IND vs AFG 1st T20I: 13 ತಿಂಗಳ ಬಳಿಕ ಟಿ20I ಗೆ ರೋಹಿತ್ ಕಮ್ಬ್ಯಾಕ್: ಎಲ್ಲರ ಕಣ್ಣು ಹಿಟ್ಮ್ಯಾನ್ ಮೇಲೆ
India vs Afghanistan 1st T20I: ಇಂದು ಭಾರತ ಹಾಗೂ ಅಫ್ಘಾನಿಸ್ತಾನ ನಡುವೆ ಮೊದಲ ಟಿ20 ಪಂದ್ಯ ಜರುಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರ ಸ್ಟೇಡಿಯಂನಲ್ಲಿ ಈ ಹೈವೋಲ್ಟೇಜ್ ಮ್ಯಾಚ್ ನಡೆಯಲಿದೆ. ಪಂದ್ಯ ಸಂಜೆ 7 ಗಂಟೆಗೆ ಶುರುವಾಗಲಿದೆ.
ದಕ್ಷಿಣ ಆಫ್ರಿಕಾ ಪ್ರವಾಸವನ್ನು ಭರ್ಜರಿ ಆಗಿ ಮುಗಿಸಿರುವ ಭಾರತ ಕ್ರಿಕೆಟ್ ತಂಡ ಇದೀಗ ಮಹತ್ವದ ಟಿ20 ಸರಣಿಗೆ ಸಜ್ಜಾಗುತ್ತಿದೆ. ಇಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರ ಸ್ಟೇಡಿಯಂನಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ (India vs Afghanistan) ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ. ಈ ಟಿ20 ಪಂದ್ಯದ ಮೂಲಕ ಸುಮಾರು ಒಂದು ವರ್ಷದ ನಂತರ ರೋಹಿತ್ ಶರ್ಮಾ ಟಿ20 ಕ್ರಿಕೆಟ್ಗೆ ಮರಳಲಿದ್ದಾರೆ. ಹೀಗಾಗಿ ಇವರ ಮೇಲೆ ಎಲ್ಲರ ಕಣ್ಣಿದೆ. ಅಂತೆಯೆ ನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ವಿರಾಟ್ ಕೊಹ್ಲಿ ಕೂಡ ಟಿ20ಗೆ ಮರಳಲಿದ್ದಾರೆ. ಆದರೆ, ಇಂದಿನ ಪಂದ್ಯಕ್ಕೆ ಲಭ್ಯರಿಲ್ಲ.
ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಓಪನರ್ಗಳಾಗಿ ರೋಹಿತ್ ಶರ್ಮಾ ಜೊತೆ ಯಶಸ್ವಿ ಜೈಸ್ವಾಲ್ ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ. ಕೊಹ್ಲಿ ವೈಯಕ್ತಿಕ ಕಾರಣದಿಂದ ಇಂದಿನ ಪಂದ್ಯ ಆಡುತ್ತಿಲ್ಲ. ಹೀಗಾಗಿ ಶುಭ್ಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕೆಎಲ್ ರಾಹುಲ್ ಇಲ್ಲದ ಕಾರಣ ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ. ತಿಲಕ್ ವರ್ಮಾ, ರಿಂಕು ಸಿಂಗ್ ತಂಡದಲ್ಲಿ ಇರಲಿದ್ದಾರೆ.
IND vs AFG: ಟೀಮ್ ಇಂಡಿಯಾ ಆರಂಭಿಕ ಜೋಡಿ ಯಾರು? ಇಲ್ಲಿದೆ ಉತ್ತರ
ಭಾರತ ಪರ ಆಲ್ರೌಂಡರ್ ಜವಾಬ್ದಾರಿ ಅಕ್ಷರ್ ಪಟೇಲ್ ವಹಿಸುವ ಸಾಧ್ಯತೆ ಇದೆ. ವೇಗಿಗಳಾಗಿ ಅರ್ಶ್ದೀಪ್ ಸಿಂಗ್, ಆವೇಶ್ ಖಾನ್, ಮುಖೇಶ್ ಕುಮಾರ್ ಪೈಕಿ ಇಬ್ಬರು ಸ್ಥಾನ ಪಡೆಯಬಹುದು. ಕುಲ್ದೀಪ್ ಯಾದವ್ ಮತ್ತು ರವಿ ಬೊಷ್ಟೋಯಿ ಸ್ಪಿನ್ ಆಯ್ಕೆ ಆಗಿದ್ದಾರೆ.
ಇತ್ತ ಅಫ್ಘಾನಿಸ್ತಾನ ತಂಡವನ್ನು ಇಬ್ರಾಹಿಂ ಜರ್ದಾನ್ ನಾಯಕನಾಗಿ ಮುನ್ನಡೆಸಲಿದ್ದಾರೆ. ನಿಯಮಿತ ಟಿ20 ನಾಯಕ ರಶೀದ್ ಖಾನ್ ಅವರು ಇಂಜುರಿಯಿಂದಾಗಿ ಭಾರತ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಮುಜೀಬ್ ಉರ್ ರೆಹಮಾನ್ ಮತ್ತೊಮ್ಮೆ ತಂಡಕ್ಕೆ ಮರಳಿದ್ದಾರೆ. ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ ಕೂಡ ತಂಡದಲ್ಲಿದ್ದಾರೆ. ಅನುಭವಿ ಮೊಹಮ್ಮದ್ ನಬಿ, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್ ಉಲ್ ಹಕ್, ನೂರ್ ಅಹ್ಮದ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್.
ಅಫ್ಘಾನಿಸ್ತಾನ ತಂಡ: ಇಬ್ರಾಹಿಂ ಝದ್ರಾನ್ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಂ, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ