ದ ಟೀಂ ಇಂಡಿಯಾ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಈಗಾಗಲೇ ಸರಣಿಯನ್ನು ತನ್ನದಾಗಿಸಿಕೊಂಡಿತ್ತು. ಇಂದು ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯವನ್ನು 6 ವಿಕೆಟ್​ಗಳಿಂದ ಜಯಿಸುವ ಮೂಲಕ ಆಸ್ಟ್ರೇಲಿಯಾ ಯುವ ಪಡೆಯನ್ನು ಕ್ವೀನ್ ಸ್ವೀಪ್ ಮಾಡಿದೆ. ಸರಣಿಯ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ 254 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಭಾರತ ತಂಡ ಇನ್ನು 52 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆಬೀರಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾಕ್ಕೆ ಉತ್ತಮ ಆರಂಭವೇ ಸಿಕ್ಕಿತು. ಆರಂಭಿಕ ಝೆಡ್ ಹೊಲಿಕ್ 87 ರನ್​ಗಳ ಇನ್ನಿಂಗ್ಸ್ ಆಡಿದರೆ, ಮೂರನೇ ಕ್ರಮಾಂಕದಲ್ಲಿ ಬಂದ ನೀಲ್ ಪಟೇಲ್ 51 ರನ್​ಗಳ ಕಾಣಿಕೆ ನೀಡಿದರು. ಬ್ಲೇಕ್ ಕ್ಯಾಟಲ್ 38 ರನ್​ ಬಾರಿಸಿದ್ದನ್ನು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿಬರಲಿಲ್ಲ. ಹೀಗಾಗಿ ಉತ್ತಮ ಆರಂಭದ ಹೊರತಾಗಿಯೂ ಆಸೀಸ್ ತಂಡಕ್ಕೆ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗಲಿಲ್ಲ. ಇತ್ತ ಟೀಂ ಇಂಡಿಯಾ ಪರ ಮೋಹಿತ್ ಉಲ್ವಾ ಹಾಗೂ ಮನಲ್ ಚೌಹಾಣ್ ತಲಾ 3 ವಿಕೆಟ್ ಪಡೆದರು.

ಅಜೇಯ ಶತಕ ಬಾರಿಸಿದ ನಾಯಕ

ಈ ಗುರಿ ಬೆನ್ನಟ್ಟಿದ ಭಾರತ ಕೂಡ ಉತ್ತಮ ಆರಂಭ ಪಡೆಯಿತು. ಮೊದಲೆರಡು ಪಂದ್ಯಗಳಲ್ಲಿ ತನ್ನ ಆಲ್‌ರೌಂಡರ್ ಪ್ರದರ್ಶನದ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದ್ದ ನಾಯಕ ಯಶ್​ವರ್ಧನ್ ಚೌಹಾಣ್ ಈ ಪಂದ್ಯದಲ್ಲಿ ಆಡಲಿಲ್ಲ. ಹೀಗಾಗಿ ಅವರ ಬದಲಿಗೆ ತಂಡದ ನಾಯಕತ್ವವಹಿಸಿಕೊಂಡಿದ್ದ ಲಕ್ಷ್ಯ ರಾಜೇಶ್ ರಾಯ್‌ಚಂದಾನಿ ಅಜೇಯ ಶತಕ ಬಾರಿಸಿ ತಂಡವನ್ನು ಆರಾಮದಾಯಕ ಗೆಲುವಿನತ್ತ ಕೊಂಡೊಯ್ದರು. ಇವರೊಂದಿಗೆ ಆರ್ಯವೀರ್ ಸೆಹ್ವಾಗ್ ಕೂಡ 34 ರನ್​ಗಳ ಕಾಣಿಕೆ ನೀಡುವ ಮೊದಲ ವಿಕೆಟ್​ಗೆ 58 ರನ್​ಗಳ ಜೊತೆಯಾಟ ನೀಡಿದರು. ನಾಲ್ಕನೇ ಕ್ರಮಾಂಕದಲ್ಲಿ ಬಂದ ಕುಶಾಗ್ರ ಓಜಾ 45 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಗೆಲುವನ್ನು ಖಚಿತಪಡಿಸಿದರು.

ಅಜೇಯ 80 ರನ್‌ಗಳ ಪಾಲುದಾರಿಕೆ

ಆದಾಗ್ಯೂ ಒಂದು ಹಂತದಲ್ಲಿ ಭಾರತ ತಂಡವು ಗೆಲ್ಲಲು ಸುಮಾರು 80 ರನ್‌ಗಳ ಅಗತ್ಯವಿರುವಾಗ, ಮೂರನೇ ಮತ್ತು ನಾಲ್ಕನೇ ವಿಕೆಟ್‌ಗಳನ್ನು ಬೇಗನೆ ಪತನಗೊಂಡವು. ಹೀಗಾಗಿ ತಂಡವು ಸಂಕಷ್ಟದಲ್ಲಿದ್ದಂತೆ ತೋರುತ್ತಿತ್ತು. ಆದರೆ ಒಂದು ತುದಿಯಲ್ಲಿ ಭದ್ರವಾಗಿ ಬೇರೂರಿದ್ದ ನಾಯಕ ಲಕ್ಷ್ಯ, ಅನ್ವಯ್ ದ್ರಾವಿಡ್ ಬದಲಿಗೆ ತಂಡಕ್ಕೆ ಆಯ್ಕೆಯಾಗಿದ್ದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಜತ್ ಬಾಗೆಲ್ ಅವರೊಂದಿಗೆ ಜೊತೆಗೂಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ರಜತ್ ಬಾಗೆಲ್ 34 ಎಸೆತಗಳಲ್ಲಿ ಅಜೇಯ 44 ರನ್ ಗಳಿಸುವುದರ ಜೊತೆಗೆ ಐದನೇ ವಿಕೆಟ್‌ಗೆ ಅಜೇಯ 80 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.

ಏಕದಿನ, ಟಿ20 ಸರಣಿಗಾಗಿ ಭಾರತಕ್ಕೆ ಬಂದ ವೆಸ್ಟ್ ಇಂಡೀಸ್; ಸರಣಿ ವೇಳಾಪಟ್ಟಿ ಇಲ್ಲಿದೆ

ಅನಧಿಕೃತ ಟೆಸ್ಟ್ ಪಂದ್ಯ

ಉಭಯ ತಂಡಗಳ ನಡುವೆ ಏಕದಿನ ಸರಣಿ ಮುಕ್ತಾಯವಾಗಿದ್ದು, ಮುಂದೆ ಎರಡು ಅನಧಿಕೃತ ನಾಲ್ಕು ದಿನಗಳ ಟೆಸ್ಟ್ ಪಂದ್ಯಗಳನ್ನು ಆಡಲಿವೆ. ಮೊದಲ ಪಂದ್ಯ ಸೆಪ್ಟೆಂಬರ್ 27 ರಿಂದ 30 ರವರೆಗೆ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಪಂದ್ಯ ಅಕ್ಟೋಬರ್ 5 ರಿಂದ 8, 2026 ರವರೆಗೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗ್ರೌಂಡ್ ಬಿ ನಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Wed, 23 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಕಾಂಗ್ರೆಸ್ ಶಾಸಕರ ನಡುವೆ ಗಲಾಟೆ: ಕಣ್ಣೀರಿಡುತ್ತಲೇ ಹೊರಹೋದ ಶಾಸಕಿ ರೂಪಕಲಾ!
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಉಪ್ಪಿನ ಬಳಕೆಗೆ ಬ್ರೇಕ್ ಹಾಕಲು ಹೆಲ್ತ್ ಡಿಪಾರ್ಟ್‌ಮೆಂಟ್ ಪ್ಲಾನ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!