IND vs AFG: ಕೊಹ್ಲಿ ಬದಲು ಯಾರಿಗೆ ಸಿಗಲಿದೆ ಅವಕಾಶ? ಇಲ್ಲಿದೆ ಭಾರತ ಸಂಭಾವ್ಯ ತಂಡ

IND vs AFG: ಪಂದ್ಯಕ್ಕೆ ಒಂದು ದಿನ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನಾಯಕ ರೋಹಿತ್ ಶರ್ಮಾ ಜೊತೆಗೆ ಯಶಸ್ವಿ ಜೈಸ್ವಾಲ್ ಓಪನಿಂಗ್ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ವಿರಾಟ್ ಕೊಹ್ಲಿ ಆಡದಿದ್ದಲ್ಲಿ ಶುಭ್​ಮನ್ ಗಿಲ್‌ಗೆ ಮೂರನೇ ಕ್ರಮಾಂಕದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ.

IND vs AFG: ಕೊಹ್ಲಿ ಬದಲು ಯಾರಿಗೆ ಸಿಗಲಿದೆ ಅವಕಾಶ? ಇಲ್ಲಿದೆ ಭಾರತ ಸಂಭಾವ್ಯ ತಂಡ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Jan 10, 2024 | 7:06 PM

ಸುಮಾರು 14 ತಿಂಗಳ ನಂತರ ಕಿಂಗ್ ಕೊಹ್ಲಿಯನ್ನು (Virat Kohli) ಚುಟುಕು ಮಾದರಿಯಲ್ಲಿ ನೋಡಲು ಕಾತುರರಾಗಿದ್ದ ಟೀಂ ಇಂಡಿಯಾ ಅಭಿಮಾನಿಗಳಿಗೆ ಶಾಕ್ ಎದುರಾಗಿದೆ. ಪಂದ್ಯದ ಒಂದು ದಿನ ಮೊದಲು ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡವನ್ನು ಉದ್ದೇಶಿಸಿ ಮಾತನಾಡಿರುವ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid), ಕೊಹ್ಲಿ ಮೊದಲ ಪಂದ್ಯದಲ್ಲಿ ಆಡುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ದ್ರಾವಿಡ್ ಆಡದಿರುವುದಕ್ಕೆ ಸ್ಪಷ್ಟ ಕಾರಣ ನೀಡದೆ ಕೌಟುಂಬಿಕ ಕಾರಣ ನೀಡಿ ಪರ್ತಕರ್ತರ ಪ್ರಶ್ನೆಗಳಿಂದ ಬಚಾವ್ ಆಗಿದ್ದಾರೆ. ಆದರೆ ಜನವರಿ 11 ರಂದು ಕೊಹ್ಲಿ ಪುತ್ರಿ ವಮಿಕಾ ಹುಟ್ಟುಹಬ್ಬ ಎಂಬುದು ಎಲ್ಲರಿಗೂ ಗೊತ್ತು. ಅದಕ್ಕಾಗಿಯೇ ಅವರು ಕುಟುಂಬದೊಂದಿಗೆ ಈ ಸಂಭ್ರಮವನ್ನು ಆಚರಿಸಲು ಬಯಸಿದ್ದು, ಮೊದಲ ಟಿ20 ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಅಂದಹಾಗೆ, ಈಗ ಮೊದಲ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡುತ್ತಿಲ್ಲ. ಹಾಗಾದರೆ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಏನಿರಬಹುದು ಎಂಬುದನ್ನು ನೋಡುವುದಾದರೆ..

ಆರಂಭಿಕರು ಯಾರು?

ಪಂದ್ಯಕ್ಕೆ ಒಂದು ದಿನ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ನಾಯಕ ರೋಹಿತ್ ಶರ್ಮಾ ಜೊತೆಗೆ ಯಶಸ್ವಿ ಜೈಸ್ವಾಲ್ ಓಪನಿಂಗ್ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ವಿರಾಟ್ ಕೊಹ್ಲಿ ಆಡದಿದ್ದಲ್ಲಿ ಶುಭ್​ಮನ್ ಗಿಲ್‌ಗೆ ಮೂರನೇ ಕ್ರಮಾಂಕದಲ್ಲಿ ಅವಕಾಶ ನೀಡುವ ಸಾಧ್ಯತೆ ಇದೆ. ಅಲ್ಲದೆ ಶುಭಮನ್ ಗಿಲ್ ಮೂಲತಃ ಪಂಜಾಬ್‌ನವರಾಗಿರುವುದರಿಂದ ಅವರಿಗೆ ತಂಡದಲ್ಲಿ ಅವಕಾಶ ಸಿಗುವುದು ಖಚಿತ.

Breaking: ಮೊದಲ ಟಿ20 ಪಂದ್ಯಕ್ಕೆ ಕಿಂಗ್ ಕೊಹ್ಲಿ ಅಲಭ್ಯ! ಖಚಿತ ಪಡಿಸಿದ ದ್ರಾವಿಡ್

ಈ ಅಗ್ರ ಮೂರು ಬ್ಯಾಟ್ಸ್‌ಮನ್‌ಗಳ ನಂತರ ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ನೋಡುವುದಾದರೆ.. ಸಂಜು ಸ್ಯಾಮ್ಸನ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರಬಹುದು. ಜಿತೇಶ್ ಶರ್ಮಾ ಕೂಡ ತಂಡದಲ್ಲಿದ್ದರೂ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಗುವ ನಿರೀಕ್ಷೆ ಇದೆ. ಇತ್ತೀಚೆಗಷ್ಟೇ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಅದ್ಭುತ ಶತಕ ಸಿಡಿಸಿದ್ದರು. ಅಂದರೆ ಫಾರ್ಮ್‌ನಲ್ಲಿರುವ ಸಂಜುಗೆ ಮೊದಲ ಟಿ20 ಪಂದ್ಯದಲ್ಲಿ ಅವಕಾಶ ಸಿಗಬಹುದು.

ಶಿವಂ ದುಬೆಗೆ ಸಿಗುತ್ತಾ ಅವಕಾಶ?

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಶಿವಂ ದುಬೆಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಅವರು ಆಲ್ ರೌಂಡರ್ ಆಗಿ ಆಡುವುದನ್ನು ಕಾಣಬಹುದು. ಬ್ಯಾಟಿಂಗ್ ಜೊತೆಗೆ ನಾಲ್ಕು ಓವರ್ ಬೌಲ್ ಮಾಡಬಲ್ಲ ಸಾಮಥ್ಯ್ರ ದುಬೆಗಿದೆ. ರಿಂಕು ಸಿಂಗ್ ಕೂಡ ಆಡುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ, ಕೊನೆಯ ಓವರ್‌ಗಳಲ್ಲಿ ತ್ವರಿತವಾಗಿ ರನ್ ಗಳಿಸುವ ವಿಷಯದಲ್ಲಿ ಅವರಿಗೆ ಯಾರು ಸರಿಸಾಟಿ ಇಲ್ಲ. ಇದಲ್ಲದೆ, ತಂಡದಲ್ಲಿ ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ರೂಪದಲ್ಲಿ ಇಬ್ಬರು ಸ್ಪಿನ್ನರ್‌ಗಳಿದ್ದಾರೆ. ಈ ಇಬ್ಬರು ಸ್ಪಿನ್ ಜೊತೆಗೆ ಬ್ಯಾಟಿಂಗ್ ಕೂಡ ಮಾಡಬಲ್ಲರು. ಹೀಗಾಗಿ ಈ ಇಬ್ಬರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಹಾಗೆಯೇ ತಂಡದಲ್ಲಿ ಕುಲ್ದೀಪ್ ಯಾದವ್ ಮತ್ತು ರವಿ ಬಿಷ್ಣೋಯ್ ಅವರಂತಹ ಸ್ಪೆಷಲಿಸ್ಟ್ ಸ್ಪಿನ್ನರ್‌ಗಳಿದ್ದಾರೆ. ಆದರೆ ಈ ಇಬ್ಬರಲ್ಲಿ ಒಬ್ಬರಿಗೆ ಅವಕಾಶ ನೀಡಲು ಮುಂದಾದರೆ ರವಿ ಪರ ತಂಡದ ಒಲವಿರುವುದು ಖಚಿತ. ಏಕೆಂದರೆ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ರವಿ ಅದ್ಭುತ ಪ್ರದರ್ಶನ ನೀಡಿದ್ದರು. ಅದೇ ಸಮಯದಲ್ಲಿ ಅರ್ಷದೀಪ್ ಸಿಂಗ್, ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಮೂವರು ವೇಗಿಗಳಾಗಿ ಆಡುವುದು ಬಹುತೇಕ ಖಚಿತವಾಗಿದೆ.

ಮೊದಲ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಟಿ20 ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋ ಪಟೇಲ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ