IND vs AFG: ಇಂದು ಭಾರತ-ಅಫ್ಘಾನಿಸ್ತಾನ್ ನಡುವಣ ಮೊದಲ ಟಿ20 ಪಂದ್ಯ

India vs Afghanistan: ಈ ಸರಣಿ ಮೊದಲ ಪಂದ್ಯಕ್ಕೆ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​​ಐಎಸ್​ ಬಿಂದ್ರಾ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಅದಕ್ಕೂ ಮುನ್ನ 6.30 ಕ್ಕೆ ಟಾಸ್ ಪ್ರಕ್ರಿಯೆ ಜರುಗಲಿದೆ.

IND vs AFG: ಇಂದು ಭಾರತ-ಅಫ್ಘಾನಿಸ್ತಾನ್ ನಡುವಣ ಮೊದಲ ಟಿ20 ಪಂದ್ಯ
India vs Afghanistan
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jan 11, 2024 | 2:46 PM

ಭಾರತ ಮತ್ತು ಅಫ್ಘಾನಿಸ್ತಾನ್ (India vs Afghanistan) ನಡುವಣ ಟಿ20 ಸರಣಿಯು ಇಂದಿನಿಂದ (ಜ.11) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ ಮೊಹಾಲಿಯಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಇಂದಿನ ಪಂದ್ಯದಲ್ಲಿ ಕೊಹ್ಲಿ ಕಣಕ್ಕಿಳಿಯುತ್ತಿಲ್ಲ. ಅತ್ತ ಅಫ್ಘಾನಿಸ್ತಾನ್ ತಂಡದ ಆಲ್​ರೌಂಡರ್ ರಶೀದ್ ಖಾನ್ ಈ ಸರಣಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರು ಕೂಡ 3 ಪಂದ್ಯಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಎಷ್ಟು ಗಂಟೆಗೆ ಪಂದ್ಯ ಶುರು?

ಈ ಸರಣಿ ಮೊದಲ ಪಂದ್ಯಕ್ಕೆ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​​ಐಎಸ್​ ಬಿಂದ್ರಾ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿದೆ. ಅದಕ್ಕೂ ಮುನ್ನ 6.30 ಕ್ಕೆ ಟಾಸ್ ಪ್ರಕ್ರಿಯೆ ಜರುಗಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯದ ನೇರ ಪ್ರಸಾರವು ಸ್ಪೋರ್ಟ್ಸ್​ 18 ಚಾನೆಲ್​ನಲ್ಲಿ ಇರಲಿದೆ. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಉಭಯ ತಂಡಗಳು ಈ ಕೆಳಗಿನಂತಿದೆ:

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

ಇದನ್ನೂ ಓದಿ: ನನಗೆ RCB ಪರ ಆಡೋದು ಇಷ್ಟವಿರಲಿಲ್ಲ, ಬೆದರಿಸಿ ಆಡ್ಸಿದ್ರು..!

ಅಫ್ಘಾನಿಸ್ತಾನ್ ತಂಡ: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ಇಬ್ರಾಹಿಂ ಝದ್ರಾನ್ (ನಾಯಕ) , ಹಝರತುಲ್ಲಾ ಝಝೈ , ನಜಿಬುಲ್ಲಾ ಝದ್ರಾನ್ , ಮೊಹಮ್ಮದ್ ನಬಿ , ಅಜ್ಮತುಲ್ಲಾ ಒಮರ್​ಝೈ , ಮುಜೀಬ್ ಉರ್ ರಹಮಾನ್ , ಶರಫುದ್ದೀನ್ ಅಶ್ರಫ್ , ಖೈಸ್ ಅಹ್ಮದ್ , ನವೀನ್ -ಉಲ್-ಹಕ್, ಫಝಲ್​ ಹಕ್ ಫಾರೂಖಿ, ನೂರ್ ಅಹ್ಮದ್, ಮೊಹಮ್ಮದ್ ಸಲೀಂ ಶಫಿ, ಕರೀಂ ಜನತ್ , ಇಕ್ರಮ್ ಅಲಿಖಿಲ್ , ಫರೀದ್ ಅಹ್ಮದ್ ಮಲಿಕ್ , ರಹಮತ್ ಶಾ , ಗುಲ್ಬದಿನ್ ನೈಬ್.

Published On - 6:21 am, Thu, 11 January 24

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ