AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 540 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ ಯುವ ಪಡೆ

IND U19 vs ENG U19: ಭಾರತ ಅಂಡರ್-19 ತಂಡ ಬೆಕೆನ್‌ಹ್ಯಾಮ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಯುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ನಾಯಕ ಆಯುಷ್ ಮ್ಹಾತ್ರೆ ಅವರ ಶತಕ (102 ರನ್) ಮತ್ತು ಅಭಿಗ್ಯಾನ್ ಕುಂಡು (90 ರನ್), ರಾಹುಲ್ ಕುಮಾರ್ (85 ರನ್), ವಿಹಾನ್ ಮಲ್ಹೋತ್ರಾ (67 ರನ್) ಮತ್ತು ಆರ್.ಎಸ್. ಅಂಬರೀಶ್ (70 ರನ್) ಅವರ ಅರ್ಧಶತಕಗಳ ನೆರವಿನಿಂದ ಭಾರತ 540 ರನ್‌ಗಳಿಗೆ ಆಲೌಟ್ ಆಯಿತು.

IND vs ENG: 540 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ ಯುವ ಪಡೆ
Ind U19 Vs Eng U19
ಪೃಥ್ವಿಶಂಕರ
|

Updated on: Jul 13, 2025 | 7:51 PM

Share

ಬೆಕೆನ್‌ಹ್ಯಾಮ್‌ನ ಕೆಂಟ್ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಅಂಡರ್-19 ಮತ್ತು ಇಂಡಿಯಾ ಅಂಡರ್-19 (IND U19 vs ENG U19) ತಂಡಗಳ ನಡುವಿನ ಎರಡು ಪಂದ್ಯಗಳ ಯೂತ್ ಟೆಸ್ಟ್ ಸರಣಿ (Youth Test Series)ಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಅಂಡರ್-19 ತಂಡವು 540 ರನ್​ಗಳಿಗೆ ಆಲೌಟ್ ಆಗಿದೆ. ತಂಡದ ಪರ ನಾಯಕ ಆಯುಷ್ ಮ್ಹಾತ್ರೆ (Ayush Mhatre) ಭರ್ಜರಿ ಶತಕ ಬಾರಿಸಿದರೆ, ಅಭಿಗ್ಯಾನ್ ಕುಂಡು, ರಾಹುಲ್ ಕುಮಾರ್, ವಿಹಾನ್ ಮಲ್ಹೋತ್ರಾ ಮತ್ತು ಆರ್‌ಎಸ್ ಅಂಬರೀಶ್ ಅರ್ಧಶತಕ ಬಾರಿಸಿ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದಿದ್ದಾರೆ.

ನಾಯಕನ ಭರ್ಜರಿ ಶತಕ

ಮೊದಲ ಇನ್ನಿಂಗ್ಸ್​ನಲ್ಲಿ ಆರಂಭಿಕ ವೈಭವ್ ಸೂರ್ಯವಂಶಿ ಕೇವಲ 14 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಆದರೆ ನಾಯಕನ ಆಟವನ್ನಾಡಿದ ಆಯುಷ್ ತಮ್ಮ ಇನ್ನಿಂಗ್ಸ್​ನಲ್ಲಿ 115 ಎಸೆತಗಳನ್ನು ಎದುರಿಸಿ 14 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳ ಸಹಿತ 102 ರನ್ ಬಾರಿಸಿ ಔಟಾದರು. ಆಯುಷ್​​ಗೆ ಸಾತ್ ನೀಡಿದ ವಿಹಾನ್ ಮಲ್ಹೋತ್ರಾ ಕೂಡ 9 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 67 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಅಭಿಗ್ಯಾನ್- ರಾಹುಲ್ ಅರ್ಧಶತಕ

ಐದನೇ ಕ್ರಮಾಂಕದಲ್ಲಿ ಬಂದ ಅಭಿಗ್ಯಾನ್ ಕುಂಡು 10 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 90 ರನ್ ಬಾರಿಸಿ ಕೇವಲ 10 ರನ್​ಗಳಿಂದ ಶತಕ ವಂಚಿತರಾದರು. 6ನೇ ಕ್ರಮಾಂಕದಲ್ಲಿ ಬಂದ ರಾಹುಲ್ ಕುಮಾರ್ ಕೂಡ 14 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 85 ರನ್​ಗಳ ಕಾಣಿಕೆ ನೀಡಿದರು. ಈ ನಾಲ್ವರ ಕೊಡುಗೆಯಿಂದ ಭಾರತ ತಂಡ ಮೊದಲ ದಿನದಲ್ಲಿ 7 ವಿಕೆಟ್ ನಷ್ಟಕ್ಕೆ 450 ರನ್ ಕಲೆಹಾಕಿತ್ತು.

IND U19 vs ENG U19: ರಾಹುಲ್ ನಂತರ ಇಂಗ್ಲೆಂಡ್​ನಲ್ಲಿ ಶತಕ ಸಿಡಿಸಿದ ಆಯುಷ್ ಮ್ಹಾತ್ರೆ

540 ರನ್ ಕಲೆಹಾಕಿದ ಭಾರತ

ಇಲ್ಲಿಂದ ಎರಡನೇ ದಿನದಾಟವನ್ನು ಆರಂಭಿಸಿದ ಭಾರತದ ಇನ್ನಿಂಗ್ಸ್ ಮುಂದುವರೆಸಿದ ಅಂಬರೀಶ್ ಮತ್ತು ಹೆನಿಲ್ ಪಟೇಲ್ ಅದ್ಭುತ ಪ್ರದರ್ಶನ ನೀಡಿದರು. ಈ ಸಮಯದಲ್ಲಿ ಅಂಬರೀಶ್ ತಮ್ಮ ಅರ್ಧಶತಕವನ್ನು ಪೂರೈಸಿದಲ್ಲದೆ, ಹೆನಿಲ್ ಪಟೇಲ್ ಅವರೊಂದಿಗೆ ಅರ್ಧಶತಕದ ಪಾಲುದಾರಿಕೆಯನ್ನು ಸಹ ಪೂರ್ಣಗೊಳಿಸಿದರು, ಇದು ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 500 ರನ್‌ಗಳ ಗಡಿಯನ್ನು ತಲುಪಲು ಸಹಾಯ ಮಾಡಿತು. ಆದಾಗ್ಯೂ, ಅಂಬರೀಶ್ 70 ರನ್ ಗಳಿಸಿ ಔಟಾದರೆ ಪಟೇಲ್ 38 ರನ್ ಗಳಿಗೆ ಪೆವಿಲಿಯನ್ ಸೇರಿಕೊಂಡರು. ದೀಪೇಶ್ ದೇವೇಂದ್ರನ್ ನಾಲ್ಕು ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಅನ್ಮೋಲ್‌ಜಿತ್ ಸಿಂಗ್ ಎಂಟು ರನ್ ಗಳಿಸಿ ಅಜೇಯರಾಗಿ ಉಳಿದರು. ಇತ್ತ ಭಾರತವನ್ನು ಆಲೌಟ್ ಮಾಡಿ ಬ್ಯಾಟಿಂಗ್‌ ಆರಂಭಿಸಿರುವ ಇಂಗ್ಲೆಂಡ್‌ ತಂಡ ಈ ಸುದ್ದಿ ಬರೆಯುವ ವೇಳೆಗೆ 84 ರನ್ ಬಾರಿಸಿ ಪ್ರಮುಖ 2 ವಿಕೆಟ್​ಗಳನ್ನು ಕಳೆದುಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!