India U19 vs Australia U19: ಯಶ್ ಧುಲ್ ಭರ್ಜರಿ ಶತಕ: ಆಸ್ಟ್ರೇಲಿಯಾಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ

Yash Dhull: ಉತ್ತಮ ಹೊಂದಾಣಿಕೆಯ ಆಟ ಪ್ರದರ್ಶಿಸಿದ ರಶೀದ್ ಹಾಗೂ ಯಶ್ ಧುಲ್ ಶತಕದ ಜೊತೆಯಾಟವಾಡಿದರು. ಇದಾದ ಬಳಿಕ ತಮ್ಮ ಜೊತೆಯಾಟವನ್ನು 200ಕ್ಕೇರಿಸಿದರು.

India U19 vs Australia U19: ಯಶ್ ಧುಲ್ ಭರ್ಜರಿ ಶತಕ: ಆಸ್ಟ್ರೇಲಿಯಾಗೆ ಕಠಿಣ ಗುರಿ ನೀಡಿದ ಟೀಮ್ ಇಂಡಿಯಾ
Yash Dhull
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 02, 2022 | 10:19 PM

ಅಂಟಿಗುವಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್​ನ ಸೆಮಿಫೈನಲ್​ನಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾಗೆ ಕಠಿಣ ಸವಾಲು ನೀಡಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ಕಿರಿಯರ ನಾಯಕ ಯಶ್ ಧುಲ್ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಭಾರತ ತಂಡದ ಆರಂಭ ಉತ್ತಮವಾಗಿರಲಿಲ್ಲ. 6 ರನ್​ಗಳಿಸಿ ರಘವಂಶಿ ಔಟಾದರೆ, ಹನೂರ್ ಸಿಂಗ್ 16 ರನ್​ಗೆ ತಮ್ಮ ಇನಿಂಗ್ಸ್ ಅಂತ್ಯಗೊಳಿಸಿದರು. ಈ ಹಂತದಲ್ಲಿ ಜೊತೆಗೂಡಿದ ನಾಯಕ ಯಶ್ ಧುಲ್ ಹಾಗೂ ಉಪನಾಯಕ ಶೇಖ್ ರಶೀದ್ ಅಧ್ಬುತ ಜೊತೆಯಾಟ ಪ್ರದರ್ಶಿಸಿದರು. ಆಸ್ಟ್ರೇಲಿಯಾ ಬೌಲರುಗಳನ್ನು ಅತ್ಯುತ್ತಮವಾಗಿ ಎದುರಿಸಿದ ಈ ಜೋಡಿ ರನ್​ ಗತಿಯನ್ನು ಹೆಚ್ಚಿಸುತ್ತಾ ಸಾಗಿದರು. ಅಲ್ಲದೆ ಈ ಜೋಡಿಯ ಜೊತೆಯಾಟವನ್ನು ಮುರಿಯಲು ಆಸ್ಟ್ರೇಲಿಯಾ ಕಿರಿಯರು ಸಾಕಷ್ಟು ಬೆವರಿಸಬೇಕಾಯಿತು.

ಉತ್ತಮ ಹೊಂದಾಣಿಕೆಯ ಆಟ ಪ್ರದರ್ಶಿಸಿದ ರಶೀದ್ ಹಾಗೂ ಯಶ್ ಧುಲ್ ಶತಕದ ಜೊತೆಯಾಟವಾಡಿದರು. ಇದಾದ ಬಳಿಕ ತಮ್ಮ ಜೊತೆಯಾಟವನ್ನು 200ಕ್ಕೇರಿಸಿದರು. ಪರಿಣಾಮ ಟೀಮ್ ಇಂಡಿಯಾ 200ರ ಗಡಿದಾಟಿದಾಗಲೂ ಭಾರತ ತಂಡ ಕೇವಲ 2 ವಿಕೆಟ್ ಮಾತ್ರ ಕಳೆದುಕೊಂಡಿತ್ತು. ಈ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯಶ್ ಧುಲ್ 110 ಎಸೆತಗಳಲ್ಲಿ 110 ಬಾರಿಸಿ ಮಿಂಚಿದರು. ತಮ್ಮ ಸ್ಪೋಟಕ ಇನಿಂಗ್ಸ್​ನಲ್ಲಿ 1 ಸಿಕ್ಸರ್ ಹಾಗೂ 10 ಬೌಂಡರಿಗಳನ್ನು ಬಾರಿಸಿದ್ದರು. ಮತ್ತೊಂದೆಡೆ ಶೇಖ್ ರಶೀದ್ 108 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಬೌಂಡರಿಗಳೊಂದಿಗೆ 94 ರನ್ ಸಿಡಿಸಿದರು.

ತಂಡದ ಮೊತ್ತ 241 ರನ್​ ಆಗಿದ್ದ ವೇಳೆ ಯಶ್ ಧುಲ್ (110) ವಿಕೆಟ್ ಒಪ್ಪಿಸಿದರೆ, ಇದರ ಬೆನ್ನಲ್ಲೇ ಶೇಖ್ ರಶೀದ್ (94) ಕೂಡ ಪೆವಿಲಿಯನ್​ ಕಡೆ ಮುಖ ಮಾಡಿದರು. ಅಂತಿಮ ಓವರ್​ನಲ್ಲಿ 27 ರನ್​ ಬಾರಿಸುವ ಮೂಲಕ ದಿನೇಶ್ ಮತ್ತು ನಿಶಾಂತ್ ತಂಡದ ಮೊತ್ತವನ್ನು ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್​ಗಳ ನಷ್ಟಕ್ಕೆ 290 ಕ್ಕೆ ತಂದು ನಿಲ್ಲಿಸಿದರು. ಈ ಮೂಲಕ ಆಸ್ಟ್ರೇಲಿಯಾಗೆ 291 ರನ್​ಗಳ ಕಠಿಣ ಗುರಿ ನೀಡಿದೆ.

ಟೀಮ್ ಇಂಡಿಯಾ ಅಂಡರ್-19 ತಂಡವು ಇದುವರೆಗೆ 4 ಬಾರಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದೆ. ಮೊದಲ ಬಾರಿ 2000ರಲ್ಲಿ ಮೊಹಮ್ಮದ್ ಕೈಫ್ ನೇತೃತ್ವದಲ್ಲಿ ಭಾರತ ತಂಡವು ಕಿರಿಯರ ವಿಶ್ವಕಪ್ ಗೆದ್ದರೆ, ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2008 ರಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2012 ರಲ್ಲಿ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಇನ್ನು 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು. ಇದೀಗ ನಾಲ್ಕು ಬಾರಿಯ ಚಾಂಪಿಯನ್‌ ಭಾರತ ತನ್ನ ಐದನೇ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ. ಅಷ್ಟೇ ಅಲ್ಲದೆ ಈ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಫೈನಲ್​ ಪ್ರವೇಶಿಸಿದರೆ 6 ಬಾರಿ ಫೈನಲ್​ ಆಡಿದ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಲಿದೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಮೆಗಾ ಹರಾಜಿನಲ್ಲಿ 590 ಆಟಗಾರರು: ಯಾವ ದೇಶದಿಂದ ಎಷ್ಟು ಆಟಗಾರರು? ಇಲ್ಲಿದೆ ಸಂಪೂರ್ಣ ಪಟ್ಟಿ

ಇದನ್ನೂ ಓದಿ: Jason Holder: ಡಬಲ್ ಹ್ಯಾಟ್ರಿಕ್ ಪಡೆದು ವಿಶ್ವ ದಾಖಲೆ ನಿರ್ಮಿಸಿದ ಜೇಸನ್ ಹೋಲ್ಡರ್

(India U19 vs Australia U19: Super League Semi-Final)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್